ಈಶಾನ್ಯ ಪದವೀಧರರ ಚುನಾವಣೆ: ಹರಪನಹಳ್ಳಿಯಲ್ಲಿ ಮ.1 ಗಂಟೆಯವರೆಗೆ ಶೇ.33.8 ರಷ್ಟು ಮತದಾನ
Team Udayavani, Jun 3, 2024, 2:59 PM IST
ಹರಪನಹಳ್ಳಿ: ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಪಟ್ಟಣದಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದೆ. ಮಧ್ಯಾಹ್ನ1 ಗಂಟೆ ವೇಳೆಗೆ ಶೇ.33.8 ರಷ್ಟು ಮತದಾನವಾಗಿದೆ.
ಪಟ್ಟಣ ಜೂನಿಯರ್ ಕಾಲೇಜಿನಲ್ಲಿ ಸ್ಥಾಪಿಸಿರುವ ಮೂರು ಮತಗಟ್ಟೆ ಕೇಂದ್ರಗಳುಗೆ ಬೆಳಗ್ಗಿನಿಂದಲೇ ಮತದಾರರು ಉತ್ಸಾಹದಿಂದ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಹಮ್ಮಸ್ಸಿನಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಕಳೆದ ರಾತ್ರಿ ಮಳೆ ಸುರಿದ ಪರಿಣಾಮ ಇಂದು ತಂಪೆರೆದ ವಾತಾವರಣ ಇದ್ದರಿಂದ ಬಿಸಿಲಿನ ತಾಪ ಮತದಾರಿಗೆ ತಾಕಲಿಲ್ಲ
ಹಿರಿಯ ನಾಗರಿಕರಿಗೆ ನೇರವಾಗಿ ಮತಗಟ್ಟೆ ಒಳಗಡೆ ಪ್ರವೇಶಿಸಿ ಮತಚಲಾಯಿಸಲು ಚುನಾವಣಾ ಸಿಬ್ಬಂದಿ ಅವಕಾಶ ಮಾಡಿಕೊಟ್ಟರು.
ಒಟ್ಟು 3549 ಮತದಾರರ ಪೈಕಿ ಒಂದು ಗಂಟೆ ವೇಳೆಗೆ 1050 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮತಗಟ್ಟೆ ಕೇಂದ್ರಕ್ಕೆ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಶಿಲ್ದಾರ ಗಿರೀಶಬಾಬು ಆಗಮಿಸಿ ಪರಿಶೀಲನೆ ನಡೆಸಿದರು.
ಪಟ್ಟಣದ ಪ್ರಸಿದ್ಧ ತೆಗ್ಗಿನ ಮಠದ ವರಸದ್ಯೋಜಾತ ಶ್ರೀಗಳು ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
ಮತಗಟ್ಟೆ ಸುತ್ತ ಸೂಕ್ತ ಪೊಲೀಸ್ ಬಂದಬಸ್ತ್ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.