ಬಿಜೆಪಿ ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಭಾಗಿ
Team Udayavani, Jan 6, 2018, 2:14 PM IST
ಬಳ್ಳಾರಿ: ನಗರದಲ್ಲಿ ಶುಕ್ರವಾರ ಜರುಗಿದ ಬಿಜೆಪಿ ಪರಿವರ್ತನಾ ಯಾತ್ರೆಯ ಅಂಗವಾಗಿ ಜರುಗಿದ ಬೃಹತ್ ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಮಾಜಿ ಸಿಎಂ ಜಗದೀಶ ಶೆಟ್ಟರ್, ಸಂಸದ ಬಿ.ಶ್ರೀರಾಮುಲು, ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಮುಂತಾದವರು ಬೈಕ್ ರ್ಯಾಲಿಯ ಹಿಂದೆ ತೆರೆದ ವಾಹನದಲ್ಲಿ ಸಮಾವೇಶ ಸ್ಥಳವಾದ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿದರು.
ಬಿಎಸ್‌ನೈ ಅವರು ವೇದಿಕೆ ಹತ್ತುವ ಮುನ್ನ ನಗರದ ಶ್ರೀ ಬಾಲಾಂಜನೇಯ ದೇವಸ್ಥಾನದ ಗೋಶಾಲೆಯ ಗಂಗಾ ಹೆಸರಿನ ಗೋವು ಮತ್ತು ಕರುವಿಗೆ ಪೂಜೆ ಸಲ್ಲಿಸಿ, ಹೂ ಹಾರ ಹಾಕಿ, ರೇಶ್ಮೆ ಸೀರೆ ನೀಡಿ, ಬಾಳೇ ಹಣ್ಣು ತಿನ್ನಿಸಿ ವೇದಿಕೆ ಹತ್ತಿದರು. ಸಮಾವೇಶದಲ್ಲಿ ಜನರ ಆಕರ್ಷಣೆಗೆ ಮಹಿಳೆಯರಿದ್ದ ಡೊಳ್ಳು ವಾದನ, ಸಾಂಪ್ರದಾಯಿಕ ಕಹಳೆ ವಾದನಗಳು ಕಳೆ ನೀಡಿದವು. ನಗರದ ವಿವಿಧ ಸ್ಲಂ ಪ್ರದೇಸಗಳಿಂದ ಬಿಜೆಪಿ ಕಾರ್ಯಕರ್ತರು ಸಾವಿರಾರು
ಮಹಿಳೆಯರನ್ನು ಸಮಾವೇಶಕ್ಕೆ ಕರೆತಂದಿದ್ದರು. ಅನೇಕ ಮಹಿಳೆಯರು ತಮ್ಮ ಚಿಕ್ಕಮಕ್ಕಳೊಂದಿಗೆ ಸಮಾವೇಶಕ್ಕೆ ಆಗಮಿಸಿದ್ದರೆ, ಶಾಲೆಗಳ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಆಗಮಿಸಿದ್ದರು.
ಎದ್ದ ಜನರನ್ನು ಕುಳ್ಳಿರಿಸಿದ ಸೋಮಶೇಖರರೆಡ್ಡಿ: ಎಂಟು ಸಾವಿರ ಕುರ್ಚಿಗಳನ್ನು ಹಾಕಲಾಗಿದ್ದ ಸಮಾವೇಶ ಆರಂಭವಾಗುತ್ತಿದ್ದಂತೆ ಕೆಲವು ಜನರು ಎದ್ದು ಹೋಗಲು ಆರಂಭಿಸಿದರು. ಆಗ ಮಾಜಿ ಶಾಸಕ ಸೋಮಶೇಖರರೆಡ್ಡಿ ವೇದಿಕೆಯಿಂದ ಇಳಿದು ಜನರನ್ನು ಕುಳ್ಳಿರಿಸುವ ಪ್ರಯತ್ನ ಮಾಡಿದರು.
ಬಿಜೆಪಿ ಶಕ್ತಿ ಪ್ರದರ್ಶನ: ಬೆಳಿಗ್ಗೆ ಜರುಗಿದ ಸುದ್ದಿಗೋಷ್ಠಿಯಲ್ಲಿ ಬಳ್ಳಾರಿ ನಗರ ಅಭ್ಯರ್ಥಿಯ ಹೆಸರು ಪ್ರಕಟಿಸಲು ಪತ್ರಕರ್ತರು ಕೋರಿದಾಗ ಬಿಎಸ್‌ಬೈ ಸಮಾವೇಶದಲ್ಲಿ ಸೇರಿದ ಜನರನ್ನು ಆಧರಿಸಿ ಘೋಷಿಸುತ್ತೇನೆ ಎಂದಿದ್ದರು. ಅಂತೆಯೇ ಜನ ಸಂಖ್ಯೆಯನ್ನು ನೋಡಿದ ಬಿಎಸ್‌ವೈ ನಗರ ಕ್ಷೇತ್ರದಿಂದ ಸೋಮಶೇಖರರೆಡ್ಡಿ ಸ್ಪರ್ಧಿಸಲಿದ್ದಾರೆ. ಮತದಾರರು ಅವರನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.