ಕುರುಗೋಡು: ರೈತರಿಗೆ ತರಬೇತಿ ಕಾರ್ಯಕ್ರಮ
Team Udayavani, Nov 21, 2021, 12:54 PM IST
ಕುರುಗೋಡು: ಎಮ್ಮಿಗನೂರು ಗ್ರಾಮದಲ್ಲಿ ಶ್ರೀ ಪ್ಯಾಟೆ ಬಸವೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಕೀಟಶಾಸ್ತ್ರ ತಜ್ಞ ಬದರಿಪ್ರಸಾದ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ರೈತರು ಕೃಷಿ ಚಟುವಟಿಕೆಯಿಂದ ವಿಮುಖವಾಗುತ್ತಿದ್ದಾರೆ. ಹೊಲದಲ್ಲಿ ಒಂದೇ ಬೆಳೆ ಬೆಳೆಯುವ ಬದಲು ಸಾವಯವ ಕೃಷಿ ಮೂಲಕ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಮೌಲ್ಯವರ್ಧಿತ ಬೆಳೆಗಳನ್ನು ಬೆಳೆಯಬೇಕೆಂದು ರಾಜ್ಯದ ಇತರೆ ಭಾಗದಲ್ಲಿ ಪ್ರಗತಿಪರ ರೈತರ ನಿದರ್ಶಗಳನ್ನು ನೀಡಿದರು.
ಸಸ್ಯ ರೋಗ ತಜ್ಞ ಪ್ರಮೇಶ ಮಾತನಾಡಿ, ಕೃಷಿಯಲ್ಲಿ ರೈತರು ತಮ್ಮನ್ನು ತಾವು ತೊಡಗಿಸಿಕೊಂಡು ಬೆಳೆಗಳಿಗೆ ಬಂದ ರೋಗಗಳಿಗೆ ಯಾವ ಸಮಯ, ಎಷ್ಟೆ ಪ್ರಮಾಣದಲ್ಲಿ ಔಷಧಗಳು ಸಿಂಪಡಿಸಬೇಕು ಹಾಗೂ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ಕೃಷಿ ಅಧಿಕಾರಿ ಶ್ರೀಧರ ಮಾತನಾಡಿ, ಸರಕಾರ ಹಾಗೂ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯ ಕುರಿತು ಮಾಹಿತಿ ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ಮಿಥುನ್ ಕಿಮಾವತ್, ಎಡಿಎ ವಿದ್ಯಾವತಿ ಕೃಷಿ ಅಧಿಕಾರಿಗಳಾದ ಆಶೋಕ ಮಡಿವಾಳ, ಯಲ್ಲಪ್ಪ ಬನ್ನಿಕೊಪ್ಪ, ಗಿರಿಜಾ ಅಂಗಡಿ, ಡಿ. ಶಿವಪ್ಪ, ತಾಲೂಕು ತಾಂತ್ರಿಕ ಸಹಾಯಕ ವ್ಯವಸ್ಥಾಪಕ ಎಚ್. ಪರಮೇಶ್ವರ ನಾಯಕ್, ತಾಂತ್ರಿಕ ಸಹಾಯಕ ರೇಣುಕಾರಾಜು, ರೈತ ಅನುಗಾರ ಬಸಯ್ಯ ಸ್ವಾಮಿ, ಮುಖಂಡರಾದ ಕುರುಬರ ತಿಪ್ಪಯ್ಯ, ಕರಿಬಸಯ್ಯ, ಹೊಸಗುರು ಜಡೇಪ್ಪ, ಬುರಡ್ಡಿ ಸಣ್ಣ ಜಡೇಪ್ಪ, ಸತ್ಯಣª, ಎಸ್. ಜಡೆಪ್ಪ, ಅಡಿವಯ್ಯ ಕೆ.ಎಂ. ಕಾರ್ಯಕ್ರಮ ಶಿವನೇಗೌಡ್ರ ರಾಮು ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.