ಆನಂದ ಸಿಂಗ್ ಗೆ ಡಿಸಿಎಂ ಸ್ಥಾನಕ್ಕಾಗಿ ಆನ್ ಲೈನ್ ಅಭಿಯಾನ
Team Udayavani, Jul 31, 2021, 11:58 AM IST
ಹೊಸಪೇಟೆ: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆ ನಡೆದು ಈಗ ಸಚಿವ ಸಂಪುಟ ಸರ್ಕಸ್ ನಡೆಯುತ್ತಿದೆ. ಯಾರಿಗೆಲ್ಲ ಸಂಪುಟದಲ್ಲಿ ಅವಕಾಶ ಸಿಗಬಹುದು ಎಂಬ ಕುತೂಹಲ ಮೂಡಿದೆ. ಇದರ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಮಾಜಿ ಸಚಿವ ಆನಂದ ಸಿಂಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವೊಂದು ಆರಂಭವಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಿಂದಲೇ ಆನಂದ ಸಿಂಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರ ಅಭಿಮಾನಿ ಹಾಗೂ ಬೆಂಬಲಿಗರು ಆನ್‌ಲೈನ್ ಕ್ಯಾಂಪೇನ್ ಆರಂಭಿಸಿದ್ದು ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಆನಂದ ಸಿಂಗ್ ಕಾರಣೀಕರ್ತರಾಗಿದ್ದಾರೆ. ಮೊದಲು ಆನಂದ್ ಸಿಂಗ್ ರಾಜೀನಾಮೆ ಸಲ್ಲಿಸಿದ ಬಳಿಕ ಉಳಿದವರು ರಾಜೀನಾಮೆ ಸಲ್ಲಿಸಿದ್ದರು. ಇದರಿಂದಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಯಡಿಯೂರಪ್ಪನವರಿಗೆ ಸುಲಭವಾಗಿ ಮುಖ್ಯಮಂತ್ರಿ ಗಾದಿ ಒಲಿದು ಬರಲು ಕಾರಣವಾಯಿತು. ಹೀಗಾಗಿ ಆನಂದಸಿಂಗ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಸಂದೇಶ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.