ಕಸಾಪ ಪದಾಧಿಕಾರಿಗಳ ಪದಗ್ರಹಣ
Team Udayavani, Apr 6, 2022, 5:31 PM IST
ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಘಟಕದ ಪದಾಧಿ ಕಾರಿಗಳ ಪದಗ್ರಹಣ ಕಾರ್ಯಕ್ರಮ ಸೋಮವಾರ ನಡೆಯಿತು.
ಗ್ರಾಮೀಣ ಡಿವೈಎಸ್‌ಪಿ ಎಂ.ಜಿ. ಸತ್ಯನಾರಾಯಣರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕನ್ನಡದ ತಾಯಿಬೇರು ಹಳ್ಳಿಗಳು. ಹಾಗಾಗಿ ಕನ್ನಡ ಸಾಹಿತ್ಯ-ಸಂಸ್ಕೃತಿ ಜನಪದ ಉಳಿವಿಗಾಗಿ ಸಾಹಿತ್ಯ ಪರಿಷತ್ತಿನ ಪದಾ ಧಿಕಾರಿಗಳು ಹೆಚ್ಚು ಹೆಚ್ಚು ಗ್ರಾಮಾಂತರ ಪ್ರದೇಶಗಳಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿ ಅವರಲ್ಲಿರುವ ಕನ್ನಡ ಸಾಹಿತ್ಯದ ಸೊಗಡನ್ನು ಹೊರತರಬೇಕು. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗ್ರಾಮೀಣ ಘಟಕವು ತುಂಬಾ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿರುದ್ರಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ತಾಲೂಕು ಸಮ್ಮೇಳನ, ಹೋಬಳಿ ಸಮ್ಮೇಳನ ಮಾಡುವುದರ ಮೂಲಕ ಕನ್ನಡದ ಸಾಹಿತ್ಯ ಅಭಿಮಾನಿಗಳನ್ನು ಒಗ್ಗೂಡಿಸಿ ಕನ್ನಡ ಕಟ್ಟುವ ಕೆಲಸ ಸಾಂಗೋಪವಾಗಿ ಸಾಗಲಿ ಅದಕ್ಕೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ಹಂದಿಹಾಳ್ ಶಿವಲಿಂಗಪ್ಪ, ನಿಕಟಪೂರ್ವ ಅಧ್ಯಕ್ಷ ಪುರುಷೋತ್ತಮ ಹಂದ್ಯಾಳ್, ಕಪ್ಪಗಲ್ಲು ಗ್ರಾಪಂ ಅಧ್ಯಕ್ಷ ಪಾರ್ವತಮ್ಮ ಓಂಕಾರಪ್ಪ, ಉಪಾಧ್ಯಕ್ಷೆ ಸಾವಿತ್ರಮ್ಮ ಕೋರಿ ಬಸವರಾಜ, ಎಸ್‌ಡಿಎಂಸಿ ಅಧ್ಯಕ್ಷ ನಾಗೇಂದ್ರಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಚೈತನ್ಯ ಕಾಲೇಜ್ ನಿರ್ದೇಶಕ ಡಾ| ಪಿ. ರಾಧಾಕೃಷ್ಣ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಾಜಿರಾವ್, ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.