ಜೋರಾಯ್ತು ಗ್ರಾಪಂ ಚುನಾವಣಾ ಕಾವು!

ಆಕಾಂಕ್ಷಿಗಳು ಮುಖಂಡರ ಮನವೊಲಿಕೆಗೆ ಪ್ರಯತ್ನ

Team Udayavani, Dec 14, 2020, 7:01 PM IST

ಜೋರಾಯ್ತು  ಗ್ರಾಪಂ ಚುನಾವಣಾ ಕಾವು!

ಹರಪನಹಳ್ಳಿ: ಚಳಿಗಾಲದ ಸಮಯದಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆಯಾಗಿರುವುದರಿಂದ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆಗಳ ಮೂಲಕ ಪೈಪೋಟಿಕಾವನ್ನುಂಟು ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರ ತೊಡಗಿದ್ದು, ಗ್ರಾಮಗಳ ಪ್ರತಿ ಓಣಿಗಳಲ್ಲಿಯೂ ಚುನಾವಣೆ ಗುಂಗು ಎದ್ದು ಕಾಣುತ್ತಿದೆ.

ಪ್ರತಿಷ್ಠೆ, ಜಾತಿ, ಸಮುದಾಯದಲ್ಲಿ ಏಳಿಗೆ, ರಾಜಕೀಯ ಬಲಾಬಲಗಳ ನಡುವೆ ಜರುಗುತ್ತಿರುವ ಗ್ರಾಪಂ ಚುನಾವಣೆ ಜೋರಾಗಿದೆ. ಗ್ರಾಮಗಳಲ್ಲಿರುವ ಕಟ್ಟೆ, ದೇವಸ್ಥಾನ, ಮಂದಿರಗಳ ಆವರಣ, ಶಾಲೆ-ಕಾಲೇಜು ಮೈದಾನಗಳು, ಹೋಟೆಲ್‌ಗ‌ಳಲ್ಲಿ ಯಾರು ಯಾರು ಚುನಾವಣೆಗೆ ನಿಲ್ಲುತ್ತಿದ್ದಾರೆ, ಯಾವ ಪಕ್ಷ ಅವರಿಗೆ ಬೆಂಬಲ ಕೊಡುತ್ತಿದೆ, ಅವರ ಹಿಂದೆ ಯಾರಿದ್ದಾರೆ,ಅವರು ಗೆದ್ದರೆ ಅಥವಾ ಸೋತರೆ ಮುಂದೇನು ಹೀಗೆ ಹತ್ತು ಹಲವು ರೀತಿಯಲ್ಲಿ ಚರ್ಚೆಗಳು ಪ್ರಾರಂಭವಾಗಿವೆ.

ತಾಲ್ಲೂಕಿನಲ್ಲಿ ಒಟ್ಟು 37 ಗ್ರಾಮ ಪಂಚಾಯ್ತಿಗಳ ಪೈಕಿ ಅಧಿಕಾರವದಿ ಪೂರ್ಣಗೊಳ್ಳದ ಕಂಚಿಕೇರಿ, ಹಾರಕನಾಳು ಗ್ರಾಪಂ ಹೊರತುಪಡಿಸಿ 35 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 7 ಗ್ರಾಪಂಗಳು ಜಗಳೂರು ವಿದಾನಸಭಾಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿವೆ. 1,00,062 ಪುರುಷ, 95,002ಮಹಿಳೆಯರು ಸೇರಿ ಒಟ್ಟು 1,95,064 ಮತದಾರರಿದ್ದಾರೆ.256 ಮೂಲ ಮತಗಟ್ಟೆಗಳು ಹಾಗೂ ಹೆಚ್ಚುವರಿ 45 ಸೇರಿಒಟ್ಟು 298 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 608 ಸದಸ್ಯ ಸ್ಥಾನಗಳಿಗೆ ಫೈಟ್‌ ನಡೆಯಲಿದ್ದು, ಹೀಗಾಗಿ ಚುನಾವಣೆಅಖಾಡಕ್ಕೆ ಪ್ರವೇಶಿಸಲು ಆಕಾಂಕ್ಷಿಗಳು ಮುಖಂಡರಮನವೊಲಿಕೆಗೆ ಪ್ರಯತ್ನ ನಡೆಸುತ್ತಿದ್ದಾರೆ.

