ಲೋಕ ಅದಾಲತ್: 48 ಪ್ರಕರಣ ಇತ್ಯರ್ಥ
Team Udayavani, Sep 20, 2020, 6:37 PM IST
ಹರಪನಹಳ್ಳಿ: ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಮತ್ತು ಕಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ಶನಿವಾರ ಜರುಗಿದ ಬೃಹತ್ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ಮೂಲಕ ಒಟ್ಟು 48 ಪ್ರಕರಣಗಳು ಇತ್ಯರ್ಥಗೊಳಿಸಿ, ರಾಜಿ ಪ್ರಕರಣದಲ್ಲಿ ಒಟ್ಟು ಮೊತ್ತ 42.8 ಲಕ್ಷರೂ ವಸೂಲಿ ಮಾಡಿ ಪಾವತಿಸಲಾಗಿದೆ ಎಂದು ಹಿರಿಯ ನ್ಯಾಯಾಧಿಧೀಶರಾದ ಉಂಡಿ ಮಂಜುಳಾ ಶಿವಪ್ಪ ಮತ್ತು ಬಿ.ಜಿ. ಶೋಭಾ ತಿಳಿಸಿದರು.
ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಒಟ್ಟು 20 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರಾಜಿ ಸಂಧಾನದ ಮೂಲಕ 19.4 ಲಕ್ಷರೂ ಸಂದಾಯ ಮಾಡಲಾಗಿದೆ. ಹರಪನಹಳ್ಳಿ ಪಟ್ಟಣದ ಎಸ್‌ಬಿಐ ಬ್ಯಾಂಕ್ 7 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ 7.73 ಲಕ್ಷರೂಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದರು.
ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಒಟ್ಟು 28 ಪ್ರಕರಣಗಳು ಇತ್ಯರ್ಥವಾಗಿದ್ದು, ಸಿವಿಲ್ ಪ್ರಕರಣದಲ್ಲಿ 8 ಪ್ರಕರಣಗಳಲ್ಲಿ 9.13 ಲಕ್ಷ ರೂ. ರಾಜಿ ಸಂಧಾನದ ಮೂಲಕ ವಸೂಲಿ ಮಾಡಲಾಗಿದೆ. ಚೆಕ್ ಬೋನಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪ್ರಕರಣಗಳ ಪೈಕಿ 6.82 ಲಕ್ಷ ರೂಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಚೆಂದ್ರೇಗೌಡ, ಹಿರಿಯ ವಕೀಲರಾದ ಕೆ. ಜಗದೀಶ್, ಕೃಷ್ಣಮೂರ್ತಿ, ರಾಮನಗೌಡ, ಕೆ.ಗೋಣಿಬಸಪ್ಪ, ರವಿಶಂಕರ್, ಜಿ.ಎಸ್ .ತಿಪ್ಪೇಶ್, ಆನಂದ, ಬಿ.ಆರ್.ಜಿ. ಮಂಜ್ಯಾನಾಯ್ಕ, ಸಿ.ಹನುಮಂತಪ್ಪ, ನಂದೀಶ್, ಹಾಲೇಶ್, ಕೋಟ್ರೇಶ್, ಉಮೇಶ್, ರವಿಕುಮಾರ್, ಪ್ರಕಾಶ್, ಸಣ್ಣನಿಂಗನಗೌಡ ಬಸವರಾಜ್ ಮಂಜುನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.