ಕುರುಗೋಡು: ನೆನಗುದಿಗೆ ಬಿದ್ದಿದ್ದ ಹೂಳು ಎತ್ತುವ ಕಾರ್ಯಕ್ಕೆ ಚಾಲನೆ!
Team Udayavani, Jun 10, 2022, 2:42 PM IST
ಕುರುಗೋಡು:ಸಮೀಪದ ಎಂ. ಸೂಗೂರು ಗ್ರಾಪಂ ವ್ಯಾಪ್ತಿಯ ಮಣ್ಣೂರು ಗ್ರಾಮದ 1ನೇ ವಾರ್ಡಿನ ಪರಿಶಿಷ್ಟ ಜಾತಿ ಕಾಲೋನಿ ಯ ಕೆಂಚಮ್ಮ ದೇವಸ್ಥಾನ ದಲ್ಲಿ ಬಹಳ ದಿನಗಳಿಂದ ಚರಂಡಿ ಬ್ಲಾಕ್ ಆಗಿ ಸುತ್ತ ಮುತ್ತ ಗಿಡ ಗಂಟೆಗಳು ಬೆಳದು ಹದೆಗೆಟ್ಟು ಹೋಗಿದ್ದು, ಚರಂಡಿ ನೀರು ಎಲ್ಲೆಂದರಲ್ಲಿ ಸಂಗ್ರಹ ಗೊಂಡು ರಸ್ತೆಯ ಮೇಲೆ ಹರಿಯುತ್ತಿದೆ.
ಈ ಬಗ್ಗೆ ಅನೇಕ ಬಾರಿ ಗ್ರಾಪಂ ಆಡಳಿತಕ್ಕೆ ತಿಳಿಸಿದರು ಇತ್ತಕಡೆ ಗಮನಹರಿಸದೆ ಮೌನ ವಹಿಸಲಾಗಿದೆ. ಇದರಿಂದ ಅಲ್ಲಿ ವಾಸಿಸುವ ಜನರಿಗೆ ನಿತ್ಯ ಅಂಗೈಯಲ್ಲಿ ಜೀವ ಹಿಡಿದುಕೊಂಡು ವಾಸಿಸಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ. ಅಲ್ಲದೆ ಸಂಜೆ ವೇಳೆ ಸೊಳ್ಳೆಗಳ ಕಾಟ ಹೆಚ್ಚಾಗಿ ಅನೇಕ ರೋಗಕ್ಕೆ ತುತ್ತಾಗಬೇಕಾಗಿದೆ. ಇನ್ನೂ ವಿಷ ಜಂತುಗಳು ಮನೆ ಮಾಡಿವೆ. ಇದರಿಂದ ನಿತ್ಯ ಭಯದಲ್ಲಿ ಕಾಲ ಕಾಲಕಳೆಯಬೇಕಾಗಿದೆ. ಈ ಸಮಸ್ಯೆಗಳನ್ನು ಗ್ರಾಪಂ ಸದಸ್ಯೆ ಮುತ್ತಮ್ಮ, ಸೋಮಪ್ಪ ಛಲವಾದಿ ಅರಿತು ಗ್ರಾಪಂ ಆಡಳಿತಕ್ಕೆ ಒತ್ತಾಯ ಮಾಡಿ ಚರಂಡಿಯಲ್ಲಿ ಹೂಳು ಎತ್ತುವುದರ ಜೊತೆಗೆ ಸುತ್ತಮುತ್ತ ಸ್ವಚ್ಛತೆ ಕಾರ್ಯ ಕೈಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವಲ್ಲಿ ನೆರವಾಗಿದ್ದಾರೆ.
ಈ ಸಂದರ್ಭದಲ್ಲಿ ಸೋಮಪ್ಪ ಛಲವಾದಿ, ಖಾದರಲಿಂಗ, ಉಮೇಶ್, ಅಂಬರೇಶ್, ಸೇರಿದಂತೆ ಕೂಲಿ ಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.