ಲಾಡ್‌ ವರ್ತನೆಗೆ ಬೇಸತ್ತು ಬಿಜೆಪಿ ಸೇರ್ಪಡೆ: ಬಸಪ್ಪ


Team Udayavani, Apr 30, 2018, 10:58 AM IST

bell-2.jpg

ಬಳ್ಳಾರಿ: ಜಿಲ್ಲೆಯ 9 ವಿಧಾನಸಭೆ ಕ್ಷೇತ್ರಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರದು ಸರ್ವಾಧಿಕಾರಿ ಧೋರಣೆಯಾಗಿದ್ದು, ಸದ್ದಾಂ ಹುಸೇನ್‌ ಅವರಂತೆ ಮಾಡುತ್ತಿದ್ದಾರೆ. ಅವರ ಹಣದಿಂದ ಕೂಡಿರುವ ದುರಂಹಾರಕ್ಕೆ ಬೇಸತ್ತು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ಮುಖಂಡ ವಿ.ಕೆ. ಬಸಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಸಂಘಟನೆಗಾಗಿ ಸಾಕಷ್ಟು ಶ್ರಮಿಸಿದ್ದೇನೆ. ಜಿಲ್ಲೆಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಉಸಿರುಗಟ್ಟುವ ವಾತಾವರಣದಲ್ಲೂ ಕಾಂಗ್ರೆಸ್‌ ಪಕ್ಷದ ಪರ ಕೆಲಸ ಮಾಡಿದ್ದೇನೆ. ಆದರೆ, ಗ್ರಾಮಾಂತರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ನನಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಡಾ| ಜಿ. ಪರಮೇಶ್ವರ್‌, ಅಲ್ಲಂ ವೀರಭದ್ರಪ್ಪ, ಕೆ.ಸಿ. ಕೊಂಡಯ್ಯ ಸೇರಿ ಎಲ್ಲರೂ ಭರವಸೆ ನೀಡಿ ಟಿಕೆಟ್‌ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದರು.

ಕ್ಷೇತ್ರ ಮರುವಿಂಗಣಡೆಯಾದ 2008ರಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಆಕಾಂಕ್ಷಿಯಾಗಿದ್ದೆ. ನಂತರ 2009ರಲ್ಲಿ ಲೋಕಸಭೆ ಚುನಾವಣೆಗೂ ನನ್ನನ್ನು ಪರಿಗಣಿಸಿ, ಹೈಕಮಾಂಡ್‌ಗೆ ಕಳುಹಿಸಿಕೊಡಲಾಗಿತ್ತು. ಪಕ್ಷದ ವರಿಷ್ಠರು ನಿನಗೆ ಇನ್ನು ಚಿಕ್ಕವಯಸ್ಸು, ಭವಿಷ್ಯವಿದೆ ಎಂದು ಮನವೊಲಿಸಿ, ಚಿತ್ರದುರ್ಗ ಜಿಲ್ಲೆಯ ವಿಶ್ರಾಂತ ನ್ಯಾಯಾಧಿಧೀಶ ಎನ್‌.ವೈ. ಹನುಮಂತಪ್ಪ ಅವರಿಗೆ ಟಿಕೆಟ್‌ ಕೊಡಿಸಲಾಯಿತು ಎಂದರು. 

