ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ


Team Udayavani, Jul 16, 2019, 3:50 PM IST

ballary-tdy-3..

ಬಳ್ಳಾರಿ: ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಮಾತನಾಡಿದರು.

ಬಳ್ಳಾರಿ: ಜಿಲ್ಲೆಯ ಎಲ್ಲ ನಗರ ಸಂಸ್ಥೆಗಳಲ್ಲಿ ಬಾಕಿ ಇರುವ ವಿವಿಧ ಕಾಮಗಾರಿಗಳನ್ನು ನಿಗದಿಪಡಿಸಿದ ಸಮಯದಲ್ಲಿ ಮುಗಿಸಬೇಕು ಹಾಗೂ ಆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಅವರು ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್‌ಎಫ್‌ಸಿ, 14ನೇ ಹಣಕಾಸು ಯೋಜನೆ, ಡಿಎಂಎಫ್‌, ಎಚ್ಕೆಆರ್‌ಡಿ ಹಾಗೂ ಇತರೆ ಯೋಜನೆಗಳ ಅನುಷ್ಠಾನಗೊಳಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ನೀಡಿರುವ ಟೆಂಡರ್‌ ಕಾಮಗಾರಿಗಳು ಶೇ. 100ರಷ್ಟು ಮುಗಿಯದಿದ್ದಲ್ಲಿ ಗುತ್ತಿಗೆ ನೀಡಿದ ಗುತ್ತಿಗೆದಾರರನ್ನು ಕರೆಸಿ ಅವರ ಜೊತೆ ಸಭೆ ನಡೆಸಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳು ಸೂಚನೆ ನೀಡಬೇಕು. ಟೆಂಡರ್‌ಗೆ ಸಂಬಂಧಿಸಿದ ಹಣವನ್ನು ಅಥವಾ ಬಾಕಿ ಉಳಿಸಿಕೊಂಡಿರುವ ಬಿಲ್ಲುಗಳನ್ನು ಚುಕ್ತಾ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಯಮಾವಳಿ ಪ್ರಕಾರ ಟೆಂಡರ್‌ ಪ್ರಕ್ರಿಯೆ ಮುಗಿದು ನಂತರ ಗುತ್ತಿಗೆದಾರರು ಕೆಲಸವನ್ನು ಆಯಾ ನಿಗದಿಪಡಿಸಿದ ಅವಧಿಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಬೇಕು. ಒಂದುವೇಳೆ ಟೆಂಡರ್‌ ಪಡೆದ ನಂತರ ಕೆಲಸವನ್ನು ಕೈಗೆತ್ತಿಕೊಳ್ಳದಿದ್ದರೆ ಅಂತಹ ಗುತ್ತಿಗೆದಾರರ ಟೆಂಡರ್‌ನ್ನು ನಿಯಮಾವಳಿ ಪ್ರಕಾರ ನನ್ನ ಗಮನಕ್ಕೆ ತಂದು ರದ್ದುಗೊಳಿಸಬೇಕು ಎಂದು ಹೇಳಿದ ಡಿಸಿ ನಕುಲ್ ಅವರು ಈ ವಿಷಯದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದರು.

ಬಾಕಿ ಹಣ ಚುಕ್ತಾ ಮಾಡಿ: ಈಗಾಗಲೇ ಜಿಲ್ಲೆಯ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರ ಮೇಲೆ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಕೂಡಲೇ ಪರಿಶೀಲಿಸಿ ಹಾಗೂ ಅದರ ಗುಣಮಟ್ಟವನ್ನು ನೋಡಿಕೊಂಡು ಅದಕ್ಕೆ ಸಂಬಂಧಿಸಿದ ಬಾಕಿ ಇರುವ ಹಣವನ್ನು ಕೂಡಲೇ ಬಿಡುಗಡೆ ಮಾಡಿ, ಇನ್ನುಳಿದ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಕೈಗೆತ್ತಿಕೊಂಡು ಕೊಟ್ಟಿರುವ ಅವಧಿಯಲ್ಲಿ ಕಾಮಗಾರಿಗಳನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 2009ರಿಂದ 2019ರವರೆಗೆ ವಿವಿಧ ಯೋಜನೆಗಳ ಅಡಿಯಲ್ಲಿ ನಡೆದ ಕಾಮಗಾರಿಗಳ ದಾಖಲೆಗಳ ಪರಿಶೀಲನೆ ಮಾಡಿ, ಅದಕ್ಕೆ ಸಂಬಂಧಿಸಿದ ಮಾಹಿತಿ ತಿಳಿದುಕೊಂಡು, ಈ ಅವಧಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರವೇ ಪ್ರಾರಂಭಿಸಬೇಕು ಎಂದು ತಾಕೀತು ಮಾಡಿದರು. ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.