ಕೃಷಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ

ಬೀಜ-ರಸಗೊಬ್ಬರ-ಔಷಧಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು: ಬಿ.ಸಿ. ಪಾಟೀಲ್‌

Team Udayavani, Apr 10, 2020, 1:16 PM IST

10-April-12

ಕಂಪ್ಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರನ್ನು ಕ್ಷೇತ್ರದ ಬಿಜೆಪಿ ಮುಖಂಡರು ಸ್ವಾಗತಿಸಿದರು.

ಕಂಪ್ಲಿ: ರಾಜ್ಯದ ರೈತರಿಗೆ ಬೀಜ, ರಸಗೊಬ್ಬರ ಹಾಗೂ ಔಷಧಗಳ ಕೊರತೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು. ಅವರು ತಾಲೂಕಿನ ಮೆಟ್ರಿ ಗ್ರಾಮದಲ್ಲಿ ರೈತರ ಪರಿಸ್ಥಿತಿ ಬಗ್ಗೆ ಚರ್ಚಿಸಿ ಮಾತನಾಡಿದರು. ರೈತರ ಪರಿಸ್ಥಿತಿ ಅಧ್ಯಯನ ಮಾಡಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ರೈತರು ಬೆಳೆದ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಸಿಗಬೇಕು.

ದೈನಂದಿನ ಕೃಷಿ ಚಟುವಟಿಕೆಗಳನ್ನು ಮಾಡಿಕೊಂಡು ಹೋಗಬೇಕು. ಇದಕ್ಕೆ ಯಾವುದೇ ನಿರ್ಬಂಧಗಳಿರಬಾರದು. ಎಲ್ಲಾ ರೈತರು ಒಬ್ಬರಿಗೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ವೈರಸ್‌ ಅತ್ಯಂತ ಕೆಟ್ಟದ್ದಾಗಿದ್ದು, ಇದನ್ನು ನಿಯಂತ್ರಿಸಲು ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವೆಂದ ಅವರು, ಈಗಾಗಲೇ ಎರಡು ತಿಂಗಳ ಪಡಿತರ ವಿತರಣೆ ಮಾಡುತ್ತಿದ್ದು, ಸಾರ್ವಜನಿಕರಿಗೆ ತಲುಪಿದೆಯೇ ಇಲ್ಲವೋ ಎಂದು ಉತ್ತರ ಪಡೆದರು.

ಬ್ಯಾಡಗಿ ಮಾರುಕಟ್ಟೆ ಆರಂಭವಿಲ್ಲ: ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಮೆಣಸಿನಕಾಯಿ ಬೆಳೆಯುತ್ತಿದ್ದು, ಬ್ಯಾಡಗಿ ಮಾರುಕಟ್ಟೆ ದೊಡ್ಡ ಮಾರುಕಟ್ಟೆಯಾಗಿದ್ದು, ಪ್ರತಿದಿನ 30-40ಸಾವಿರ ಜನ ಸೇರುವುದರಿಂದ ಸಧ್ಯದಲ್ಲಿ ಅದನ್ನು ಆರಂಭಿಸುವುದಿಲ್ಲ, ಕೆಲವು ದಿನ ರೈತರು ತಾಳಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸೋಣ ಎಂದರು.

ಭತ್ತ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯ: ಪಟ್ಟಣದಲ್ಲಿ ಅಕಾಲಿಕ ಗಾಳಿ ಮಳೆಯಿಂದ ಸಾವಿರಾರು ಎಕರೆ ಭತ್ತ ಹಾಗೂ ಬಾಳೆ ನೆಲಕ್ಕಚ್ಚಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದು, ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದಾಗ ಉತ್ತರಿಸಿದ ಸಚಿವರು, ಕಂದಾಯ ಅಕಾರಿಗಳಿಗೆ ಸಮೀಕ್ಷೆಗೆ ಸೂಚಿಸಲಾಗಿದ್ದು, ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು. ರೈತರು ಸೂಕ್ತ ದಾಖಲೆಗಳನ್ನು ಹೊಂದಿರುವಂತೆ ಸೂಚಿಸಿದ ಅವರು, ಪಟ್ಟಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಬಿಜೆಪಿ ಮುಖಂಡ ಪಿ.ಬ್ರಹ್ಮಯ್ಯ, ಬಿ.ಸಿದ್ದಪ್ಪ, ಜಿ.ಸುಧಾಕರ್‌, ಕೊಡಿದಲ್‌ ರಾಜು, ಪುರಸಭೆ ಸದಸ್ಯರಾದ ಹೂಗಾರ ರಮೇಶ್‌ ಸೇರಿದಂತೆ ಕೆಲವೇ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.