 2013ರ ಚುನಾವಣೆಯಲ್ಲೂ ಟಿಕೆಟ್‌ ಕೈ ತಪ್ಪಿತು. 2014ರ ಬೈ ಎಲೆಕ್ಷನ್‌ನಲ್ಲೂ ನನಗೆ ಟಿಕೆಟ್‌ ಕೊಡಬೇಕಿತ್ತು. ಆದರೆ, ಅಂದು ಸಿಎಂ, ಡಿ.ಕೆ. ಶಿವಕುಮಾರ್‌, ಡಾ| ಜಿ. ಪರಮೇಶ್ವರ ಅವರು ಮನವೊಲಿಸಿ, ಎನ್‌.ವೈ. ಗೋಪಾಲಕೃಷ್ಣ ಅವರನ್ನು ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಿದರು. ಅಂತಹ ಸಂದರ್ಭದಲ್ಲೂ ಪಕ್ಷದ ಪರ ಕೆಲಸ ಮಾಡಿದ್ದೇವೆ. ಆದರೆ, ರಾಜ್ಯದಲ್ಲಿ ನಮ್ಮದೇ ಆಡಳಿತವಿದ್ದಾಗ, ನಮಗೊಂದು ಅವಕಾಶ ದೊರೆಯದಿದ್ದರೆ ಹೇಗೆ? ಎಂದು ಪ್ರಶ್ನಿಸಿದ ಅವರು, ಇದಕ್ಕೆ ಬೇಸತ್ತು ಬಿಜೆಪಿ ಸೇರಿದ್ದೇನೆ ಎಂದು ಹೇಳಿದರು. ಲಾಡ್‌ ದುರಂಹಕಾರಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹಣ ಹಾಗೂ ಅಧಿಕಾರ ದರ್ಪದಿಂದ, ಜಿಲ್ಲೆಯ ಹಿರಿಯ ಮುಖಂಡರನ್ನು ಹಾಗೂ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. 

ಹೊಸಪೇಟೆಯಲ್ಲಿ ಎಸ್‌ಟಿ ಸಮಾವೇಶಕ್ಕೂ ಅಡ್ಡಿಪಡಿಸಿ ಸಂತೋಷ್‌ಲಾಡ್‌, ಪಕ್ಷದ ವಾಲ್ಮೀಕಿ ಮುಖಂಡರು ಬೆಳೆಯುವುದನ್ನು ಸಹಿಸುತ್ತಿಲ್ಲ. ಲಾಡ್‌ರ ಕುತಂತ್ರ ರಾಜಕಾರಣದಿಂದ ಸಮಾವೇಶ ಮೊಟಕುಗೊಳಿಸಲಾಯಿತು ಎಂದು ದೂರಿದರು. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದೇನೆ. ಸದ್ಯ ಬಿಜೆಪಿ ಪಕ್ಷ ಸೇರಿದ್ದ, ಯಾವುದೇ ಸ್ಥಾನಮಾನ ಆಮಿಷವೊಡ್ಡಿಲ್ಲ. ನಿಷ್ಠಾವಂತ ಕಾರ್ಯಕರ್ತನಾಗಿರುವ ನನಗೆ ಕಾಂಗ್ರೆಸ್‌ ಪಕ್ಷ ದ್ರೋಹ ಎಸಗಿತು. ವಾಲ್ಮೀಕಿ ಸಮುದಾಯ ಪ್ರಬಲವಾಗಿ ಬೆಳೆಯೋದು ಜಿಲ್ಲಾ ಸಚಿವರಿಗೆ ಇಷ್ಟವಿಲ್ಲ. ಹೀಗಾಗಿ, ನಾನು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವ ನನಗೆ ಟಿಕೆಟ್‌ ತಪ್ಪಿಸಲು ಸಚಿವರು ಶತಾಯಗತಾಯ ಪ್ರಯತ್ನ ಮಾಡಿದ್ದಾರೆ. ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ವಲಸಿಗರಿಗೆ ಸಚಿವರು ಮಣೆ ಹಾಕಿದ್ದಾರೆ ಎಂದು ಆರೋಪಿಸಿದರು.

ನನ್ನ ಮುಂದಿನ ರಾಜಕೀಯ ಭವಿಷ್ಯದ ಸಲುವಾಗಿ ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿರುವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಪಕ್ಷಕ್ಕೆ ಸೇರ್ಪಡೆಗೊಂಡಿರುವೆ ಎಂದರು. ನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಜಿ. ಸೋಮಶೇಖರ ರೆಡ್ಡಿ, ಪಾಲಿಕೆ ಸದಸ್ಯರಾದ ಎಸ್‌. ಮಲ್ಲನಗೌಡ, ಶ್ರೀನಿವಾಸ ಮೋತ್ಕರ್‌, ಮುಖಂಡರಾದ ಈರಣ್ಣ, ಮಾಬುಸಾಬ್‌, ಹುಲುಗಣ್ಣ, ಶ್ರೀದೇವಿ, ಕಾರ್ಯಕರ್ತರು ಇದ್ದರು.  

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.