KRPP; ಜನಾರ್ದನ ರೆಡ್ಡಿ ಪತ್ನಿ ವಿರುದ್ಧ ಪ್ರಕರಣ ದಾಖಲು
ಚುನಾವಣ ಆಯೋಗಕ್ಕೆ ಸುಳ್ಳು ಮಾಹಿತಿ
Team Udayavani, Mar 7, 2024, 10:55 PM IST
ಬಳ್ಳಾರಿ: ಚುನಾವಣಾ ಆಯೋಗಕ್ಕೆ ಸುಳ್ಳುಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂಬ ದೂರಿನ ಮೇರೆಗೆ ಕೆಆರ್ಪಿಪಿ ಪಕ್ಷದ ಪರಾಜಿತ ಅಭ್ಯರ್ಥಿ, ಗಾಲಿ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಅವರ ಮೇಲೆ ಗಾಂಧಿನಗರ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಕೆಆರ್ಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪತ್ನಿಲಕ್ಷ್ಮೀ ಅರುಣಾ ಅವರು, ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಕೆಲವೊಂದು ಕೊಡಲಾಗದ ವಿಷಯಗಳನ್ನು ಪ್ರಸ್ತಾಪಿಸದೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಜನವರಿ ತಿಂಗಳಲ್ಲಿ ಶ್ರೀನಿವಾಸ ರೆಡ್ಡಿ ಎನ್ನುವವರು ಗಾಂಧಿನಗರ ಠಾಣೆಯಲ್ಲಿ ದೂರು ನೀಡಿದ್ದರು.
ಆ ಸನ್ನೆ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಕೋರಿದ್ದರು. ಚುನಾವಣೆ ನಡೆದು ಏಳು ತಿಂಗಳ ಬಳಿಕ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಪರಿಶೀಲಿಸಿ ಎಫ್ಐಆರ್ ದಾಖಲಿಸಲು ಮಾ.೬ ರಂದು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕೆಆರ್ಪಿ ಪಕ್ಷದ ಪರಾಜಿತ ಅಭ್ಯರ್ಥಿ ಲಕ್ಷ್ಮೀ ಅರುಣಾ ಅವರ ವಿರುದ್ಧ ಗಾಂಧಿನಗರ ಠಾಣೆಯಲ್ಲಿ ಆರ್ಪಿ ಆಕ್ಟ್ ನಡಿ ಗುರುವಾರ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.