ಬದುಕು ಖಾತ್ರಿ ಅಭಿಯಾನಕೆ ಇಂದು ಚಾಲನೆ
Team Udayavani, Dec 20, 2018, 5:09 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಮೇಲೆ ಪ್ರಸಕ್ತ ವರ್ಷವೂ ಆವರಿಸಿರುವ ಭೀಕರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಂದಾಗಿರುವ ಇಲ್ಲಿನ ಜಿಲ್ಲಾ ಪಂಚಾಯತ್, ರಾಜ್ಯದಲ್ಲೇ ಮೊದಲ ಬಾರಿಗೆ ಗಣಿ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ “ಬದುಕು ಖಾತ್ರಿ’ ಎಂಬ ವಿನೂತನ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸಿದೆ.
ಬರದಿಂದ ಕಂಗೆಟ್ಟಿದ್ದ ರೈತ ಕುಟುಂಬವೊಂದಕ್ಕೆ ಖಾತ್ರಿ ಯೋಜನೆಯಡಿ 1.5 ಲಕ್ಷ ರೂ. ಸೌಲಭ್ಯ ಒದಗಿಸಿಕೊಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಡಿ.20ರಿಂದ ಈ ಯೋಜನೆಗೆ ಕಾರ್ಯಾದೇಶವಾಗಲಿದೆ.
ನಮ್ಮ ಉದ್ಯೋಗ ನಮ್ಮ ಹಳ್ಳಿಗೆ! ನಮ್ಮ ಗ್ರಾಮೀಣ ಅಭಿವೃದ್ಧಿ ನಮ್ಮ ಕೈಯಲ್ಲೇ ಎಂಬ ಘೋಷವಾಕ್ಯದಡಿ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈ ಅಭಿಯಾನವನ್ನು ಆರಂಭಿಸಲಾಗಿದೆ. ಈಗಾಗಲೇ ಜಿಲ್ಲೆಯ 22 ಗ್ರಾಮ ಪಂಚಾಯತ್ ಹಾಗೂ 22 ಹೋಬಳಿ ಕೇಂದ್ರಗಳಲ್ಲಿ ಈಗಾಗಲೇ ಗ್ರಾಮಸಭೆ ನಡೆಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಹ ಫಲಾನುಭವಿಗಳನ್ನು
ಗುರುತಿಸುವ ಕಾರ್ಯ ನಡೆದಿದ್ದು, ಬದುಕು ಖಾತ್ರಿ ಅಭಿಯಾನದಡಿ ವೈಯಕ್ತಿಕ ಆಸ್ತಿ ಸೃಜನೆಗಾಗಿ ಅಂದಾಜು 1.50 ಲಕ್ಷ ರೂ.ವರೆಗೆ ಸೌಲಭ್ಯ ಕಲ್ಪಿಸಲು ಅವಕಾಶವಿದೆ. ಹಾಗಾಗಿ ಈ ಅಭಿಯಾನದಲ್ಲಿ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿದರೆ ಉದ್ಯೋಗ ಹರಸಿ ಗುಳೆ ಹೋಗುವುದನ್ನು ತಪ್ಪಿಸುವ ಜತೆಗೆ
ತಮ್ಮ ಹೊಲಗಳಲ್ಲೇ ಕೆಲಸ ಮಾಡಿಕೊಂಡು ಸ್ಥಿರಾಸ್ತಿ ಸೃಜಿಸಿಕೊಳ್ಳಲು ಅವಕಾಶ ಕಲ್ಪಿಸಿದಂತಾಗಲಿದೆ ಎಂಬುದು ಜಿಪಂ ಅಧಿಕಾರಿಗಳ ಮುಖ್ಯ ಉದ್ದೇಶವಾಗಿದೆ.
ಬದುಕು ಖಾತ್ರಿಯಲ್ಲಿ ಯಾವ್ಯಾವ ಆಸ್ತಿ ಸೃಜನೆ: ಮನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ಸಪೋಟ, ದಾಳಿಂಬೆ, ಸೀಬೆ, ನೇರಳೆ, ನುಗ್ಗೆ, ಅಂಜೂರ, ಪಪ್ಪಾಯಿ, ಕರಿಬೇವು, ನಿಂಬೆಹಣ್ಣು ಹಾಗೂ ಕೃಷಿ ಹೊಂಡ, ಜಮೀನಿನಲ್ಲಿ ಕಂದಕ ನಿರ್ಮಾಣ, ಎರೆಹುಳು ತೊಟ್ಟಿ ನಿರ್ಮಾಣ ಸೇರಿದಂತೆ ಇತರೆ ಕಾರ್ಯಗಳನ್ನು
ಕೈಗೆತ್ತಿಕೊಳ್ಳಬಹುದಾಗಿದೆ. ಅಲ್ಲದೇ, ಇವುಗಳ ಜತೆಗೆ ದನದ ಕೊಟ್ಟಿಗೆ ನಿರ್ಮಾಣ, ಕುರಿ ಹಾಗೂ ಮೇಕೆ ಸಾಕಾಣಿಕೆ ಶೆಡ್ ನಿರ್ಮಾಣ, ಕೋಳಿ, ಹಂದಿ, ಮೀನು ಸಾಕಾಣಿಕೆ ಶೆಡ್ ನಿರ್ಮಾಣ, ವೈಯಕ್ತಿಕ ಕೊಳವೆಬಾವಿ ಮರುಪೂರಣ ಘಟಕ, ವೈಯಕ್ತಿಕ ಮನೆಯನ್ನೂ ನಿರ್ಮಿಸಿಕೊಳ್ಳಬಹುದಾಗಿದ್ದು, ಅದಕ್ಕೆ ತಕ್ಕ ಅಗತ್ಯ ಅನುದಾನ ನೀಡಲಾಗುತ್ತದೆ.
