ಮಿಡತೆ ಪ್ರತ್ಯಕ್ಷ: ಅಧಿಕಾರಿಗಳಿಂದ ಪರಿಶೀಲನೆ
Team Udayavani, Jun 5, 2020, 7:41 AM IST
ಸಿರುಗುಪ್ಪ: ತಾಲೂಕಿನ ಟಿ. ರಾಂಪುರ ಗ್ರಾಮದ ಜಮೀನುಗಳಲ್ಲಿ ಮಿಡತೆಗಳು ಕಂಡುಬಂದಿದ್ದು, ಸ್ಥಳಕ್ಕೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ| ಕೆ. ಮಲ್ಲಿಕಾರ್ಜುನ ಹಾಗೂ ಹಗರಿ ಕೃಷಿ ಸಂಶೋಧನಾ ಕೇಂದ್ರದ ಕೀಟ ಶಾಸ್ತ್ರ ವಿಜ್ಞಾನಿ ಡಾ| ಆನಂದ್‌ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಗರಿ ಕೃಷಿ ಸಂಶೋಧನಾ ಕೇಂದ್ರದ ಕೀಟ ಶಾಸ್ತ್ರ ವಿಜ್ಞಾನಿ ಡಾ| ಆನಂದ್‌ಕುಮಾರ್ ಮಾತನಾಡಿ, ತಾಲೂಕಿನ ಟಿ.ರಾಂಪುರ ಗ್ರಾಮದ ಹಗರಿ ದಡದಲ್ಲಿರುವ ಬಳ್ಳಾರಿ ಜಾಲಿ ಬೆಳೆದಿರುವ ಪ್ರದೇಶದಲ್ಲಿ ಮಿಡತೆಗಳು ಕಂಡುಬಂದಿದ್ದು, ಇವುಗಳನ್ನು ಪರಿಶೀಲಿಸಲಾಗಿ ಈ ಮಿಡತೆಗಳು ಆಫ್ರಿಕಾದ ಮರುಭೂಮಿಯಿಂದ ಬಂದಿರುವ ಮಿಡತೆಗಳಲ್ಲ, ಸ್ಥಳಿಯ ಮಿಡತೆಗಳಾಗಿದ್ದು, ಇವುಗಳು ವಾತಾವರಣ ತಂಪಾಗಿರುವುದರಿಂದ ಸಂತಾನೋತ್ಪತ್ತಿಯಲ್ಲಿ ತೊಡಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಿಡತೆಗಳು ಹೊರಬಂದಿರುವುದರಿಂದ ಗುಂಪು ಗುಂಪಾಗಿ ಕಾಣುತ್ತಿವೆ. ಆದರೆ ಈ ಮಿಡತೆಗಳು ರೈತರು ಬೆಳೆದ ಯಾವುದೇ ಬೆಳೆಗಳನ್ನು ತಿನ್ನುವುದಿಲ್ಲ. ಕೇವಲ ಬಳ್ಳಾರಿ ಜಾಲಿ ಗಿಡದ ಎಲೆಗಳನ್ನು ತಿನ್ನುತ್ತವೆ. ರೈತರ ಬೆಳೆಗೆ ಯಾವುದೇ ರೀತಿಯಲ್ಲಿ ಹಾನಿ ಉಂಟು ಮಾಡುವುದಿಲ್ಲ ಎಂದು ಮಾಹಿತಿ ನೀಡಿದರು.
ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ| ಕೆ. ಮಲ್ಲಿಕಾರ್ಜುನ, ಜಿಲ್ಲಾ ಉಪಕೃಷಿ ನಿರ್ದೇಶಕ ಸಿ.ಆರ್. ಚಂದ್ರಶೇಖರ್, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್, ಕೃಷಿ ಅಧಿ ಕಾರಿ ಹೇಮ್ಲಾನಾಯ್ಕ, ರೈತ ಮುಖಂಡರಾದ ವಾ. ಹುಲಿಗೆಯ್ಯ, ಮಂಜುನಾಥ, ಆದಿಬಸವ, ನಾಗರಾಜ, ಬಸವರಾಜ, ರಾಮಣ್ಣ, ಯಲ್ಲಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.