ಬಾಡಿಗೆ ಕಟ್ಟಡದಲ್ಲಿ ಗ್ರಂಥಾಲಯ!
Team Udayavani, Oct 29, 2019, 2:49 PM IST
ಕೂಡ್ಲಿಗಿ: 1968ರಲ್ಲಿ ಪ್ರಾರಂಭವಾದ ತಾಲೂಕು ಗ್ರಂಥಾಲಯ ಇಲ್ಲಿವರೆಗೂ ಸ್ವಂತ ಕಟ್ಟಡ ಹೊಂದಿಲ್ಲ. ಬಾಡಿಗೆಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು ಮೂಲಭೂತ ಸೌಕರ್ಯಗಳ ಕೊರತೆಯಿಂದ ದಿನೆದಿನೇ ಓದುಗರ ಸಂಖ್ಯೆ ಇಳಿಮುಖವಾಗುತ್ತಿದೆ.
ಪ್ರವಾಸಿ ಮಂದಿರದ ಹತ್ತಿರವಿರುವ ಸಣ್ಣ ನೀರಾವರಿ ಇಲಾಖೆಯ ಪಕ್ಕದಲ್ಲಿಯೇ ಬಾಡಿಗೆ ಮನೆಯಲ್ಲಿ ಗ್ರಂಥಾಲಯವಿದ್ದು ಜನರಿಗೆಮಾಹಿತಿಯಿಲ್ಲ. ಪಟ್ಟಣ ಪಂಚಾಯ್ತಿ ಅಧಿಕಾರಿಗಳಿಗೆ ಈಗಾಗಲೇ 2 ಬಾರಿ ಪತ್ರ ಬರೆದಿದ್ದರೂ ಇದೂವರೆಗೂ ಇಲ್ಲಿಯ ಗ್ರಂಥಾಲಯಕ್ಕೆ ಸ್ವಂತ ನಿವೇಶನ ನೀಡಿಲ್ಲ.
ಆದರೆ ಗ್ರಂಥಾಲಯಕ್ಕೆ ಬರಬೇಕಾದ ಶೇ. 6 ಸೆಸ್ ಹಣವನ್ನು ನೀಡುತ್ತಿದ್ದು ಇದರಿಂದ ಗ್ರಂಥಾಲಯದಲ್ಲಿ ಎಲ್ಲ ರೀತಿಯ ದಿನಪತ್ರಿಕೆಗಳು, ವಾರಪತ್ರಿಕೆಗಳು, ಪುಸ್ತಕಗಳು ಬರುತ್ತಿವೆ. ಆದರೆ ಪುಸ್ತಕಗಳನ್ನು, ಪತ್ರಿಕೆಗಳನ್ನು ಇಡಲು ರ್ಯಾಕ್ ವ್ಯವಸ್ಥೆ ಇಲ್ಲಿಲ್ಲ. ಜಾಗದ ಕೊರತೆಯಿಂದಾಗಿ ಎಲ್ಲ ಪುಸ್ತಕಗಳನ್ನು ಚೀಲಗಳಲ್ಲಿ ಕಟ್ಟಿಡಲಾಗುತ್ತಿದೆ.
ಗ್ರಂಥಾಲಯಕ್ಕೆ 825 ಸದಸ್ಯರಿದ್ದು 101 ರೂಪಾಯಿ ಕಟ್ಟಿ ಸದಸ್ಯತ್ವ ಪಡೆದಿಕೊಂಡಿದ್ದಾರೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚಿನ ಓದುಗರ ಬರುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಬೇಕಾದ ಪುಸ್ತಕಗಳ ಕೊರತೆಯಿದೆ. ಕನಿಷ್ಠ 3 ಸಿಬ್ಬಂದಿ ಅವಶ್ಯಕತೆಯಿದ್ದು ಒಬ್ಬ ಗ್ರಂಥಪಾಲಕ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಶೌಚಾಲಯ ವ್ಯವಸ್ಥೆಯಿಲ್ಲ.
ಗ್ರಂಥಾಲಯದಲ್ಲಿ 25 ಸಾವಿರಕ್ಕೂ ಅಧಿಕ ಪುಸ್ತಕಗಳಿದ್ದು ಜಾಗದ ಕೊರತೆಯಿಂದ ರ್ಯಾಕ್ ವ್ಯವಸ್ಥೆಯಿಲ್ಲದೇ ಚೀಲದಲ್ಲಿ ಕಟ್ಟಿಡಲಾಗುತ್ತಿದೆ. ಪಟ್ಟಣದ ಮಧ್ಯಭಾಗದಲ್ಲಿ ಸ್ವಂತ ಕಟ್ಟಡ ನಿರ್ಮಾಣವಾದರೆ ಗ್ರಂಥಾಲಯ ಅಭಿವೃದ್ಧಿಗೂ ಹಾಗೂ ಓದುಗರಿಗೂ ಹತ್ತಿರವಾಗುತ್ತದೆ. – ಎಸ್. ಸುರೇಶ್, ಗ್ರಂಥಾಲಯ ಅಧಿಕಾರಿ
-ಕೆ.ನಾಗರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.