ವಿದ್ಯಾರ್ಥಿಗಳಿಗೆ ಹಬದಾಚರಣೆ ಮಹತ್ವ ತಿಳಿದಿರಲಿ
ಜೋಳದ ರಾಶಿಗೆ ಪೂಜೆ ಸಲ್ಲಿಸಿ ಜ್ಞಾನಭಾರತಿ ಕಾಲೇಜಿನಲ್ಲಿ ಸಂಕ್ರಾಂತಿ ಸುಗ್ಗಿಹಬ್ಬ ಆಚರಣೆ
Team Udayavani, Jan 16, 2020, 12:42 PM IST
ಕೂಡ್ಲಿಗಿ: ಹಬ್ಬಗಳು ಜನತೆ ಬದುಕಿನ ಜೀವನಾಡಿಯಾಗಿದ್ದು ಮನುಷ್ಯ ಮನುಷ್ಯರ ಮಧ್ಯೆ ಬಾಂಧವ್ಯ ಬೆಸೆಯುವ ಮೂಲಕ ದಿನನಿತ್ಯದ ಜಂಜಡಗಳ ನಡುವೆಯೂ ಬದುಕಿನ ಸಾಮರಸ್ಯವನ್ನು ಹಬ್ಬಗಳಲ್ಲಿ ಕಾಣಬಹುದಾಗಿದೆ ಎಂದು ತಹಶೀಲ್ದಾರ್ ಎಸ್. ಮಹಾಬಲೇಶ್ವರ ಹೇಳಿದರು.
ಅವರು ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸುಗ್ಗಿಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅನೇಕ ಹಬ್ಬಗಳನ್ನು ಜಾತಿ, ಮತ, ಧರ್ಮ ಮೀರಿ ಆಚರಣೆ ಮಾಡಲಾಗುತ್ತದೆ. ಅದರಲ್ಲೂ ಸಂಕ್ರಾಂತಿ ಹಬ್ಬವನ್ನು ಬೇರೆ ಬೇರೆ ಹೆಸರಿನಲ್ಲಿ ದೇಶದಾದ್ಯಂತ ಎಲ್ಲ ಸಮುದಾಯದವರು ಆಚರಣೆ ಮಾಡುತ್ತಿದ್ದಾರೆ. ಸುಗ್ಗಿ ಕಾಲದಲ್ಲಿ ಆಚರಣೆ ಮಾಡುವ ಸಂಕ್ರಾಂತಿ ರೈತರ ಹಬ್ಬವಾಗಿದೆ.
ಈ ಹಿಂದೆ ರೈತರು ತಾವು ಬೆಳೆದ ಬೆಳೆಗಳನ್ನು ಒಕ್ಕುಲತನ ಮಾಡಿ ರಾಶಿ ಹಾಕಿ ಪೂಜೆ ಮಾಡುವುದು ವಿಶೇಷವಾಗಿದೆ. ಆದರೆ ಆಧುನಿಕ ಯುಗದಲ್ಲಿ ಈ ಸಂಸ್ಕೃತಿ ಮರೆಯಾಗುತ್ತಿರುವುದು ವಿಪರ್ಯಾಸ ಎಂದು ಹೇಳಿದರು.
ಲೇಖಕ ಹಿ.ಮ. ಬಸವರಾಜ ಮಾತನಾಡಿ, ರೈತರ ಕಣಗಳು ಮಾಯವಾಗಿದ್ದು, ಒಕ್ಕಣೆಗಳು ರಸ್ತೆಗೆ ಬಂದಿವೆ. ಹೊಲಗಳು ಸೋಲಾರ್ ವಿದ್ಯುತ್ ಉತ್ಪಾದನಾ ಕೇಂದ್ರಗಳಾಗಿ ಮಾರ್ಪಟ್ಟಿವೆ. ಇದರಿಂದ ರೈತ ಸಂಸ್ಕೃತಿಯೇ ಹಾಳಾಗುತ್ತಿದ್ದು,
ಮುಂದಿನ ಪೀಳಿಗೆಗೆ ಒಕ್ಕುಲುತನ ಏನು ಎಂಬುದೇ ಮರೆತುಹೋಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಂ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಶಿಕಲಾ, ಜ್ಞಾನ ಭಾರತಿ ವಿದ್ಯಾ ಸಂಸ್ಥೆಯ ಆಡಳಿತಾ ಧಿಕಾರಿ ಕೆ.ಎಂ. ರಶ್ಮಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸೈಯದ್ ಶುಕಾರ್, ಬಾಸುನಾಯ್ಕ ವೇದಿಕೆಯಲ್ಲಿದ್ದರು. ಇದಕ್ಕೂ ಮೊದಲು ಸಿಂಗರಿಸಿದ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಅತಿಥಿಗಳನ್ನು ವೇದಿಕೆಗೆ ಕರತರಲಾಯಿತು.
ನಂತರ ಜೋಳದ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.