ನರ ಭಕ್ಷಕ ಚಿರತೆಗೆ ಬಾಲೆ ಬಲಿ
Team Udayavani, Dec 26, 2018, 7:34 AM IST
ಕಂಪ್ಲಿ: ಕಳೆದ 15 ದಿನಗಳ ಹಿಂದೆ ಚಿರತೆ ಬಾಲಕನನ್ನು ಹೊತ್ತೂಯ್ದು ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೂಬ್ಬ ಬಾಲಕಿ ಚಿರತೆಗೆ ಬಲಿಯಾಗಿರುವ ಘಟನೆ ತಾಲೂಕಿನ ದೇವಲಾಪುರ ಗ್ರಾಮದ ಹೊಲವೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ದೇವಲಾಪುರದ ಪಂಪಾಪತಿ ಎಂಬುವರ ಪುತ್ರಿ ಜಯಸುಧಾ (12) ಚಿರತೆಗೆ ಬಲಿಯಾದ ಬಾಲಕಿ. ಪೋಷಕರೊಂದಿಗೆ ಹೊಲದಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಓದುತ್ತಿರುವ ಜಯಸುಧಾ ಮಂಗಳವಾರ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಶಾಲೆಗೆ ರಜೆ ಇರುವುದರಿಂದ ಬೆಳಗ್ಗೆ ಪೋಷಕರೊಂದಿಗೆ ಹತ್ತಿ ಹೊಲಕ್ಕೆ ಹೋಗಿದ್ದಳು. ಈ ವೇಳೆ ಹತ್ತಿ ಹೊಲದಲ್ಲಿ ಹೊಂಚು ಹಾಕಿ ಕುಳಿತಿದ್ದ ಚಿರತೆ ಬಾಲಕಿ ಮೇಲೆರಗಿ ಎಳೆದೊಯ್ದಿದೆ. ಬಾಲಕಿ ಚೀರಾಟ ಕಂಡು ಸ್ಥಳದಲ್ಲಿದ್ದ ತಂದೆ-ತಾಯಿ ಹಾಗೂ ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದವರು ಚಿರತೆಯನ್ನು ಬೆನ್ನಟ್ಟಿದ್ದಾರೆ.
ಜನರನ್ನು ಕಂಡ ಚಿರತೆ ಬಾಲಕಿಯ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ ಬಳಿಕ ಅಲ್ಲಿಯೇ ಬಿಟ್ಟು ಓಡಿ ಹೋಗಿದೆ. ತಂದೆ ಪಂಪಾಪತಿ ಹಾಗೂ ಗ್ರಾಪಂ ಸದಸ್ಯ ರಾಮನಗೌಡ ಬಾಲಕಿಯನ್ನು ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದರಾದರೂ ಮಾರ್ಗಮಧ್ಯೆ ಬಾಲಕಿ ಅಸುನೀಗಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ.
5 ಲಕ್ಷ ರೂ. ಪರಿಹಾರ: ವಿಷಯ ತಿಳಿದು ದೇವಲಾಪುರ ಗ್ರಾಮಕ್ಕೆ ಆಗಮಿಸಿದ ಶಾಸಕ ಜೆ.ಎನ್. ಗಣೇಶ್, ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್, ಎಸ್ಪಿ ಅರುಣ್ ರಂಗರಾಜನ್, ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ
ಡಾ| ಪಿ.ರಮೇಶ್ ಹಾಗೂ ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರು ಮೃತ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕ ಜೆ.ಎನ್.ಗಣೇಶ್ ಅರಣ್ಯ ಇಲಾಖೆ ಪರವಾಗಿ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಚೆಕ್ ಹಸ್ತಾಂತರಿಸಿದರು.
ಗ್ರಾಮಸ್ಥರ ಪ್ರತಿಭಟನೆ
ಬಾಲಕಿ ದೇಹವನ್ನು ದೇವಲಾಪುರಕ್ಕೆ ತಂದ ಪೋಷಕರು, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಪ್ರತಿಭಟಿಸಿದರು. ಚಿರತೆಗಳು ದಾಳಿ ನಡೆಸುವುದರಿಂದ ಜಮೀನುಗಳಿಗೆ ತೆರಳಲು ಭಯ ಎದುರಿಸುವಂತಾಗಿದೆ. ಅರಣ್ಯ ಇಲಾಖೆ
ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವವರೆಗೂ ಮೃತ ಬಾಲಕಿ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.