ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಿ
Team Udayavani, Jun 23, 2020, 9:58 AM IST
ಕೂಡ್ಲಿಗಿ: ಜೂ. 25ರಂದು ನಡೆಯಲಿರುವ 10ನೇ ತರಗತಿ ಪರೀಕ್ಷೆ ಅಂಗವಾಗಿ ತಾಲೂಕು ಕಚೇರಿಯಲ್ಲಿ ಶನಿವಾರ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ತಹಶೀಲ್ದಾರ ಎಸ್. ಮಹಬಲೇಶ್ವರ ಮಾತನಾಡಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪರೀಕ್ಷೆ ಕೇಂದ್ರಗಳಲ್ಲಿ ಪ್ರತಿ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್ ಧರಿಸಿ ಪರೀಕ್ಷೆ ಕೇಂದ್ರದ ಒಳಗೆ ಬಿಡಬೇಕು. ಕಂಟೇನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು. ಇತರೆ ವಿದ್ಯಾರ್ಥಿಗಳಲ್ಲಿ ಆರೋಗ್ಯದಲ್ಲಿ ವ್ಯಾತ್ಯಾಸ ಕಂಡುಬಂದರೆ ಅಂಥ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಸಿ ಪರೀಕ್ಷೆಯನ್ನು ಬರೆಸಬೇಕು ಎಂದರು.
ಆರೋಗ್ಯ ಸಿಬ್ಬಂದಿ ನೇಮಿಸಿ 20 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 4,340 ವಿದ್ಯಾರ್ಥಿಗಳ ಪರೀಕ್ಷೆ ಬರೆಯುತ್ತಿದ್ದು ಪರೀಕ್ಷೆ ಮುಂಚಿತವಾಗಿ ಕಡ್ಡಾಯವಾಗಿ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಬರಲು ಸಾರಿಗೆ ವ್ಯವಸ್ಥೆ ಮಾಡಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಸಾರಿಗೆ ವ್ಯವಸ್ಥೆ ಲೋಪವಾದಲ್ಲಿ ಸಹಾಯವಾಣಿಗೆ ಫೋನ್ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿ ಇರುವ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ಗಳನ್ನು ಪೂರೈಸುವಂತೆ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ತಾಪಂ ಇಒ ಜಿ.ಎಂ. ಬಸಣ್ಣ, ಸಿಪಿಐ ಪಂಪನಗೌಡ, ಸಂಪನ್ಮೂಲ ಶಿಕ್ಷಣಾಧಿಕಾರಿ ಜಮೀಲ್ ಅಹಮ್ಮದ್, ಕಚೇರಿ ಅಧಿಧೀಕ್ಷಕ ರೇವಣಸಿದ್ದಯ್ಯ, ಪಪಂ ಮುಖ್ಯಾಧಿ ಕಾರಿ ಸಿ. ಪಕೃದ್ಧೀನ್ ತಾಲೂಕು ಅಧಿಕಾರಿಗಳು ಹಾಗೂ ಪಿಡಿಒಗಳು, ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.