ಮೊರಾರ್ಜಿ ಕಿತ್ತೂರು ರಾಣಿ ಚನ್ನಮ್ಮ ವಸತಿಶಾಲೆ ಆಯ್ಕೆಗೆ ಪರೀಕ್ಷೆ
Team Udayavani, Mar 11, 2019, 9:19 AM IST
ಸಂಡೂರು: ಸಂಡೂರು ಪಟ್ಟಣದ 9 ಕೇಂದ್ರಗಳಲ್ಲಿ ಮೊರಾರ್ಜಿ-ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಆಯ್ಕೆ ಪರೀಕ್ಷೆಗೆ 2053 ವಿದ್ಯಾರ್ಥಿಗಳು ಹಾಜರಾಗಿದ್ದು, 81 ವಿದ್ಯಾರ್ಥಿಗಳು ಗೈರಾಗಿದ್ದರು.
ಮೊರಾರ್ಜಿ ವಸತಿ ಶಾಲೆ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 6ನೇ ತರಗತಿಗೆ ವಸತಿಯುತ ಶಾಲೆಗೆ ಸೇರಲು ಪರೀಕ್ಷೆಯನ್ನು 9 ಕೇಂದ್ರಗಳಲ್ಲಿ ನಡೆಸಲಾಯಿತು, ಪರೀಕ್ಷೆಗೆ 2,134 ವಿದ್ಯಾರ್ಥಿಗಳು
ಹೆಸರು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 81 ವಿದ್ಯಾರ್ಥಿಗಳು ಗೈರಾಗಿದ್ದರು.
ಸರ್ಕಾರಿ ಬಾಲಕಿಯರ ಪೌಢಶಾಲೆ, ಎಪಿಎಂಸಿ ಪ್ರೌಢಶಾಲೆ, ಉರ್ದು ಪ್ರೌಢಶಾಲೆ, ಎಸ್‌ಇಎಸ್ ಬಾಲಕಿಯರ ಪ್ರೌಢಶಾಲೆ, ಕೃಪಾನಿಲಯ ಪ್ರೌಢಶಾಲೆ 2 ಕೇಂದ್ರಗಳು, ರಾಮಕೃಷ್ಣ ಪ್ರೌಢಶಾಲೆ, ಛತ್ರಪತಿ ಶಿವಾಜಿ ವಿದ್ಯಾಮಂದಿರರದಲ್ಲಿ ನಡೆದವು.
ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಎಸ್.ಡಿ.ಸಂತಿ, ನೋಡಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ವಸತಿ ಶಾಲೆಗಳ ಪ್ರಾಚಾರ್ಯರಾದ ಕೊಟ್ರೇಶ್ ವಿಶೇಷ ಅಧಿಕಾರಿಯಾಗಿ ನೇಮಕಗೊಂಡು ಕಾರ್ಯನಿರ್ವಹಿಸಿದರು.
150 ಸಿಬ್ಬಂದಿ ಕಾರ್ಯನಿರ್ವಹಿಸಿದರು. ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು. 9 ಸಿಅರ್‌ಪಿಗಳು ಸಿಟ್ಟಿಂಗ್ ಸ್ಕಾ ಡ್ ಅಗಿ ಕಾರ್ಯನಿರ್ವಹಿಸಿದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಐ.ಅರ್. ಅಕ್ಕಿ ತಿಳಿಸಿದರು. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿಬಂದೋಬಸ್ತ್ ಕಲ್ಪಿಸಿದ್ದರು.
ಸಿರುಗುಪ್ಪ: 1,885 ವಿದ್ಯಾರ್ಥಿಗಳು ಹಾಜರು
ಸಿರುಗುಪ್ಪ: ನಗರದ ಎಸ್‌ಇಎಸ್ ಬಾಲಕಿಯರ ಪ್ರೌಢಶಾಲೆ, ಎಸ್‌ಇಎಸ್ ಪದವಿ ಕಾಲೇಜು, ವಿಜಯಮೇರಿ, ಶಾಂತಿನಿಕೇತನ ಶಾಲೆಗಳಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿಯ ಪ್ರವೇಶ ಪರೀಕ್ಷೆಗಳು ನಡೆದವು.
ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಇಒ ಪಿ.ಡಿ. ಭಜಂತ್ರಿ, 4 ಪರೀಕ್ಷಾ
ಕೇಂದ್ರಗಳಲ್ಲಿ ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 1,885 ಮಕ್ಕಳು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಬರೆಯುತ್ತಿದ್ದಾರೆ. 8 ಜನ ಮುಖ್ಯ ಅಧಿಧೀಕ್ಷಕರು, ಸಹಾಯಕರು, ಮೇಲ್ವಿಚಾರಕರು ಸೇರಿದಂತೆ 79 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಹರಪನಹಳ್ಳಿ: 2846 ಮಕ್ಕಳ ನೋಂದಣಿ- 63 ವಿದ್ಯಾರ್ಥಿಗಳು ಗೈರು
ಹರಪನಹಳ್ಳಿ: ಪ್ರಸಕ್ತ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಆಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳ
ಪ್ರವೇಶ ಪರೀಕ್ಷೆ ಭಾನುವಾರ ಪಟ್ಟಣದ ವಿವಿಧ ಕೇಂದ್ರಗಳಲ್ಲಿ ನಡೆಯಿತು.
ಪರೀಕ್ಷೆಗೆ ಒಟ್ಟು 2846 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 2,783 ವಿದ್ಯಾರ್ಥಿಗಳು ಹಾಜರಾಗಿ, 63 ವಿದ್ಯಾರ್ಥಿಗಳು ಗೈರಾಗಿದ್ದರು. ಪಟ್ಟಣದ ಎಡಿಬಿ ಕಾಲೇಜು, ಎಸ್‌ಎಸ್‌ಎಚ್ ಜೈನ್ ಕಾಲೇಜ್, ವಿವಿಎಸ್ ಪ್ರೌಢಶಾಲೆ, ಎಚ್
ಪಿಎಸ್ ಕಾಲೇಜು, ತರಳಬಾಳು ಪ್ರೌಢಶಾಲೆ, ಎಸ್‌ಯುಜೆಎಂ ಕಾಲೇಜು, ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪದವಿ
ಪೂರ್ವ ಕಾಲೇಜ್, ಕೆಸಿಎ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸೇರಿ ಒಟ್ಟು 10 ಕೇಂದ್ರಗಳಲ್ಲಿ ಪರೀಕ್ಷೆ ಜರುಗಿದವು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥಸ್ವಾಮಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
67ವಿದ್ಯಾರ್ಥಿಗಳು ಗೈರು
ಸಿರುಗುಪ್ಪ: ನಗರದ ಎಸ್.ಇ.ಎಸ್. ಬಾಲಕಿಯರ ಪ್ರೌಢಶಾಲೆ, ಎಸ್.ಇ.ಎಸ್. ಪದವಿ ಕಾಲೇಜು, ವಿಜಯಮೇರಿ, ಶಾಂತಿನಿಕೇತನ ಶಾಲೆಗಳಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆಗಳು ಜರುಗಿದವು. ಒಟ್ಟು 1885 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 67 ವಿದ್ಯಾರ್ಥಿಗಳು ಗೈರಾಗಿದ್ದರು. ಒಟ್ಟು 1818ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಬಿಇಒ ಪಿ.ಡಿ. ಭಜಂತ್ರಿ ತಿಳಿಸಿದ್ದಾರೆ.
42 ವಿದ್ಯಾರ್ಥಿಗಳು ಗೈರು
ಕೂಡ್ಲಿಗಿ: ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ, ಡಾ| ಅಂಬೇಡ್ಕರ್, ವಸತಿ ಶಾಲೆಗಳ 2019ನೇ ಸಾಲಿನ ಪ್ರವೇಶಕ್ಕಾಗಿ ಪಟ್ಟಣದ ಒಟ್ಟು 8 ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಿತು. ಪಟ್ಟಣದ ವಾಸವಿ ಸ್ಕೂಲ್, ಜ್ಯೂನಿಯರ್ ಕಾಲೇಜ್, ತರಳಬಾಳು ಶಾಲೆ, ಜ್ಞಾನಭಾರತಿ ಶಾಲೆ, ಚರ್ಚ್ ಶಾಲೆ, ಹಿರೇಮಠ ಪ್ರೌಢಶಾಲೆ, ಡಿಗ್ರಿ ಕಾಲೇಜುಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 2595 ಹಾಜರಾಗಿದ್ದರೆ, 42 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಕೂಡ್ಲಿಗಿ ಬಿಇಒ ಉಮಾದೇವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.