ಭೀಮಾನಾಯ್ಕ, ಮರುಳಸಿದ್ದಪ್ಪ ಸದಸ್ಯತ್ವ ರದ್ದು

ಹೈಕೋರ್ಟ್‌ ಆದೇಶದಂತೆ ಮರು ಪರಿಶೀಲನೆ­! ಮತ್ತೂಮ್ಮೆ ಹೈಕೋರ್ಟ್‌ ಮೊರೆ ಹೋಗಲು ಶಾಸಕರ ಸಿದ್ಧತೆ

Team Udayavani, Mar 29, 2021, 8:50 PM IST

Untitled-10g

ಬಳ್ಳಾರಿ: ಹೈಕೋರ್ಟ್‌ ಆದೇಶದಂತೆ ಮರು ಪರಿಶೀಲನೆ ಮಾಡಿರುವ ಕಲಬುರಗಿ ಪ್ರಾಂತದ ರಾಯಚೂರಿನ ಸಹಕಾರಿ ಸಂಘಗಳ ಜಂಟಿ ನಿಬಂಧಕ ಚವ್ಹಾಣ ಗೋಪಾಲ್‌ ಅವರು ಪುನಃ ರಾಬಕೊ ಹಾಲು ಒಕ್ಕೂಟದ ನಿರ್ದೇಶಕರಾದ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಮತ್ತು ಎಚ್‌.ಮರುಳಸಿದ್ದಪ್ಪ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಪುನಃ ಈಚೆಗೆ ಆದೇಶ ಹೊರಡಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಮತ್ತು ಎಚ್‌. ಮರುಳಸಿದ್ದಪ್ಪ ಅವರು ರಾಬಕೊ ಹಾಲು ಒಕ್ಕೂಟದ ನಿರ್ದೇಶಕರಾಗಿರುವ ಪ್ರಕ್ರಿಯೆ ಸಮರ್ಪಕವಾಗಿ ಇಲ್ಲ ಎಂದು ಆಕ್ಷೇಪಿಸಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೆ.ಪ್ರತಾಪರೆಡ್ಡಿ ಎನ್ನುವವರು ಕೆಲ ವರ್ಷಗಳ ಹಿಂದೆ ದೂರು ನೀಡಿದ್ದರು. ಇವರ ದೂರನ್ನು ಆಲಿಸಿ ವಿಚಾರಣೆ ನಡೆಸಿದ್ದ ಕಲಬುರಗಿ ಪ್ರಾಂತದ ರಾಯಚೂರು ಸಹಕಾರ ಸಂಘಗಳ ಜಂಟಿ ನಿಬಂಧಕ ಚವ್ಹಾಣ ಗೋಪಾಲ ಅವರು, ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದರು. ನಿಬಂಧಕರ ಆದೇಶವನ್ನು ಪ್ರಶ್ನಿಸಿದ್ದ ಶಾಸಕ ಭೀಮಾನಾಯ್ಕ ಅವರು, ವಿಚಾರಣೆ ವೇಳೆ ನನ್ನ ಅಭಿಪ್ರಾಯವೇ ಕೇಳದೇ ಆದೇಶ ಹೊರಡಿಸಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಇವರ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್‌ ಸದಸ್ಯತ್ವ ರದ್ದುಗೊಳಿಸಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಸೂಚನೆ ನೀಡಿತ್ತು. ಹೈಕೋರ್ಟ್‌ ಸೂಚನೆಯಂತೆ ಮತ್ತೂಮ್ಮೆ ಪರಿಶೀಲನೆ ನಡೆಸಿದ ಕಲಬುರಗಿ ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಚವ್ಹಾಣ ಗೋಪಾಲ ಅವರು ಪುನಃ 2019, ಏ.3ರಂದು ನಡೆದ ಚುನಾವಣೆಯಲ್ಲಿ ಶಾಸಕ ಭೀಮಾನಾಯ್ಕ, ಎಚ್‌. ಮರುಳಸಿದ್ದಪ್ಪ ಅವರು ನಿರ್ದೇಶಕರಾಗಿ ಆಯ್ಕೆಯಾಗಿದ್ದನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ತಾಲೂಕು ಅಡವಿ ಆನಂದದೇವನಹಳ್ಳಿಯ ಕಾಯಂ ನಿವಾಸಿಯಾಗದೇ ಅಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯತ್ವ ಪಡೆದಿರುವುದು ಭೀಮಾನಾಯ್ಕ ಅವರ ರಾಬಕೊ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನವನ್ನು ರದ್ದುಪಡಿಸಲಾಗಿದೆ.

ಇನ್ನು ಎಚ್‌.ಮರುಳಸಿದ್ದಪ್ಪ ಅವರು ಒಕ್ಕೂಟದಲ್ಲಿ ನೌಕರರಾಗಿದ್ದಾಗಲೇ ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ನಿಯಮವನ್ನು ಉಲ್ಲಂಘಿ ಸಿದ್ದಾರೆ. ಹಾಗಾಗಿ ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ ಎಂದವರು ಆದೇಶದಲ್ಲಿ ತಿಳಿಸಿದ್ದಾರೆ. ದ್ವೇಷದ ರಾಜಕಾರಣ: ಸಹಕಾರಿ ಸಂಘಗಳ ಜಂಟಿ ನಿಬಂಧಕರ ಆದೇಶವನ್ನು ಪುನಃ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಭೀಮಾನಾಯ್ಕ ಅವರು ಮತ್ತೂಮ್ಮೆ ಹೈಕೋರ್ಟ್‌ ಮೊರೆ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ.

