ನರೇಗಾ ಅನುಷ್ಠಾನದಲ್ಲಿ ಕರ್ನಾಟಕ ಮಾದರಿ
ಪ್ರಸಕ್ತ ವರ್ಷ 20 ಕೋಟಿಮಾನವದಿನಗಳ ಸೃಜನೆ ಗುರಿ: ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ
Team Udayavani, Sep 13, 2021, 2:11 PM IST
ಬಳ್ಳಾರಿ: ನರೇಗಾದಡಿ ಬಾಕಿ ಇರುವ 959 ಕೋಟಿ ರೂ. ಹಾಗೂ ಹೆಚ್ಚುವರಿಯಾಗಿ 117 ಕೋಟಿ ರೂ. ಹಣವನ್ನು ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಜಿಪಂಕಚೇರಿಸಭಾಂಗಣದಲ್ಲಿಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ ಸಿಂಗ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ನರೇಗಾ ಅಡಿಯಲ್ಲಿ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ನನ್ನ ಮನವಿ ಪರಿಗಣಿಸಿರುವ ಬಾಕಿ ಹಣ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ನಿಗದಿತ ಗುರಿಗಿಂತಲೂ ಹೆಚ್ಚು 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿರುವ ಕರ್ನಾಟಕ, ಪ್ರಸಕ್ತ ವರ್ಷ 20 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
2020-21ನೇಸಾಲಿನಲ್ಲಿನರೇಗಾಯೋಜನೆಯಡಿ 13 ಕೋಟಿ ಮಾನವ ದಿನಗಳ ಸೃಜನೆ ಮಾಡುವ ಗುರಿ ಹೊಂದಲಾಗಿತ್ತು. ಈ ನಿಗದಿತ ಗುರಿಯನ್ನು 2020 ನವೆಂಬರ್ ತಿಂಗಳಲ್ಲಿ ಸಾಧಿಸಲಾಯಿತು. ಇನ್ನುಳಿದ ನಾಲ್ಕು ತಿಂಗಳ ಅವಧಿಯೊಳಗೆ ಹೆಚ್ಚುವರಿಯಾಗಿ 2 ಕೋಟಿ ಸೇರಿ ಒಟ್ಟು 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡಲಾಯಿತು. ದೇಶದಲ್ಲೇ ಅತಿಹೆಚ್ಚು ಮಾನವ ದಿನ ಸೃಜನೆ ಮಾಡುವ ಮೂಲಕ ನರೇಗಾ ಅನುಷ್ಠಾನದಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನದಲ್ಲಿತ್ತು. ಇನ್ನು ಪ್ರಸಕ್ತ 2021-22ನೇ ಸಾಲಿಗೂ ಕೇಂದ್ರ ಸರ್ಕಾರ 13 ಕೋಟಿ ಗುರಿ ನೀಡಲಾಗಿದ್ದು, ಸೆಪ್ಟೆಂಬರ್ 11ಕ್ಕೆ 9 ಕೋಟಿ ಗುರಿ ಸಾಧಿಸಲಾಗಿದೆ. ಈಚೆಗೆ ದೆಹಲಿಯಲ್ಲಿ ಕೇಂದ್ರದ ಗ್ರಾಮೀಣಾಭಿವೃದ್ದಿ ಸಚಿವ ಗಿರಿರಾಜ್ ಸಿಂಗ್ ಅವರನ್ನು ಭೇಟಿಯಾಗಿ ಮಾನವ ದಿನಗಳನ್ನು20ಕೋಟಿಗೆ ಹೆಚ್ಚಿಸಲು ಮನವಿ ಮಾಡಿಕೊಂಡಿದ್ದು, ಹೆಚ್ಚಿಸುವ ಭರವಸೆಯಿದೆ. ಈ ಮೂಲಕ ಪ್ರಸಕ್ತ ವರ್ಷವೂ ಕೂಡ ಅತಿ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿ ದೇಶಕ್ಕೆ ಮಾದರಿಯಾಗಲಿದೆ ಎಂದರು.
