ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ
Team Udayavani, Jul 31, 2017, 2:33 PM IST
ಗರಿಬೊಮ್ಮನಹಳ್ಳಿ: ಕೇಂದ್ರ ಸರ್ಕಾರ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿಯನ್ನು ಬಲವಾಗಿ ಸಂಘಟಿಸೋಣ ಎಂದು ಬಿಜೆಪಿ ಬಿಲ್1 ಪ್ರಮುಖ ಪೊಲೀಸ್ ರಾಮನಾಯ್ಕ ಹೇಳಿದರು.
ಪಟ್ಟಣದ ರಾಮ್‌ರಹೀಂ ನಗರದಲ್ಲಿ ಬಿಜೆಪಿಯ ಬೂತ್ ಮಟ್ಟದ 133ನೇ ಬೂತ್ ಕಮಿಟಿ ಸಭೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಧಾನಿ ಮೋದಿಯವರು ರಾಷ್ಟ್ರ ರಕ್ಷಣೆಗೆ ಪಣತೊಟ್ಟಿದ್ದು, ವಿದೇಶಗಳೊಂದಿಗೆ ಅನೋನ್ಯ ಸಂಬಂಧ
ಗಟ್ಟಿಗೊಳಿಸಿಕೊಂಡಿದ್ದಾರೆ. ಏಕರೂಪ ತೆರಿಗೆ ಜಿಎಸ್‌ಟಿ ಜಾರಿಗೊಳಿಸಿ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಸೀಡ್‌ಬಾಲ್ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಕೆಳಹಂತದಿಂದ ಪ್ರಯತ್ನಿಸಬೇಕು. ಕ್ಷೇತ್ರದಿಂದ ಬಿಜೆಪಿ ಪಕ್ಷ ಯಾರಿಗೆ ಟಿಕೆಟ್ ನೀಡಿದರು, ಒಗ್ಗಟ್ಟಿನಿಂದ ಅವರ ಗೆಲುವಿಗೆ ಶ್ರಮಿಸೋಣ ಎಂದರು.
ಬೂತ್ ಕಮಿಟಿ ಅಧ್ಯಕ್ಷ ಸ್ವಚ್ಛ ಭಾರತ್ ಎಲ್. ಗಣೇಶ್ ಮಾತನಾಡಿ, ಕಾಂಗ್ರೆಸ್ ಸರಕಾರ ಜನವಿರೋಧಿ ಆಡಳಿತ ನೀಡುತ್ತಿದ್ದು, ವಸತಿ ರಹಿತರಿಗೆ ವಸತಿಗಳನ್ನು ನೀಡಲು ಮೀನಮೇಷ ಎಣಿಸುತ್ತಿದೆ. ಪಟ್ಟಣದ ಪುರಸಭೆ ನಿರ್ಲಕ್ಷದಿಂದ ಸ್ವತ್ಛತೆ ಮಾಯಾವಾಗಿದೆ. ಬಿಜೆಪಿ ಕಾರ್ಯಕರ್ತರು ಬೂತ್
ಮಟ್ಟಗಳಲ್ಲಿ ಪ್ರತಿಯೊಬ್ಬರೂ ಸಸಿ ನೆಡುವ ಮೂಲಕ ಪರಿಸರ ಉಳಿಸಬೇಕು. ರಾಮ್‌ರಹಿಂ ನಗರದ ನಿರಾಶ್ರಿತರಿಗೆ ಮನೆಗಳನ್ನು ಕಲ್ಪಿಸಿಕೊಡದಿದ್ದಲ್ಲಿ ಪುರಸಭೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದರು.
ಇದೇವೇಳೆ ರಾಮ್‌ರಹಿಂ ನಗರದ ವಿವಿಧೆಡೆ 100 ಸಸಿಗಳನ್ನು ನೆಟ್ಟರು. ಬಿಜೆಪಿ ಮಂಡಲ ಅಧ್ಯಕ್ಷ ನರೇಗಲ್ ಕೊಟ್ರೇಶ್, ಮುಖಂಡ ತಿರುಮಲೇಶ್, ಎಸ್‌ಟಿ ಘಟಕದ ಜಿಲ್ಲಾ ಕಾರ್ಯದರ್ಶಿ ಮಹೇಂದ್ರ ಮಾತನಾಡಿದರು. ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ಚಿಮ್ನಳ್ಳಿ ಸಿದ್ದಪ್ಪ, ನಗರ ಘಟಕದ ಅಧ್ಯಕ್ಷ ಸಂದೀಪ್ ಶಿವಮೊಗ್ಗ, ಅಲ್ಪ ಸಂಖ್ಯಾತರ ಘಟಕದ ವಾಜೀದ್, ನಾಗಯ್ಯಸ್ವಾಮಿ, ಎಸ್.ಬಾಳಪ್ಪ, ಕೊಟ್ರಪ್ಪ, ದೇವರಮನಿ ನೀಲಪ್ಪ, ಅಮೀನ್‌ದ್ದೀನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.