ಎರಡನೇ ಹಂತದಲ್ಲಿ ತಾಲ್ಲೂಕಿನಲ್ಲಿ ಚುನಾವಣೆಜರುಗಲಿದ್ದು, ಡಿ.16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಡಿ.27ರಂದುಮತದಾನ ನಡೆಯಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಸ್ಪರ್ಧೆಗಳಿಯುವ ಆಕಾಂಕ್ಷಿಗಳು ಜಾತಿ ಪ್ರಮಾಣ ಪತ್ರ, ಕೋರ್ಟ್‌ ಅಫಿಡವಿಟ್‌ ಸೇರಿದಂತೆ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದರೆ ಮತ್ತೂಂದೆಡೆ ತಾಲೂಕಿನ ವಿವಿಧ ಪಂಚಾಯ್ತಿಗಳಲ್ಲಿ ಇದುವರೆಗೆ ಒಟ್ಟು 78 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪಂಚಾಯ್ತಿ ಚುನಾವಣೆ ಪ್ರಮುಖವಾಗಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್‌ಗೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ಈಗಾಗಲೇ ಶಾಸಕ ಜಿ. ಕರುಣಾಕರರೆಡ್ಡಿ ಗ್ರಾಪಂ ಚುನಾವಣೆ ಸಂಬಂಧ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಆದರೆ ಒಡೆದ ಮನೆಯಂತಾಗಿರುವ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣದಿಂದ ಸೊರಗಿದೆ. ಕೆಪಿಸಿಸಿ ಮಾಜಿ ಅಧ್ಯಕ್ಷ, ಬಳ್ಳಾರಿ ಜಿಲ್ಲೆ ಹಿರಿಯ ನಾಯಕ ಅಲ್ಲಂ ವೀರಭದ್ರಪ್ಪ ಅವರನ್ನು ಹರಪನಹಳ್ಳಿ ಕ್ಷೇತ್ರದ ಗ್ರಾಪಂ ಚುನಾವಣೆ ಉಸ್ತುವಾರಿಯಾನ್ನಾಗಿ ಕೆಪಿಸಿಸಿಯಿಂದ ನೇಮಿಸಲಾಗಿದೆ. ಆದರೆ ಇದುವರೆಗೂಚುನಾವಣೆಗೆ ಸಂಬಂ ಧಿಸಿದಂತೆ ಯಾವುದೇ ಚಟುವಟಿಕೆಗಳು ನಡೆದಿಲ್ಲ.

ಕ್ಷೇತ್ರದಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬುವಂತಾಗಿದ್ದು, ತನ್ನ ಅಸಿತ್ವ ಕಂಡುಕೊಳ್ಳಲುಸಾಕಷ್ಟು ಪ್ರಯತ್ನ ಮಾಡುತ್ತಿದೆ. ಕಳೆದ ವಿಧಾನಸಭಾಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆಗಿಳಿದ್ದ ಅರಸೀಕೆರೆ ಎನ್‌. ಕೊಟ್ರೇಶ್‌ ಅವರು ಪಕ್ಷದ ಸಂಘಟನೆ ವಿಷಯದಲ್ಲಿ ತಟಸ್ಥರಾಗಿರುವುದರಿಂದ ಪಕ್ಷದ ಚೇತರಿಕೆ ಕಂಡು ಬರುತ್ತಿಲ್ಲ .

ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಪ್ರತಿಯೊಂದು ಗ್ರಾಪಂಗೆ ಪ್ರಮುಖರು ಮತ್ತು ಸಹ ಪ್ರಮುಖರು ಎಂದು ನೇಮಕ ಮಾಡಿ ಅವರ ಮೇಲೆ ಉಸ್ತುವಾರಿ ನೇಮಕ ಮಾಡಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ದೇಶನ ನೀಡಲಾಗಿದೆ. ಬಿಜೆಪಿಯ ಜನಪ್ರಿಯ ಕೆಲಸಗಳನ್ನು ಮೆಚ್ಚಿಕೊಂಡಿರುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ.  –ಸತ್ತೂರು ಹಾಲೇಶ್‌, ಬಿಜೆಪಿ ತಾಲ್ಲೂಕಾಧ್ಯಕ್ಷ

ಕಾಂಗ್ರೆಸ್‌ನಲ್ಲಿ ಎಷ್ಟೇ ಬಣಗಳಿದ್ದರೂ ಅವರೆಲ್ಲರೂ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಿದ್ದಾರೆ. ನೇಮಕವಾಗಿರುವ ಉಸ್ತುವಾರಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಸಿ ಗ್ರಾಪಂಗಳ ಆಯಾ ಮುಖಂಡರಿಗೆ ಜವಾಬ್ದಾರಿ ನೀಡುತ್ತೇವೆ. ಆಡಳಿತಪಕ್ಷದ ದುರಾಡಳಿತದಿಂದ ಬೇಸತ್ತಿರುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಮುನ್ನಡಿ ಬರೆಯಲಿದ್ದಾರೆ. ಬೇಲೂರು ಅಂಜಪ್ಪ, ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ

ಪಕ್ಷ ಸಂಘಟನೆ ವಿಷಯದಲ್ಲಿ ಕ್ಷೇತ್ರದಲ್ಲಿ ಜೆಡಿಎಸ್‌ ಹಿಂದೆ ಬಿದ್ದಿರುವುದು ನಿಜ. ಕೆಲವುಪಂಚಾಯ್ತಿಗಳಲ್ಲಿ ಮಾತ್ರ ನಮ್ಮವರು ನಾಮಪತ್ರ ಸಲ್ಲಿಕೆಮಾಡುತ್ತಿದ್ದಾರೆ. ಅವರಿಗೆ ಬೆಂಬಲ ನೀಡುತ್ತೇವೆ. ಈ ಸಂಬಂಧ ಯಾವುದೇ ಸಭೆ ಸಮಾರಂಭ ಮಾಡುವ ಬದಲಾಗಿ ದೂರವಾಣಿ ಮೂಲಕ ಅವರಿಗೆ ನೈತಿಕ ಬಲ ತುಂಬ ಕೆಲಸ ಮಾಡುತ್ತೇವೆ. – ಸಾಸ್ವಿಹಳ್ಳಿ ಚನ್ನಬಸವನಗೌಡ, ಜೆಡಿಎಸ್‌ ತಾಲ್ಲೂಧ್ಯಕ್ಷ

 

ಎಸ್‌.ಎನ್‌. ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.