ದರ್ಪ ತೋರಿದ್ದ ಕುರುಗೋಡು ಪಿಎಸ್ ಐ ಮಣಿಕಂಠ ಅಮಾನತು
Team Udayavani, Aug 12, 2022, 8:23 PM IST
ಕುರುಗೋಡು : ಕುರುಗೋಡು ಪಿ ಎಸ್ ಐ ಆಗಿದ್ದ ಮಣಿಕಂಠ ಅವರನ್ನು ಬಳ್ಳಾರಿ ಎಸ್ ಪಿ ಸೈದುಲು ಅಡಾವತ್ ಅವರು ಅಮಾನತುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಮೂರು ದಿನಗಳ ಹಿಂದೆ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ನಡೆದ ಸಾರ್ವಜನಿಕ ಸಭೆ ವೇಳೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಹೋದಾಗ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬರ ಮೇಲೆ ಪಿ ಎಸ್ ಐ ಮಣಿಕಂಠ ಹಲ್ಲೆ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ನಿನ್ನೆಯಿಂದ ವೈರಲ್ ಆಗಿತ್ತು. ದೂರು ನೀಡಿದ ಅನ್ವಯ ಪಿ ಎಸ್ ಐ ಮಣಿಕಂಠ ಅವರ ವಿರುದ್ಧ ಕುರುಗೋಡು ಠಾಣೆಯಲ್ಲಿ ದೂರು ದಾಖಲಾಗಿದೆ. ಕುರುಗೋಡು ಸಿಪಿಐ ಅವರು ನೀಡಿದ ವರದಿ ಆಧರಿಸಿ ಎಸ್ ಪಿ ಯವರು ಪಿ ಎಸ್ ಐ ಮಣಿಕಂಠ ಅವರನ್ನು ಅಮಾನತು ಗೊಳಿಸಿದ್ದಾರೆ.
ಕೋಳೂರಿನಲ್ಲಿ ಮೂರು ದಿನಗಳ ಹಿಂದೆ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳನ್ನು ಬಳಸಿದ ವಿರುದ್ಧ ಪಿಎಸ್ ಐ ಮಣಿಕಂಠ ಅವರ ವಿರುದ್ಧ ಗ್ರಾಮದ ಮುಖಂಡರು ಕುರುಗೋಡು ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಈ ನಡುವೆ ಸರಕಾರ ಪಿ ಎಸ್ ಐ ಮಣಿಕಂಠ ಅವರನ್ನು ಗುರುವಾರ ಬಳ್ಳಾರಿ ಗಾಂಧಿನಗರ ಠಾಣೆಗೆ ವರ್ಗಾವಣೆ ಮಾಡಿತ್ತು.
ಮಾಜಿ ಶಾಸಕ ಸುರೇಶ್ ಬಾಬು ಜನ್ಮದಿನದ ಅಂಗವಾಗಿ ಹಾಕಲಾಗಿದ್ದ ಬ್ಯಾನರ ನ್ನು ಕೆಲ ದುಷ್ಕರ್ಮಿಗಳು ಹರಿದಿದ್ದರು, ಅದರಲ್ಲಿ ಯುವಕ ಇದ್ದಾನೆ ಎಂದು ಶಂಕಿಸಿ ಪಿಎಸ್ಐ ಮಣಿಕಂಠ ಜನರ ಮಧ್ಯದಲ್ಲೇ ಹಿಗ್ಗಾಮುಗ್ಗಾ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಪಿ ಎಸ್ ಐ ಮಾತುಗಳಿಂದ ಸಮಾಜದ ಸ್ವಾಭಿಮಾನಕ್ಕೆ ಧಕ್ಕೆ ತಂದಂತಾಗಿದೆ. ಅಲ್ಲದೆ ತೆಲೆ ತಗ್ಗಿಸುವ ಪದಗಳನ್ನು ಬಳಕೆ ಮಾಡಿದ್ದಾರೆ. ಇಂತಹ ಮಾತುಗಳು ಮಾತನಾಡುವುದಕ್ಕೆ ಯಾರು ಅವಕಾಶ ಕೊಟ್ಟಿದ್ದಾರೆ. ಇವರೇನು ಅಧಿಕಾರಿಗಳಾ ಅಥವಾ ಗೂಂಡಾಗಳಾ ಎಂದು ಪ್ರತಿಭಟನಾ ಕಾರರು ಪ್ರಶ್ನಿಸಿದ್ದರು.
ಮಣಿಕಂಠ ಅವರು ದರ್ಪ ತೋರಿರುವುದು ಸರಿಯಲ್ಲ ಅವರ ಮೇಲೆ ಪ್ರಕರಣ ದಾಖಲಿಸಿ ಸೇವೆಯಿಂದ ಅಮಾನತು ಮಾಡಬೇಕು ಎಂದು ಪಟ್ಟು ಹಿಡಿಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.