ಮಾಸ್ಕ್ ಇಲ್ಲದೆ ರಸ್ತೆಗಿಳಿದರೆ ದಂಡ
Team Udayavani, May 14, 2020, 5:57 PM IST
ಸಾಂದರ್ಭಿಕ ಚಿತ್ರ
ಕುರುಗೊಡು: ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಬೈಕ್ ಸವಾರರು ಮತ್ತು ನಾಗರಿಕರು ಮಾಸ್ಕ್ ಇಲ್ಲದೆ ಸಂಚರಿಸಬಾರದು ಎಂದು ಪುರಸಭೆ ಮುಖ್ಯಾಧಿಕಾರಿ ಎಚ್. ಪಿರೋಜ್‌ಖಾನ್
ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪಟ್ಟಣದ ಮುಖ್ಯ ವೃತ್ತದಲ್ಲಿ ಮಾಸ್ಕ್ ಇಲ್ಲದ ಬೈಕ್ ಸವಾರರಿಗೆ ದಂಡವಿಧಿಸಿ ಜಾಗೃತಿ ಮೂಡಿಸಿದರು. ಸಾರ್ವಜನಿಕರು ನಿತ್ಯ ದಿನಸಿ ಅಂಗಡಿಗಳಿಗೆ ಹಾಗೂ ತರಕಾರಿ ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಖರೀದಿಸುವ ವೇಳೆ ಕಡ್ಡಾಯವಾಗಿ ಮಾಸ್ಕ್ ಅನ್ನು ಉಪಯೋಗಿಸಬೇಕು. ಇಲ್ಲದಿದ್ದರೆ ಪುರಸಭೆ ವತಿಯಿಂದ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಜೊತೆಗೆ ರಸ್ತೆಯಲ್ಲಿ ಮತ್ತು ಅಂಗಡಿ-ಮುಂಗಟ್ಟುಗಳಲ್ಲಿ ವ್ಯವಹಾರ ಮಾಡುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನುಡಿದರು. ಆದ್ದರಿಂದ ಎಲ್ಲರೂ ಮಾಸ್ಕ್ ಧರಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಆಗಾಗ್ಗೆ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಕೆಮ್ಮು, ನೆಗಡಿ, ಶೀನು ಬಂದಾಗ ಸಮೀಪದ ಆಸ್ಪತ್ರೆಗೆ ತೆರಳಿ ಚಿಕಿತ್ಸೆಪಡೆಯಿರಿ ಎಂದು ಸಲಹೆ ನೀಡಿದರು.
ಪಟ್ಟಣದಲ್ಲಿ ಮಾಸ್ಕ್ ಇಲ್ಲದ ಬೈಕ್ ಸವಾರರನ್ನು ಪುರಸಭೆ ಮುಖ್ಯಾಧಿಕಾರಿ ಎಚ್. ಪಿರೋಜ್‌ಖಾನ್ ಹಾಗೂ ಅಧಿಕಾರಿಗಳ ತಂಡ ಬೈಕ್‌ಗಳನ್ನು ತಡೆದು, ತಲಾ ಒಂದು ಬೈಕ್‌ಗೆ 100 ರಂತೆ ಒಟ್ಟು ರೂ. 2ಸಾವಿರ ದಂಡ ವಿಧಿಸಿದರು. ಪುರಸಭೆ ಆರ್.ಒ. ಮೆಹಬೂಬ್ ಪಾಷಾ, ಪರಸರ ಅಭಿಯಂತರ ಪ್ರಹ್ಲಾದರೆಡ್ಡಿ, ಸ್ವರ್ಣಲತಾ, ಶಶಿಧರ್, ರಾಜೇಶ್, ಶಿವಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.