28 ಸಾವಿರ ಕೆರೆಗಳ ಜೀಣೋದ್ಧಾರ: ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜಿಪಂ ವ್ಯಾಪ್ತಿಯಲ್ಲಿನ 41 ಕೆರೆಗಳು ಸೇರಿ ರಾಜ್ಯದಲ್ಲಿರುವ28 ಸಾವಿರಕೆರೆಗಳನ್ನು ಮುಂದಿನ ಒಂದೂವರೆ ವರ್ಷದಲ್ಲಿ ಜೀಣೊìದ್ಧಾರ ಮಾಡುವ ಗುರಿ ಇದೆ. ಜಿಪಂ ವ್ಯಾಪ್ತಿಯಲ್ಲಿನ ಈ ಕೆರೆಗಳನ್ನು ಗ್ರಾಪಂಗೆ ವಹಿಸಲಾಗಿದ್ದು, ಅವರು ಕೆರೆಗಳನ್ನು ಅಭಿವೃದ್ಧಿಪಡಿಸಲಿದ್ದಾರೆ. ಈ ಕಾರ್ಯ ಈಗಾಗಲೇ ಶುರುವಾಗಿದ್ದು, ಗ್ರಾಪಂ ಆಡಳಿತ ಮಂಡಳಿ ಇದರ ಬಗ್ಗೆ ಹೆಚ್ಚಿನ ಗಮನಹರಿಸಿ, ಸಂಘ ಸಂಸ್ಥೆಗಳ ನೆರವಿನೊಂದಿಗೆ ಕೆರೆಗಳ ಜೀರ್ಣೋದ್ಧಾರ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಒಂದು ವೇಳೆ ಕೆರೆ ಒತ್ತುವರಿಯಾಗಿದ್ದಲ್ಲಿ ಅದು ಪ್ರಭಾವಿಗಳಾದರೂ ಸರಿ ತೆರವುಗೊಳಿಸಿ ಕೆರೆ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು.
ನರೇಗಾ ಯೋಜನೆಯಡಿ ಸಣ್ಣ ರೈತರು ಕೂಲಿ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಮ್ಮ ಜಮೀನಿನ ವ್ಯಾಪ್ತಿಯಲ್ಲಿ ಬದು ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಮಳೆ ನೀರಿನ ಹರಿಯವಿಕೆ ತಡೆಯುತ್ತದೆ. ಕೆರೆ, ಕಲ್ಯಾಣಿ, ಗೋ ಕಟ್ಟೆಗಳನ್ನು ನಿರ್ಮಿಸಲಾಗುತ್ತಿದೆ. ಹಳೆ ಕಾಲದ ಬಾವಿಗಳಿಗೆಹೊಸ ರೂಪ ನೀಡುವಮೂಲಕಅವುಗಳ ಜೀರ್ಣೋದ್ಧಾರ ಮಾಡಲಾಗುತ್ತದೆ. ಯೋಜನೆಯಡಿ ಕೆಲಸ ಮಾಡಲು ಮುಂದೆ ಬರುವವರಿಗೆ ಇವತ್ತಿಗೂ ಜಾಬ್ ಕಾರ್ಡ್ ನೀಡಲಾಗುತ್ತಿದೆ. ಅವ್ಯವಹಾರ ತಡೆಯುವ ಉದ್ದೇಶದಿಂದ ಕೂಲಿ ಹಣವನ್ನು ನೇರವಾಗಿ ಕೆಲಸ ಮಾಡಿದವರ ಬ್ಯಾಂಕ್ ಖಾತೆಗಳಿಗೆ 15 ದಿನದೊಳಗೆ ಜಮೆ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಮನೆ ಮನೆಗೆ ಗಂಗೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲಜೀವನ್ ಮಿಷನ್ ಯೋಜನೆಯಡಿ 2024ರೊಳಗಾಗಿ ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೆ ಗಂಗೆ ಎಂಬ ಧ್ಯೇಯದೊಂದಿಗೆ ಹಳ್ಳಿಗಳಲ್ಲಿ ಮನೆಮನೆಗೆಕುಡಿಯುವ ನೀರುಒದಗಿಸಲಾಗುತ್ತದೆ. ಕೇಂದ್ರ ಸರ್ಕಾರ ಈ ಮಹತ್ವಾಕಾಂಕ್ಷಿಯೋಜನೆಯನ್ನು ಈಗಾಗಲೇ ಕಾರ್ಯ ರೂಪಕ್ಕೆ ಬಂದಿದ್ದು, ಪ್ರತಿ ಮನೆಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತದೆ. ಇಡೀ ದೇಶದಲ್ಲಿ ಜೆಜೆಎಂ ಯೋಜನೆಯಕಾಮಗಾರಿಗಳುವೇಗವಾಗಿ ಸಾಗುತ್ತಿವೆ ಎಂದು ಅವರು ತಿಳಿಸಿದರು.
