ಇಟಗಿಹಾಳುದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲ್ಲ : ಸೋಮಲಿಂಗಪ್ಪ


Team Udayavani, Mar 20, 2022, 3:19 PM IST

madhya

ಸಿರುಗುಪ್ಪ: ಗಡಿಗ್ರಾಮ ಇಟಿಗಿಹಾಳ್‌ ಗ್ರಾಮದಲ್ಲಿ ಮದ್ಯ ಮಾರಾಟಕ್ಕೆ ಎಂದಿಗೂ ಅನುಮತಿ ನೀಡುವುದಿಲ್ಲ. ಇಲ್ಲಿ ಮದ್ಯ ಮಾರಾಟ ಮಾಡಿದರೆ ಅಧಿಕಾರಿಗಳು ಪ್ರಕರಣ ದಾಖಲಿಸುತ್ತಾರೆ ಎಂದು ಶಾಸಕ ಎಂ.ಎಸ್‌. ಸೋಮಲಿಂಗಪ್ಪ ತಿಳಿಸಿದರು.

ತಾಲೂಕಿನ ಇಟಿಗಿಹಾಳು ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಗ್ರಾಮವನ್ನು ಮದ್ಯಮುಕ್ತ ಮಾಡಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗಡಿಭಾಗದ ಈ ಗ್ರಾಮದಲ್ಲಿ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಗುವುದು. ಇಲ್ಲಿರುವ ಕನ್ನಡಿಗರ ಮನಸ್ಸಿನಲ್ಲಿ ಕನ್ನಡತನ ಉಳಿದಿರುವುದು ಸಂತಸದ ಸಂಗತಿಯಾಗಿದೆ. ಗ್ರಾಮದ ಅಭಿವೃದ್ಧಿಗೆ ಬೇಕಾದ ಅನುದಾನ ಬಿಡುಗಡೆ ಮಾಡಲಾಗುವುದು. ಸಿ.ಸಿ.ರಸ್ತೆ, ಚರಂಡಿ ನಿರ್ಮಾಣ, ಶಾಲಾ ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ.

ನಾಡಂಗ ಗ್ರಾಮದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಬಿ.ಎಂ. ಸೂಗೂರು, ಗ್ರಾಪಂ ಅಧ್ಯಕ್ಷೆ ಹುಸೇನಮ್ಮ ಮನವಿ ನೀಡಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು. ತಹಶೀಲ್ದಾರ್‌ ಎನ್‌.ಆರ್‌. ‌ಮಂಜುನಾಥಸ್ವಾಮಿ ಮಾತನಾಡಿ ಕಂದಾಯ ಇಲಾಖೆಗೆ 22 ಅರ್ಜಿಗಳು ಬಂದಿದ್ದು, ಇದರಲ್ಲಿ 9 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ. ಗ್ರಾಪಂಗೆ ಸಂಬಂಧಿಸಿದಂತೆ  23 ಅರ್ಜಿಗಳು, ಭೂಮಾಪನ ಇಲಾಖೆಗೆ ಒಂದು ಅರ್ಜಿ, ಶಿಕ್ಷಣ ಇಲಾಖೆಗೆ ಒಂದು ಅರ್ಜಿ ಬಂದಿದೆ ಎಂದು ಹೇಳಿದರು.

ತಹಶೀಲ್ದಾರ್‌ ಎನ್‌.ಆರ್‌. ಮಂಜುನಾಥಸ್ವಾಮಿ ಗ್ರಾಮದಲ್ಲಿ ಸಂಚರಿಸಿ ಸಾರ್ವಜನಿಕರನ್ನು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಖುದ್ದಾಗಿ ಆಲಿಸಿದರು. ಅಲ್ಲದೆ ಗ್ರಾಮದಲ್ಲಿರುವ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿಕೊಂಡರು. ಸಿಡಿಪಿಒ ಇಲಾಖೆ ವತಿಯಿಂದ ಶಾಲಾ ಪೂರ್ವ ಶಿಕ್ಷಣ ಹಾಗೂ ಪೋಷಣ್‌ ಅಭಿಯಾನ ಯೋಜನೆಯಡಿ ಪೌಷ್ಠಿಕ ಆಹಾರ ಮೇಳ ನಡೆಯಿತು. ಮೇಳದಲ್ಲಿ ಪೌಷ್ಠಿಕ ಆಹಾರ, ದವಸ ಧಾನ್ಯ ಮತ್ತು ತರಕಾರಿಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ವಸತಿ ಯೋಜನೆ, ನಿವೇಶನ, ಸರ್ಕಾರಿ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಆಸ್ಪತ್ರೆ, ತೋಟಗಾರಿಕೆ, ಕಂದಾಯ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಕೌಂಟರ್‌ಗಳನ್ನು ತೆರೆಯಲಾಗಿತ್ತು.

ಗ್ರಾಪಂ ಅಧ್ಯಕ್ಷೆ ಹುಸೇನಮ್ಮ, ತಾಲೂಕು ಅಧಿಕಾರಿಗಳಾದ ನಜೀರ್‌ ಅಹಮ್ಮದ್‌, ಎಂ.ಸಿದ್ದಯ್ಯ, ಎ.ಗಾದಿಲಿಂಗಪ್ಪ, ಜಲಾಲಪ್ಪ, ಪರಮೇಶ್ವರ, ಕೀರ್ತನಾ, ಡಾ| ಈರಣ್ಣ, ಉಪತಹಶೀಲ್ದಾರ್‌ ಸಿದ್ದಲಿಂಗಯ್ಯಸ್ವಾಮಿ, ಕಂದಾಯ ಅಧಿಕಾರಿ ಬಸವರಾಜು, ಗ್ರಾಮಲೆಕ್ಕಾಧಿಕಾರಿ ಸಿದ್ದಪ್ಪ ಪೂಜಾರಿ, ವಿಶ್ವನಾಥ, ರಾಜಕುಮಾರ್‌, ಮುಖಂಡ ಮಲ್ಲಿಕಾರ್ಜುನರೆಡ್ಡಿ ಮತ್ತು ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.