ಕೋವಿಡ್ ನಿಯಂತ್ರಿಸುವಲ್ಲಿ ವಿಫಲ
Team Udayavani, Jun 17, 2020, 5:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕುರುಗೋಡು: ದೇಶದಲ್ಲಿ ಕೋವಿಡ್ ವೈರಸ್ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲಗೊಂಡಿದೆ ಎಂದು ಆರೋಪಿಸಿ ಸಿಪಿಐಎಂ ಸ್ಥಳೀಯ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಎನ್.ಸೋಮಪ್ಪ ಮಾತನಾಡಿ, ಭಾರತದಲ್ಲಿ ದಿನೇ ದಿನೇ ಕೋವಿಡ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಕಾರಣ ಲಾಕ್‌ಡೌನ್ ವಿಚಾರದಲ್ಲಿ ತಗೆದುಕೊಂಡ ನಿರ್ಲಕ್ಷ್ಯದ ನಿರ್ಧಾರ. ಮೋದಿ ಸರ್ಕಾರದ ಆಡಳಿತ ವಿಫಲತೆಯೇ ಕಾರಣವಾಗಿದೆ ಎಂದು ದೂರಿದರು. ಮುಖಂಡ ಮಂಜುನಾಥ ಎನ್. ಹುಲ್ಲೇಪ್ಪ, ಯಂಕಮ್ಮ, ಕೇಂಚಪ್ಪ ಹಾಗೂ ಇನ್ನಿತರರು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಮಲ್ಲೇಶಪ್ಪ ಮೇಲಧಿಕಾರಿಗಳಿಗೆ ಮನವಿ ಕಳುಹಿಸುವ ಭರವಸೆ ನೀಡಿದರು. ಪಟ್ಟಣ ಸಮೀಪದ ಬಾದನಹಟ್ಟಿ ಗ್ರಾಪಂ, ಎರ್ರಿಂಗಳಿಗಿ ಗ್ರಾಪಂ, ಸಿದ್ದಮ್ಮನಹಳ್ಳಿ ಗ್ರಾಪಂ, ಕಲ್ಲುಕಂಭ ಗ್ರಾಪಂಗಳ ವ್ಯಾಪ್ತಿಯಲ್ಲೂ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ವಿಎಸ್. ಶಿವಶಂಕರ್, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಳಿ ಬಸವರಾಜ್, ಯು. ಶಂಕ್ರಪ್ಪ, ಬಿ.ಮುಕ್ಕಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.