180 ಶಾಲೆಗಳಲ್ಲಿ 524 ಶಿಕ್ಷಕರ ಕೊರತೆ
Team Udayavani, Jun 18, 2018, 2:37 PM IST
ಸಿರುಗುಪ್ಪ: ತಾಲೂಕಿನ ಹಲವು ಶಾಲೆಗಳಲ್ಲಿ ಮಕ್ಕಳಿಗನುಗುಣವಾಗಿ ಶಿಕ್ಷಕರು ಇಲ್ಲದೆ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳದಿರುವುದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಯಾವೊಬ್ಬ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮಧ್ಯಾಹ್ನದ ಬಿಸಿಯೂಟ, ಕ್ಷೀರ, ಶೂ, ಸಾಕ್ಸ್, ಉಚಿತ ಸಮವಸ್ತ್ರ, ಸೈಕಲ್ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿಯೇ ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಮುಖಮಾಡುವಂತಾಗಿದೆ.
ಆದರೆ, ಶಿಕ್ಷಕರ ಕೊರತೆ ಮಾತ್ರ ಹಾಗೆ ಇದೆ. ತಾಲೂಕಿನಲ್ಲಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 180 ಶಾಲೆಗಳಿವೆ. ಪ್ರತಿ ಶಾಲೆಯಲ್ಲೂ ಕನಿಷ್ಠ 100 ರಿಂದ ಗರಿಷ್ಠ 400ರಷ್ಟು ವಿದ್ಯಾರ್ಥಿಗಳಿದ್ದಾರೆ. 180 ಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು 980 ಶಿಕ್ಷಕರು ಬೇಕು. ಈ ತಾಲೂಕಿನಲ್ಲಿ ಕೇವಲ498 ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 524 ಶಿಕ್ಷಕರ ಅಗತ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಇಬ್ಬರು ಶಿಕ್ಷಕರು ನಿರ್ವಹಿಸಬೇಕಾದ ಕೆಲಸವನ್ನು ಒಬ್ಬ ಶಿಕ್ಷಕನೇ ಮಾಡುವಂತಾಗಿದೆ.
ರಾಂಪುರ, ಕೆ.ಸೂಗೂರು, ಬಾಗೇವಾಡಿ ಕ್ಯಾಂಪ್, ಹಿರೇಹಾಳು, ತೆಕ್ಕಲಕೋಟೆಯ ಸಿಂಧೋಳು ಕಾಲೋನಿ, ಕಿ.ಪ್ರಾ.ಶಾಲೆ ಹೆರಕಲ್ಲು ಗ್ರಾಮಗಳ ಶಾಲೆಗಳಲ್ಲಿ ಕಾಯಂ ಶಿಕ್ಷಕರಿಲ್ಲದೆ ಇತರೆ ಶಾಲೆಗಳಿಂದ ನಿಯೋಜನೆ ಮೇಲೆ ಶಿಕ್ಷಕರನ್ನು ಕಳುಹಿಸಲಾಗುತ್ತದೆ.
ಈ ಶಿಕ್ಷಕ ಶಾಲೆಗೆ ಬರದಿದ್ದರೆ ಶಾಲೆಗೆ ಬೀಗ, ಮಕ್ಕಳಿಗೆ ರಜೆ ಎನ್ನುವಂತ ಪರಿಸ್ಥಿತಿಯಿದೆ. ತಾಲೂಕಿನ 21 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿ ಮಾರ್ಪಟ್ಟಿದ್ದು, ಈ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ, ಬಿಸಿಯೂಟ, ದಾಖಲಾತಿ, ವರ್ಗಾವಣೆ ಪ್ರಮಾಣ ಪತ್ರ ವಿತರಣೆ, ಮೇಲಾಧಿಕಾರಿಗಳ ಸಭೆ ಸಮಾರಂಭಗಳಿಗೆ ಇನ್ನು
ಅನೇಕ ಜವಾಬ್ದಾರಿಯ ಕೆಲಸಗಳನ್ನು ಇರುವ ಒಬ್ಬ ಶಿಕ್ಷಕರೇ ನಿರ್ವಹಿಸಬೇಕಿದೆ. ಇಲ್ಲಿನ ಶಿಕ್ಷಕರು ಕ್ಷೇತ್ರ
ಶಿಕ್ಷಣಾಧಿಕಾರಿಗಳ ಕಚೇರಿಗೆ ಬಂದರೆ ಶಾಲೆಯಲ್ಲಿನ ಕೆಲಸಗಳನ್ನು ಯಾರಿಗೆ ವಹಿಸಿರಬೇಕು ಎನ್ನುವುದು
ಅಲ್ಲಿನ ಶಿಕ್ಷಕರಿಗೆ ಯಕ್ಷಪ್ರಶ್ನೆಯಾಗಿದೆ.
ಕೆಲ ಶಿಕ್ಷಕರು ತಮ್ಮ ಶಾಲೆಯಲ್ಲಿ ಈ ಹಿಂದೆ ಅತಿಥಿ ಶಿಕ್ಷಕರಾಗಿ ಕೆಲಸ ಮಾಡಿದ ಶಿಕ್ಷಕರನ್ನು ಅಥವಾ ಶಾಲೆಯ ಅಕ್ಕ ಪಕ್ಕದ ವಿದ್ಯಾವಂತರನ್ನೋ ಇಲ್ಲದೇ ಹೋದಲ್ಲಿ ಬಿಸಿಯೂಟದ ಅಡುಗೆ ತಯಾರಕರನ್ನು ವಿದ್ಯಾರ್ಥಿಗಳನ್ನು ಕಾಯುವ ಕೆಲಸಕ್ಕೆ ನೇಮಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಸರ್ಕಾರದ ಸುತ್ತೋಲೆಯೂ ಇಲ್ಲದೆ ಶಾಲೆಗೆ ರಜೆ ನೀಡಿ ಕಚೇರಿಗಳಿಗೆ ಹೋಗಬೇಕಾದ ಪರಿಸ್ಥಿತಿ ಏಕೋಪಾಧ್ಯಾಯ ಶಾಲೆಗಳ ಶಿಕ್ಷಕರಿಗೆ ಬಂದೊದಗಿದೆ.
ತಾಲೂಕಿನಲ್ಲಿರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವಲ್ಲಿ ಅಲ್ಲಿನ ಶಿಕ್ಷಕರ ಅವಶ್ಯಕತೆಗೆ ಅನುಗುಣವಾಗಿ ಒಂದು ವಾರದಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಈ ಮೂಲಕ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು.
ಪಿ.ಡಿ. ಭಜಂತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಸಿರುಗಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.