ನೆಲಕ್ಕುರುಳಿದ ಲಾರಿ: ಸಂಚಾರ ಅಸ್ತವ್ಯಸ್ತ
Team Udayavani, Jun 12, 2018, 3:18 PM IST
ಬಳ್ಳಾರಿ: ನಗರದ ಎಚ್.ಆರ್.ಗವಿಯಪ್ಪ ವೃತ್ತದ ಬಳಿ ಸೋಮವಾರ ಸರಕು ಸಾಗಾಣೆ ಲಾರಿಯೊಂದು ಆಯತಪ್ಪಿ ನೆಲಕ್ಕೆ ಉರುಳಿಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರೈಲ್ವೇ ಸೇತುವೆ ರಸ್ತೆಯಿಂದ ಗವಿಯಪ್ಪ ವೃತ್ತದ ಮಾರ್ಗವಾಗಿ ಹೊಸಬಸ್ ನಿಲ್ದಾಣದತ್ತ ತಿರುವಿನಲ್ಲಿ ಸಂಚರಿಸುತ್ತಿರುವಾಗ ನಿಯಂತ್ರಣ ತಪ್ಪಿದ ಲಾರಿಯು ವೃತ್ತದಲ್ಲೇ ನೆಲಕ್ಕುರುಳಿ ಬಿದ್ದಿದೆ. ಚಾಲಕ ಪ್ರಾಣಾಪಾಯದಿಂದ
ಪಾರಾಗಿದ್ದಾರೆ. ಮುಖ್ಯರಸ್ತೆ ನಡುವೆ ಲಾರಿ ಬಿದ್ದ ಪರಿಣಾಮ ಕೆಲಕಾಲ ಸಂಚಾರ ದಟ್ಟಣೆ ಹೆಚ್ಚಾಗಿದೆ. ವಿಷಯ ತಿಳಿದ ಸಂಚಾರ ನಿಯಂತ್ರಣ ಹಾಗೂ ಬ್ರೂಸ್‌ಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಸಹಾಯದೊಂದಿಗೆ ಲಾರಿಯನ್ನು ಮೇಲೆತ್ತಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!