ಆಯುಷ್ಮಾನ್‌ ಕಾರ್ಡ್‌ ನೋಂದಣಿ ಕಡ್ಡಾಯ ಮಾಡಿಸಿ

ಆರೋಗ್ಯ ಕಾರ್ಡ್‌ಗಳನ್ನು ವಿತರಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು

Team Udayavani, Oct 18, 2022, 5:57 PM IST

ಆಯುಷ್ಮಾನ್‌ ಕಾರ್ಡ್‌ ನೋಂದಣಿ ಕಡ್ಡಾಯ ಮಾಡಿಸಿ

ಹೊಸಪೇಟೆ: ವಿಜಯನಗರ ಜಿಲ್ಲಾದ್ಯಂತ 137 ಗ್ರಾಮ ಪಂಚಾಯಿತಿಗಳು ಇದ್ದು, 108 ಗ್ರಾಮ ಒನ್‌ ಪ್ರಾಂಚೈಸಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ಪ್ರಾಂಚೈಸಿಯು ದಿನಕ್ಕೆ 1000 ಅಭಾ ಕಾರ್ಡ್‌ ನೋಂದಣಿಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ವಿಜಯನಗರ ಅಪರ ಜಿಲ್ಲಾಧಿ ಕಾರಿ ಟಿ.ವಿ. ಪ್ರಕಾಶ್‌ ತಿಳಿಸಿದರು.

ನಗರದ ತಹಶೀಲ್ದಾರ್‌ ಕಚೇರಿಯ ಕೇಸ್ವಾನ್‌ ಕೇಂದ್ರದಲ್ಲಿ ಆಯೋಜಿಸಲಾದ ಸೋಮವಾರ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ “ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ” ಆರೋಗ್ಯ ಸೇವೆ ಕಾರ್ಡ್‌ಗಳನ್ನು ಒದಗಿಸುವ ಕುರಿತು ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ 13ರಿಂದ 14 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, 108 ಗ್ರಾಮಒನ್‌ ಪ್ರಾಂಚೈಸಿಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ಪ್ರಾಂಚೈಸಿಯು ದಿನಕ್ಕೆ ಒಂದು ಸಾವಿರ ಅಭಾ ಕಾರ್ಡ್‌ ನೋಂದಣಿಯನ್ನು ಮಾಡಬೇಕು. ಇದರಿಂದ ಸುಮಾರು 15-16ದಿನಗಳಲ್ಲಿ ನಮ್ಮ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಆಯುಷ್ಮಾನ್‌ ಭಾರತ್‌ ಯೋಜನೆಯು ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಡತನದಲ್ಲಿರುವ ಸಾರ್ವಜನಿಕರಿಗೆ ಒದಗಿಸುವುದರಿಂದ 5ಲಕ್ಷದವರೆಗೆ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಲು ಸಹಕಾರಿಯಾಗುತ್ತದೆ. ವಿಜಯನಗರ ಜಿಲ್ಲಾದ್ಯಂತ ಪ್ರತಿಯೊಬ್ಬ ನಾಗರೀಕರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಆರೋಗ್ಯ ಕಾರ್ಡ್‌ ವಿತರಿಸುವ ಭಾಗವಾಗಿ ಗ್ರಾಮ ಒನ್‌ನ ಪ್ರಾಂಚೈಸಿದಾರರು ನ್ಯಾಯಬೆಲೆ ಅಂಗಡಿಯವರ ಸಹಕಾರದೊಂದಿಗೆ
ಕಾರ್ಯನಿರ್ವಹಿಸಬೇಕು ಎಂದರು.

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಆರೋಗ್ಯ ಕಾರ್ಡ್‌ಗೆ ನೋಂದಣಿಯಾಗಿ ಕಾರ್ಡ್‌ಗಳನ್ನು ಪಡೆದುಕೊಂಡಲ್ಲಿ ಬಿಪಿಎಲ್‌ ಕುಟುಂಬಕ್ಕೆ 1 ವರ್ಷಕ್ಕೆ ಗರಿಷ್ಠ ರೂ. 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದ್ದು, ಎಪಿಎಲ್‌ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ ಚಿಕಿತ್ಸಾ ವೆಚ್ಚದ ಶೇ.30 ರಷ್ಟು ರಿಯಾಯಿತಿ ಸರ್ಕಾರದಿಂದ ಪಾವತಿ ಮತ್ತು ಎಪಿಎಲ್‌ ನವರಿಗೆ ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ ಎಂದರು.

ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ಶಾಲೆಗಳು, ಕಿತ್ತೂರುರಾಣಿ ಚೆನ್ನಮ್ಮ, ಏಕಲವ್ಯ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಕೂಡ ಕಡ್ಡಾಯವಾಗಿ ನೋಂದಣಿ ಮಾಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಬೇಕು ಎಂದು ಅವರು ತಿಳಿಸಿದರು. ಗ್ರಾಮಒನ್‌ ಕೇಂದ್ರಗಳು ಮತ್ತು ನ್ಯಾಯಬೆಲೆ ಅಂಗಡಿಗಳು ಚುರುಕುತನದಿಂದ ಕೆಲಸ ಮಾಡಿದರೆ ಮಾತ್ರ ಜಿಲ್ಲೆಯು ಅಭಾ ಕಾರ್ಡ್‌ ನೋಂದಣಿಯಲ್ಲಿ ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಗುತ್ತದೆ. ಆಯುಷ್ಮಾನ್‌ ಭಾರತ್‌ ಕಾರ್ಡ್‌ಗಳನ್ನು ನೋಂದಣಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಅಪರ ಜಿಲ್ಲಾ ಧಿಕಾರಿಗಳು ಹೇಳಿದರು.

ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಮಾತನಾಡಿ, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ, ಶಾಲೆ-ಕಾಲೇಜುಗಳಲ್ಲಿ ಹಾಗೂ ಗ್ರಾಮಗಳಲ್ಲಿ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಿಗೆ ಗ್ರಾಮಒನ್‌ನ ಪ್ರಾಂಚೈಸಿದಾರರು ಹಾಗೂ ನ್ಯಾಯಬೆಲೆ ಅಂಗಡಿಯವರು ತೆರಳಿ ಆರೋಗ್ಯ ಕಾರ್ಡ್‌ನ್ನು ವಿತರಿಸುವ ಕೆಲಸ ಮಾಡಬೇಕು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯ ಕಾರ್ಡ್‌ ವಿತರಿಸಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.

ಪ್ರತಿಯೊಂದು ಗ್ರಾಮಪಂಚಾಯಿತಿಗಳಡಿ ಬರುವ ಗ್ರಾಮಒನ್‌ ಕೇಂದ್ರಗಳ ಪ್ರಾಂಚೈಸಿದಾರರು ಆ ವ್ಯಾಪ್ತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಯವರ ಪರಸ್ಪರ ಸಂಪರ್ಕವನ್ನು ಇಟ್ಟುಕೊಂಡು ಆರೋಗ್ಯ ಕಾರ್ಡ್‌ಗಳನ್ನು ವಿತರಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಎಲ್ಲಾ ಶಾಲಾ ಮಕ್ಕಳು ಮತ್ತು ಅವರ ಕುಟುಂಬದ ಸದಸ್ಯರು ಸೇರಿದಂತೆ ಆಯುಷ್ಮಾನ್‌ ಆರೋಗ್ಯ ಕಾರ್ಡ್‌ ಅನ್ನು ಪಡೆಯಲು ನೋಂದಣಿ ಮಾಡಿಕೊಳ್ಳಲು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

ಆಯುಷ್ಮಾನ್‌ ಆರೋಗ್ಯ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಲು ಆ ಶಾಲೆಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಒನ್‌ ಕೇಂದ್ರಗಳಲ್ಲಿಯೇ ನೋಂದಣಿ ಮಾಡಿಕೊಳ್ಳಬೇಕು. ಅದರಂತೆಯೇ ಜಿಲ್ಲೆಯಲ್ಲಿನ ಸರ್ಕಾರಿ, ಖಾಸಗಿ, ಅನುದಾನಿತ, ಪದವಿ ಪೂರ್ವ ಕಾಲೇಜುಗಳಲ್ಲಿಯೂ ಸಹ ಎಲ್ಲಾ ವಿದ್ಯಾರ್ಥಿಗಳು ನೋಂದಣಿ ಮಾಡಿಸಬೇಕು ಎಂದು ಅ ಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರದಿಂದ ಆಯುಷ್ಮಾನ ಭಾರತ್‌ ಆರೋಗ್ಯ ಕಾರ್ಡ್‌ ನೋಂದಣಿ ಸ್ಪ್ರೆಡ್‌ಶೀಟ್‌ ತೆರೆಯಲಾಗುತ್ತಿದ್ದು, ಪ್ರತಿ ದಿನ ಅಭಾ ಕಾರ್ಡ್‌ ನೋಂದಣಿಯಾದ ಕುರಿತು ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸಲೀಂ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ| ಭಾಸ್ಕರ್‌ ಅವರು ಮಾತನಾಡಿದರು. ಹೊಸಪೇಟೆ ತಾಲೂಕು ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ರಮೇಶ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಶೇಖರ್‌, ಜಿಲ್ಲಾಧಿಕಾರಿ ಕಚೇರಿ ತಹಶೀಲ್ದಾರ್‌ ಗುರುಬಸವರಾಜ, ಹೊಸಪೇಟೆ ತಹಶೀಲ್ದಾರ್‌ ವಿಶ್ವಜಿತ್‌ ಮೆಹತಾ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್‌ ವಿರುಪಾಕ್ಷಪ್ಪಶೆಟ್ಟಿ, ಆಹಾರ ಶಿರಸ್ತೇದಾರ್‌ ಎಚ್‌. ನಾಗರಾಜ ಇದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.