ಗಮನಸೆಳೆದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
Team Udayavani, Dec 10, 2019, 1:28 PM IST
ಕಂಪ್ಲಿ: ಪಟ್ಟಣದ ಷಾಮಿಯಾಚಂದ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕಲಾವಿದೆ ಡಿ. ಉಮಾದೇವಿ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಾಸಕ ಜೆ.ಎನ್. ಗಣೇಶ್ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ಐತಿಹಾಸಿಕ ವಿಜಯನಗರ ಸಾಮ್ರಾಜ್ಯ ಸೇರಿದಂತೆ ವಿವಿಧ ಕಲಾ ವೈಭೋಗವನ್ನು ಚಿತ್ರಕಲೆಗಳಲ್ಲಿ ಕಾಣಬಹುದಾಗಿದೆ. ಕಲೆಗೆ ಕಲೆಯೇ ಸಾಟಿ ಎಂಬಂತೆ ಚಿತ್ರಕಲೆ ರೂಢಿಸಿಕೊಂಡರೆ ಜೀವನದಲ್ಲಿ ಸಾಧನೆಗೆ ಮಹತ್ವ ಸಿಗುತ್ತದೆ. ಇಂದಿನ ದಿನದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಮಾರು ಹೋಗದೇ ತಮ್ಮಲ್ಲಿರುವ ಅಪ್ರತಿಮ ಕಲೆಗಳೊಂದಿಗೆ ಉತ್ತಮ ಜೀವನದ ಕಡೆ ಸಾಗಬೇಕು ಎಂದರು.
ಎಸ್‌ಎಂಜಿಜಿ ಪ್ರೌಢಶಾಲೆ ಪ್ರಭಾರಿ ಉಪ ಪ್ರಾಚಾರ್ಯ ಷಣ್ಮುಖಪ್ಪ ಚಿತ್ರಗಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಚಿತ್ರಕಲೆಗಳ ಅಭಿರುಚಿಯನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಜಗತ್ತಿನಲ್ಲಿ ಚಿತ್ರಕಲೆಗೆ ಹೆಚ್ಚಿನ ಮಹತ್ವವಿದೆ. ಹೀಗಾಗಿ ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿ ಕಲೆಗಳಲ್ಲಿ ಒಂದಾದ ಚಿತ್ರಕಲೆಯನ್ನು ರೂಢಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಸಕ ಗಣೇಶ್ ಹಾಗೂ ಮುಖಂಡರು ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕಲಾವಿದೆ ಡಿ. ಉಮಾದೇವಿ ಅವರು ಬಿಡಿಸಿರುವ ವಿವಿಧ ಚಿತ್ರಕಲೆಗಳು ನೋಡುಗರ ಗಮನ ಸೆಳೆದವು.
ಈ ಕಾರ್ಯಕ್ರಮದಲ್ಲಿ ಕನ್ನಡ ಹಿತರಕ್ಷಕ ಸಂಘದ ಗೌರವಾಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ, ವೀರಶೈವ ಸಂಘದ ಅಧ್ಯಕ್ಷ ಪಿ. ಮೂಕಯ್ಯಸ್ವಾಮಿ, ಕನ್ನಡ ಹಿತರಕ್ಷಕಸಂಘದ ಅಧ್ಯಕ್ಷ ಬಿ. ಅಂಬಣ್ಣ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಶ್ರೀಧರ್ ಶ್ರೇಷ್ಠಿ, ಪುರಸಭೆ ಸದಸ್ಯ ವೀರಾಂಜಿನೇಯಲು, ಕರ್ನಾಟಕ ರಾಜ್ಯ ಸ.ನೌ. ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಸಿ. ಭೀಮಣ್ಣ, ಕಾಲೇಜು ಉಪನ್ಯಾಸಕ ಸತ್ಯನಾರಾಯಣರಾವ್, ಡಿ.ಎಸ್. ರಾಜಕುಮಾರ, ಶಿಕ್ಷಕ ವಿರೇಶ್, ಸಂಗೀತಾ ಶಿಕ್ಷಕ ಶ್ರೀನಿವಾಸ್, ಶಿಕ್ಷಕ ವೈ. ವಿರೇಶ್, ಮಾರೆಮ್ಮ ಸಂಘದ ಅಧ್ಯಕ್ಷ ಜಾಲಗಾರ್ ಹನುಮಂತಪ್ಪ ಹಾಗೂ ಕಲಾವಿದೆ ಡಿ. ಉಮಾದೇವಿ ಸೇರಿದಂತೆ ಮುಖಂಡರು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.