ನ್ಯಾಯಾಲಯದ ನಿರ್ದೇಶನದಂತೆ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆ ಆಗಿದ್ದೇನೆ. ಹೀಗಾಗಿ ನನ್ನ ಆಯ್ಕೆ ಸಂಪೂರ್ಣ ಕಾನೂನು ಬದ್ಧವಾಗಿದೆ. ಆದರೆ, ಈಗ ದ್ವೇಷದ ರಾಜಕಾರಣದಿಂದ ಆ ಸ್ಥಾನದಿಂದ ವಜಾಗೊಂಡಿದ್ದೇನೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಆರೋಪಿಸಿದ್ದಾರೆ.

ರಾಬಕೊ ಹಾಲು ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿರುವ ಪ್ರಾಂತ ಸಹಕಾರಿ ಸಂಘಗಳ ಜಂಟಿ ನಿಬಂಧಕರ ಆದೇಶಕ್ಕೆ ಸಂಬಂ  ಧಿಸಿದಂತೆ ಪ್ರತಿಕ್ರಿಯಿಸಿರುವ ಭೀಮಾನಾಯ್ಕ ಅವರು, ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ನೇಮಿರಾಜ ನಾಯ್ಕ, ಸಹಕಾರಿ ಸಚಿವ ಎಸ್‌.ಟಿ. ಸೋಮಶೇಖರ್‌, ಶಾಸಕ ಸೋಮಶೇಖರ ರೆಡ್ಡಿ, ಕೆಎಂಎಫ್‌ನ ಕೆಲ ಅಧಿ ಕಾರಿಗಳು, ಕೆಲ ನಿರ್ದೇಶಕರು ಪಿತೂರಿ ಮಾಡಿ ನನ್ನನ್ನು ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಒತ್ತಡಕ್ಕೆ ಸಿಲುಕಿದ ಸಹಕಾರಿ ಸಂಘಗಳ ನಿಬಂಧಕರು ಬಿಜೆಪಿ ಪರ ಕೆಲಸ ಮಾಡಿದ್ದಾರೆ. ರಾಬಕೊ ಚುನಾವಣೆ ವೇಳೆ ಬಿಜೆಪಿಗರು ಚುನಾವಣೆ ಮುಂದೂಡಿಸಲು ಯತ್ನಿಸಿದ್ದರು. ಆಗ ಧಾರವಾಡ ಮತ್ತು ಕಲಬುರಗಿ ನ್ಯಾಯಾಲಯಗಳ ನಿರ್ದೇಶನದಂತೆ ಚುನಾವಣೆ ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ನಾನು ಗೆದ್ದಿದ್ದೇನೆ. ಅಲ್ಲಿಗೆ ನನ್ನ ಆಯ್ಕೆ ಸಂಪೂರ್ಣ ನ್ಯಾಯಸಮ್ಮತ. ಆದರೂ ನನ್ನ ಆಯ್ಕೆ ಪ್ರಶ್ನಿಸಿರುವುದು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಉತ್ತಮ ಉದಾಹರಣೆ ಎಂದರು.

ನಾನು ಹಾಲು ಉತ್ಪಾದಕ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಈ ಹಿಂದೆ ಸೋಮಶೇಖರ ರೆಡ್ಡಿ ಕೆಎಂಎಫ್‌ ಅಧ್ಯಕ್ಷ ಆಗಿದ್ದರು. ಅವರು ಎಂದು ಹಾಲು ಉತ್ಪಾದಕರಾಗಿದ್ದರು ಎಂಬುದನ್ನು ತಿಳಿಸಿರಲಿಲ್ಲ. ಆಗ ಎಲ್ಲವೂ ನಡೆಯಿತು. ನಾನೀಗ ನಿಜವಾಗಿಯೂ ಹಾಲು ಉತ್ಪಾದಕ. ಹಾಗಿದ್ದರೂ ನನ್ನ ಮೇಲೆ ಇಲ್ಲ ಸಲ್ಲದ ಪಿತೂರಿ ಮಾಡಿ ನನ್ನನ್ನು ಅನರ್ಹಗೊಳಿಸಿದ್ದಾರೆ ಎಂದು ಅವರು ಕಿಡಿಕಾರಿದರು. ನಾನು ಖಂಡಿತಾ ಮತ್ತೆ ಹೈಕೋರ್ಟ್‌ಗೆ ಹೋಗಲಿದ್ದೇನೆ. ಹೈಕೋರ್ಟ್‌ನಲ್ಲಿ ನನಗೆ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇದೆ ಎಂದ ಅವರು ಮುಂದೆ ನಮ್ಮ ಸರ್ಕಾರ ಅಧಿ ಕಾರಕ್ಕೆ ಬಂದ ಮೇಲೆ ಬಿಜೆಪಿಗರ ಬಣ್ಣ ಬಯಲು ಮಾಡಲಿದ್ದೇನೆ ಎಂದರು.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.