ಆರ್‌ಸಿಇಪಿ ಒಪ್ಪಂದ ಕೈಬಿಡಲು ಪಟ್ಟು


Team Udayavani, Feb 25, 2020, 12:59 PM IST

ballary-tdy-1

ಸಾಂದರ್ಬಿಕ ಚಿತ್ರ

ಬಳ್ಳಾರಿ: ಭಾರತದ ಹೈನುಗಾರಿಕೆ, ಕೋಳಿ ಸಾಕಾಣಿಕೆ ಉದ್ಯಮಕ್ಕೆ ಮರಣ ಶಾಸನವಾಗಲಿರುವ ಅಮೆರಿಕ ಜತೆಗಿನ ಆರ್‌ಸಿಇಪಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು ಎಂದು ಆಗ್ರಹಿಸಿ, ಕೂಡಲೇ ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ವಿವಿಧ ರೈತಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ನಗರೂರು ನಾರಾಯಣರಾವ್‌ ಉದ್ಯಾನವನ ಬಳಿ ಜಮಾಯಿಸಿದ ಕೋಳಿ ಸಾಕಾಣಿಕೆದಾರರ ಒಕ್ಕೂಟ, ರೈತ ಕೃಷಿಕಾರ್ಮಿಕರ ಸಂಘಟನೆ, ಕರ್ನಾಟಕ ಪ್ರಾಂತ ರೈತ ಸಂಘ, ಆದಿವಾಸಿ ಬುಡಕಟ್ಟು ವೇದಿಕೆ, ತುಂಗಭದ್ರಾ ರೈತ ಸಂಘ, ರಾಜ್ಯ ರೈತಸಂಘ-ಹಸಿರುಸೇನೆ ಸೇರಿ ಇತರೆ ರೈತಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಮೆರವಣಿಗೆ ಮೂಲಕ ಡಿಸಿ ಕಚೇರಿ ತಲುಪಿದರು. ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲಹೊತ್ತು ಕೇಂದ್ರ ಸರ್ಕಾರ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಗೋ ಬ್ಯಾಕ್‌ ಟ್ರಂಪ್‌ ಎಂಬ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಆಹ್ವಾನದ ಮೇರೆಗೆ ಫೆ. 24,25ರಂದು ಎರಡು ದಿನಗಳ ಕಾಲ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತಕ್ಕೆ ಆಗಮಿಸಿದ್ದಾರೆ. ಈ ವೇಳೆ ಹೈನುಗಾರಿಕೆ, ಕುಕ್ಕುಟೋದ್ಯಮದ (ಕೋಳಿ ಸಾಕಾಣಿಕೆ) ಮುಕ್ತ ವ್ಯಾಪಾರದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ. ಈ ಒಪ್ಪಂದದಿಂದ ಭಾರತಕ್ಕೆ ವಾರ್ಷಿಕ ಅಂದಾಜು 42,000 ಕೋಟಿ ರೂಪಾಯಿಗಳ ಹೈನು, ಕೋಳಿ ಉತ್ಪನ್ನಗಳು, ಟರ್ಕಿ ಮತ್ತಿತರ ಕೃಷಿ ಉತ್ಪನ್ನಗಳ ವಸ್ತುಗಳು ಭಾರತಕ್ಕೆ ಆಮದಾಗುತ್ತದೆ. ಪರಿಣಾಮ ಭಾರತದಲ್ಲಿ ಹೈನುಗಾರಿಕೆಯಲ್ಲಿ ತೊಡಗಿರುವ ಸುಮಾರು ನೂರು ಮಿಲಿಯನ್‌ ರೈತರು, ರೈತ ಮಹಿಳೆಯರು, ಬಡ ರೈತರು ಸಂಕಷ್ಟ ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಆರ್‌ಸಿಇಪಿ ಒಪ್ಪಂದದಿಂದ ಕೇವಲ ಹೈನುಗಾರಿಕೆ, ಕುಕ್ಕಟೋದ್ಯಮಕ್ಕೆ ಮಾತ್ರವಲ್ಲ ಇತರೆ ಸೇಬು, ಚೆರ್ರಿ, ಬಾದಾಮಿ, ಸೋಯಾಬೀನ್‌, ಗೋ ವಿನಜೋಳ ಸೇರಿ ಹಲವಾರು ಹಣ್ಣು, ಧಾನ್ಯಗಳ ಮೇಲೂ ಪರಿಣಾಮ ಬೀರಲಿದೆ. ಇವುಗಳ ಮೇಲೆ ವಿಧಿಸುವ ಆಮದು ತೆರಿಗೆಯನ್ನು ಶೇ. 100 ರಿಂದ ಶೇ.10ಕ್ಕೆ ಇಳಿಸಿ, ಇಲ್ಲಿನ ರೈತರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಹಿಂದೆ ಪ್ರತಿಭಟನೆಗೆ ಮಣಿದಿದ್ದ ಕೇಂದ್ರ ಸರ್ಕಾರ ಇಂಥಹದ್ದೇ ಒಪ್ಪಂದವನ್ನು ಕೈಬಿಟ್ಟಿದ್ದ ಕೇಂದ್ರ ಸರ್ಕಾರ ಇದೀಗ ಪುನಃ ಅಮೆರಿಕದೊಂದಿಗೆ ಅಂಥ ಪ್ರಯತ್ನಕ್ಕೆ ಮುಂದಾಗುತ್ತಿರುವುದು ವಿಷಾದನೀಯ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ ಮಾರುಕಟ್ಟೆ ತೆರೆಯಲು ಅಮೆರಿಕಾಗೆ ಪ್ರಧಾನಿ ನರೇಂದ್ರ ಮೋದಿಯವರು ಸಹಕರಿಸುತ್ತಿದ್ದಾರೆ. ಅಮೆರಿಕದಲ್ಲಿ ರೈತರಿಗೆ ನೀಡಲಾಗುವ ಅತಿಹೆಚ್ಚು ಸಬ್ಸಿಡಿಗೆ ಭಾರತದ ರೈತರು ಸ್ಪಂದಿಸಲಾಗದೆ ರೈತರನ್ನು ಸಮಸ್ಯೆಗೆ ದೂಡಲಾಗುತ್ತದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರಣಕ್ಕೂ ಆರ್‌ ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬಾರದು. ಒಪ್ಪಂದವನ್ನು ಕೈಬಿಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘಟನೆಗಳ ಮುಖಂಡರಾದ ಈ. ಹನುಮಂತಪ್ಪ, ವಿ.ಎಸ್‌. ಶಿವಶಂಕರ್‌, ದರೂರು ಪುರುಷೋತ್ತಮಗೌಡ, ಗೋವಿಂದ್‌, ಪಂಪಾಪತಿ, ಎರ್ರೆಪ್ಪ, ದುರ್ಗಾಪ್ರಸಾದ್‌, ಸಂಗನಕಲ್ಲು ಕೃಷ್ಣಪ್ಪ, ಈಶ್ವರಿ ಸೇರಿದಂತೆ ಹಲವಾರು ರೈತ ಮುಖಂಡರು ಇದ್ದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.