ಕ್ಯಾಚ್‌ದರೇನ್‌ಕಾರ್ಯಕ್ರಮ:ಎಲ್ಲರಿಗೂಉದ್ಯೋಗ ಒದಗಿಸುವುದು ಮತ್ತು ಯಾರೂ ಉಪವಾಸದಿಂದ ಇರದಂತೆ ನೋಡಿಕೊಳ್ಳುವ ದೃಷ್ಟಿಯಿಂದ ನರೇಗಾ ಕಾಮಗಾರಿಗಳನ್ನು ಎಲ್ಲ ಕಡೆ ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ. ಇನ್ನೂ ಹೆಚ್ಚಿನ ಜನರು ನರೇಗಾ ಕಾಮಗಾರಿಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಸದುದ್ದೇಶದಿಂದ ಪ್ರಧಾನ ಮಂತ್ರಿ ಕ್ಯಾಚ್ ರೈನ್ ಕಾರ್ಯಕ್ರಮವನ್ನು ನರೇಗಾ ಅಡಿಯಲ್ಲಿ ಜಾರಿಗೆ ತರಲಾಗುತ್ತಿದೆ. ಮಳೆ ನೀರು ಹರಿದು ಹೋಗದಂತೆ ತಮ್ಮ ತಮ್ಮ ಮನೆಯ ವ್ಯಾಪ್ತಿಯಲ್ಲಿ ನೀರು ಇಂಗಿಸುವಿಕೆ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲ ಹೆಚ್ಚಳವಾಗುತ್ತದೆ. ಇದಕ್ಕೆ ಸಹಕಾರ ನೀಡಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ರವಿಶಂಕರ್ ಗುರೂಜಿ ಮುಂದೆ ಬಂದಿದ್ದು, ಅವರ ತಂತ್ರಜ್ಞಾನ ತಂಡ ಯಾವುದೇ ಅನುದಾನ ಪಡೆಯದೆ ಉಚಿತವಾಗಿ ಸಹಕಾರ ನೀಡುತ್ತಿದೆ ಎಂದವರು ವಿವರಿಸಿದರು.
ಹೊಸದಾಗಿ ಚುನಾಯಿತರಾದ ಗ್ರಾಪಂ ಸದಸ್ಯರಿಗೆ ಆಡಳಿತ ವ್ಯವಸ್ಥೆಯ ಕಾರ್ಯವೈಖರಿ, ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಯೋಜನೆಗಳು ಸೇರಿದಂತೆ ಹಲವಾರು ವಿಷಯಗಳಕುರಿತು ತರಬೇತಿ ನೀಡಲಾಗುತ್ತಿದೆ. ತುಮಕೂರು, ಚಿಕ್ಕ ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತರಬೇತಿ ನಡೆದಿದ್ದು, ವಿಧಾನಸಭೆ ಅಧಿವೇಶನದ ನಂತರ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ನಡೆಸುವ ಉದ್ದೇಶವಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.