10 ಸಾವಿರ ಕಾರ್ಯಾದೇಶ ಪತ್ರ ವಿತರಿಸುವ ಗುರಿ: ಜಿಲ್ಲೆಯಲ್ಲಿ ಭೀಕರ ಬರದಿಂದ ಕಂಗೆಟ್ಟಿರುವ ರೈತರಲ್ಲಿ
ಆತ್ಮವಿಶ್ವಾಸ ಮೂಡಿಸುವ, ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಬದುಕು ಖಾತ್ರಿ ಅಭಿಯಾನದಲ್ಲಿ
ವೈಯಕ್ತಿಕ ಆಸ್ತಿ ಸೃಜನೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹಾಗಾಗಿ ಜಿಲ್ಲೆಯ 7 ತಾಲೂಕುಗಳ ಪೈಕಿ ಸುಮಾರು
10 ಸಾವಿರ ರೈತರಿಗೆ ವೈಯಕ್ತಿಕ ಆಸ್ತಿ ಸೃಜಿಸಿಕೊಳ್ಳಲು ಕಾರ್ಯಾದೇಶ ಪತ್ರವನ್ನು ವಿತರಿಸುವ ಗುರಿ ಹೊಂದಲಾಗಿದೆ. ಆರಂಭಿಕವಾಗಿ ಅಂದಾಜು ನೂರಾರು ಅರ್ಹ ಫಲಾನುಭವಿಗಳಿಗೆ ಕಾರ್ಯಾದೇಶ ಪ್ರಮಾಣ ಪತ್ರ ನೀಡುವ ಕಾರ್ಯಕ್ಕೆ ಡಿ.20ರಂದು ಚಾಲನೆ ದೊರೆಯಲಿದೆ. ಬೆಳೆ ಹಾನಿಗೊಳಗಾದ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಬದುಕು ಖಾತ್ರಿ ಅಭಿಯಾನ ಅತ್ಯಂತ ಉಪಯುಕ್ತವಾಗಲಿದೆ. ಜಿಲ್ಲೆಯ ರೈತರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಿಇಒ ಡಾ| ಕೆ.ವಿ.ರಾಜೇಂದ್ರ ಕೋರಿದ್ದಾರೆ. ಕ್ರಿಯಾ ಯೋಜನೆ ಸಿದ್ಧ: ಜಿಲ್ಲೆಯ 27 ಹೋಬಳಿಗಳಲ್ಲಿ ಗ್ರಾಮಸಭೆ ನಡೆಸಿ, ಶೇ.100 ರಷ್ಟು ಪರಿಹಾರ ನೀಡಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ.
ಎಸ್‌ಸಿ-ಎಸ್‌ಟಿ, ಬಿಪಿಎಲ್ ಸೇರಿದರೆ ಶೇ.90 ರಷ್ಟು ರೈತರಿಗೆ ಪರಿಹಾರ ವಿಧಿಸಿದಂತಾಗಲಿದೆ. ಬರದಿಂದ ಕಂಗೆಟ್ಟಿದ್ದ ರೈತರಿಗೆ ವೈಯಕ್ತಿಕ ಭೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು. ಕೃಷಿ, ಕಂದಾಯ, ಪಶುಸಂಗೋಪನಾ ಇಲಾಖೆ ಸೇರಿ ಎಲ್ಲ ಇಲಾಖೆಗಳು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ನಿರತವಾಗಿವೆ. ಇನ್ನು ಜಿಲ್ಲೆಯಲ್ಲಿ 10 ಮೇವು ಬ್ಯಾಂಕ್, 5 ಗೋಶಾಲೆ ತೆರೆಯಲಾಗಿದೆ.
ಮೇವು ಹೊರ ರಾಜ್ಯಕ್ಕೆ ಹೋಗದಂತೆ ಚೆಕ್‌ಪೋಸ್ಟ್ ಸ್ಥಾಪಿಸಿದ್ದು, ಜಿಲ್ಲಾಧಿಕಾರಿಗಳು ಸಹ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಕುಡಿವ ನೀರಿಗೆ ಸಂಬಂಧಿಸಿದಂತೆ ಪ್ರತಿ ಶನಿವಾರ ಇಒ, ತಹಶೀಲ್ದಾರ್, ಎಇಇಗಳು
ವಿಎ, ಪಿಡಿಒಗಳೊಂದಿಗೆ ಸಭೆ ನಡೆಸಲಿದ್ದಾರೆ. ಜತೆಗೆ ಜಿಪಂ ವತಿಯಿಂದ ಪ್ರತಿ ಶನಿವಾರ ಫೋನ್‌ಇನ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಹಾಯವಾಣಿಯನ್ನು ಆರಂಭಿಸಲಾಗಿದೆ.
ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.