ಬೆಣ್ಣೆಹಳ್ಳಿ ಕೂಲಿ ಕಾರ್ಮಿಕರಿಂದ ಪತ್ರ ಚಳವಳಿ
Team Udayavani, Sep 24, 2019, 1:16 PM IST
ಹರಪನಹಳ್ಳಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸಿದ ಹಣ ಬಿಡುಗಡೆಗಾಗಿ ಒತ್ತಾಯಿಸಿ ಕೂಲಿಕಾರರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತಿರುವ ಚಳವಳಿ ಮುಂದುವರೆದಿದ್ದು ಇದೀಗ ತಾಲೂಕಿನ ಬೆಣ್ಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿಕಾರರು ಪತ್ರ ರವಾನಿಸಿದ್ದಾರೆ.
ತಾಲೂಕಿನ ಬೆಣ್ಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 7 ತಿಂಗಳ ಹಿಂದೆ ಬದು ನಿರ್ಮಾಣ ಮತ್ತು ಕೃಷಿ ಹೊಂಡ, ಚೆಕ್ ಡ್ಯಾಂ ಹುಳು ತೆಗೆದು ಹಾಕಿದ್ದೇವೆ. ಆದರೆ ಈವರೆಗೂ ಕೂಲಿ ಹಣ ಬಂದಿರುವುದಿಲ್ಲ. ತಕ್ಷಣವೇ ಕೂಲಿ ಹಣ ಬಿಡುಗಡೆ ಮಾಡಬೇಕು ಹಾಗೂ ಹೆಚ್ಚುವರಿ 100 ಮಾನವ ದಿನಗಳ ಕೆಲಸ ಕೊಡಬೇಕು ಎಂದು ಪ್ರಧಾನಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.
ಪತ್ರ ಚಳವಳಿ ನಡೆಸಿದ ಗ್ರಾಮಸ್ಥರು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ನಮ್ಮ ಗೋಳು ಕೇಳುತ್ತಿಲ್ಲ. ಒಂದೆಡೆ ನಿರಂತರ ಬರಗಾಲದಿಂದ ನಮಗೆ ಕೆಲಸ ಸಿಗುತ್ತಿಲ್ಲ. ಮತ್ತೂಂದೆಡೆ ಮಾಡಿದ ಕೆಲಸಕ್ಕೆ ಕೂಲಿ ಹಣವೂ ಸಿಗುತ್ತಿಲ್ಲ. ಜೀವನ ನಡೆಸುವುದೇ ದುಸ್ತರವಾಗಿದೆ. ಅದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದೇವೆ ಎಂದು ಗ್ರಾಮದ ಕೂಲಿಕಾರರು ತಿಳಿಸುತ್ತಾರೆ. ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತೆ ಶ್ರುತಿ, ಗ್ರಾಮದ ಕೂಲಿಕಾರರಾದ ಹೊನ್ನಮ್ಮ, ಬಸಮ್ಮ, ಹುಸೇನ್‌ಬಿ, ನಿರ್ಮಲ, ಲತಾ, ಪೂರ್ಣಜ್ಯೋತಿ, ಶಾರದಮ್ಮ, ರೂಪ, ದೀಪ,ಈರಮ್ಮ ರತ್ಮಮ್ಮ, ಕೆಂಚಮ್ಮ, ಗಂಗಮ್ಮ, ಭಾಗ್ಯಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.