ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲ್ಲ: ಆನಂದ್‌ಸಿಂಗ್
Team Udayavani, Sep 6, 2018, 6:00 AM IST
ಬಳ್ಳಾರಿ: ವಿಧಾನಸಭಾ ಚುನಾವಣೆ ನಡೆದು ಇನ್ನೂ ನಾಲ್ಕೂವರೆ ವರ್ಷ ಅಧಿಕಾರ ಇರುವಾಗಲೇ ಹೊಸಪೇಟೆ ಶಾಸಕ ಬಿ.ಎಸ್. ಆನಂದ್ ಸಿಂಗ್ ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದು ಘೋಷಿಸಿದ್ದಾರೆ. ಹೊಸಪೇಟೆ ನಗರದ ಸಹಕಾರಿ ಕಲ್ಯಾಣ ಮಂಟಪದಲ್ಲಿ ನಗರಸಭೆ ಅಧ್ಯಕ್ಷ ಗುಜ್ಜಲನಿಂಗಪ್ಪ ನೇತೃತ್ವದಲ್ಲಿ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಅವರು ತಮ್ಮ ನಿರ್ಧಾರ ಪ್ರಕಟಿಸಿದರು.
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವ ನಾನು ಮುಂದಿನ ನಾಲ್ಕೂವರೆ ವರ್ಷಗಳ ಕಾಲ ಮಾತ್ರ ಶಾಸಕನಾಗಿ ಮುಂದುವರಿಯಲಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ, ಸಕ್ರಿಯ ರಾಜಕಾರಣಿಯಾಗಿ ಮುಂದುವರಿಯುತ್ತೇನೆ. ಯಾರೂ ಅನ್ಯಥಾ ಭಾವಿಸಬಾರದು. ನಾನು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಬೇಕೆಂದು ಪಣತೊಟ್ಟಿದ್ದೆ. ಅದನ್ನು ಮತದಾರರು ಈಡೇರಿಸಿದ್ದಾರೆ. ಅದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು. ಆದರೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಇರಲು ನಿರ್ಧರಿಸಿದ್ದೇನೆ. ಹೊಸಬರಿಗೆ ಅವಕಾಶ ಕಲ್ಪಿಸುವ ಸಲುವಾಗಿ ಈ ನಿರ್ಣಯ ಕೈಗೊಂಡಿದ್ದೇನೆ. ಇದರಲ್ಲಿ ಯಾವುದೇ ಸ್ವಹಿತಾಸಕ್ತಿ ಇಲ್ಲ. ಹೊಸ ಮುಖಗಳನ್ನು ರಾಜಕಾರಣಕ್ಕೆ ಪರಿಚಯಿಸುವ ತವಕ ನನ್ನಲ್ಲಿದೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.