ಭತ್ತದ ಬೆಲೆ ಕುಸಿತ: ಸಂಕಷ್ಟದಲ್ಲಿ ಅನ್ನದಾತ


Team Udayavani, May 15, 2018, 4:02 PM IST

dvg-1.jpg

ಕಂಪ್ಲಿ: ಪಟ್ಟಣ ಸೇರಿದಂತೆ ಕಂಪ್ಲಿ ಹೋಬಳಿಯ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಹಂಗಾಮಿನಲ್ಲಿ ಬೆಳೆದ ಭತ್ತವನ್ನು ರೈತರು ಕಟಾವು ಮಾಡುತ್ತಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಪಾತಾಳಕ್ಕಿಳಿದಿದ್ದು, ಭತ್ತವನ್ನು ಕೊಳ್ಳಲು
ಖರೀದಿದಾರರು ಬರುತ್ತಿಲ್ಲ. ಇನ್ನು ಕೊಳ್ಳುವವರು ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಇದರಿಂದ ರೈತರು ಚಿಂತೆಗೀಡಾಗಿದ್ದಾರೆ.

ಹೋಬಳಿ ವ್ಯಾಪ್ತಿಯ ರಾಮಸಾಗರ, ನಂ.10 ಮುದ್ದಾಪುರ, ಕಣವಿ ತಿಮ್ಮಲಾಪುರ, ಸಣಾಪುರ, ಇಟಗಿ, ಬೆಳಗೋಡುಹಾಳು, ದೇವಸಮುದ್ರ, ಹಂಪಾದೇವನಹಳ್ಳಿ, ಎಮ್ಮಿಗನೂರು ಹಾಗೂ ದರೋಜಿ ಗ್ರಾಮಗಳಲ್ಲಿ ತುಂಗಭದ್ರಾ ನದಿ ದಂಡೆಯ ಪಂಪ್‌ಸೆಟ್‌ ಆಧಾರಿತ, ತುಂಗಭದ್ರಾ ಬಲದಂಡೆ ಕಾಲುವೆಗಳು, ವಿಜಯನಗರ ಕಾಲುವೆಗಳು ಮತ್ತು ಕೆರೆ ಆಧಾರಿತ ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆದ ಭತ್ತವನ್ನು ರೈತರು ಈಗಾಗಲೇ ಮಾರಾಟ ಮಾಡಿದ್ದಾರೆ. ಕೆಲ ರೈತರು ಕಟಾವು ಮಾಡುವಲ್ಲಿ ನಿರತರಾಗಿದ್ದರೆ, ಇನ್ನು ಕೆಲ ರೈತರ ಭತ್ತದ ಬೆಳೆ ಕಟಾವಿಗೆ ಬಂದಿಲ್ಲ. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ ವ್ಯಾಪ್ತಿಯಲ್ಲಿ ಬೆಳೆದ ಭತ್ತವನ್ನು ರೈತರು ಕಟಾವು ಮಾಡಿ ರಾಶಿ ಹಾಕಿಕೊಂಡು ಭತ್ತದ ಖರೀದಿದಾರರಿಗಾಗಿ ಎದುರು ನೋಡುತ್ತಿದ್ದಾರೆ.

ಬೆಲೆ ಕುಸಿತ: ಕಳೆದ ಕೆಲ ದಿನಗಳಿಂದ ಇಲ್ಲಿನ ಮಾರುಕಟ್ಟೆಯಲ್ಲಿ ಗುಣಮಟ್ಟದ ಗಂಗಾ, ಕಾವೇರಿ ಭತ್ತ 950 ರಿಂದ 1020 ರೂ. (75 ಕೆ.ಜಿ.) ಬೆಲೆ ಇದೆ. ಇಲ್ಲಿನ ಎಲ್‌.ಎಲ್‌. ಕಾಲುವೆಗೆ ಕೊನೆ ದಿನಗಳಲ್ಲಿ ನೀರನ್ನು ಸ್ಥಗಿತಗೊಳಿಸಲಾಯಿತು. ಬೆಳೆಗೆ ಸಮರ್ಪಕ ನೀರಿಲ್ಲದೆ, ಕಾಳು ಅಷ್ಟಾಗಿ ಬೆಳೆಯಲಿಲ್ಲ. ಇದೀಗ ಕಟಾವು ಮಾಡಿ ರಾಶಿ ಹಾಕಲಾಗಿದೆ. ಕಾಳು ಸ್ವಲ್ಪ ನುಚ್ಚಾಗುವುದರಿಂದ ಇದನ್ನು 75 ಕೆ.ಜಿ. ಚೀಲಕ್ಕೆ 900 ರೂ.ಗಳಿಗೆ ಕೇಳುತ್ತಿದ್ದಾರೆ. ಆದರೂ ಯಾರು ಖರೀದಿಸುತ್ತಿಲ್ಲ. ನೆರೆಯ ಆಂಧ್ರಪ್ರದೇಶದಲ್ಲಿ ಬೆಳೆದ ಭತ್ತವನ್ನು ರೈತರು ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದು ಸೇರಿದಂತೆ ಇತರೆ ಕಾರಣಗಳಿಂದ ಬೆಲೆ ಕುಸಿತವಾಗಿದೆ ಎಂದು ರೈತರು ಆರೋಪಿಸುತ್ತಿದ್ದಾರೆ. ಕಂಪ್ಲಿಗೆ ನೆರೆಯ ರಾಜ್ಯದಿಂದ ಪ್ರತಿದಿನ ಹಲವಾರು ಲಾರಿಗಳಲ್ಲಿ ಭತ್ತದ ಲೋಡ್‌ಗಳು ಬರುವುದರಿಂದ ಇಲ್ಲಿನ ಭತ್ತವನ್ನು ಕೇಳುವವರು ಇಲ್ಲದಂತಾಗಿದೆ. 

ಖರ್ಚು-ವೆಚ್ಚ: ಭತ್ತ ಬೆಳೆಯಲು ಒಂದು ಎಕರೆಗೆ ಸುಮಾರು 30ರಿಂದ 35 ಸಾವಿರ ರೂ. ವೆಚ್ಚ ಮಾಡಲಾಗಿದೆ. ಕಾಲುವೆಯಲ್ಲಿ ನೀರಿಲ್ಲದೆ ಇಳುವರಿ ಕುಂಠಿತವಾಗಿದೆ. ಏ.23ರಂದು ಮಳೆ ಜೊತೆಗೆ ಬೀಸಿದ ಬಿರುಗಾಳಿಯ ಹೊಡೆತಕ್ಕೆ ಭತ್ತ ನೆಲಕ್ಕೆ ಬಿದ್ದಿದೆ. ಇದನ್ನು ಕಟಾವು ಮಾಡಲು ಯಂತ್ರಕ್ಕೆ ಎಕರೆಗೆ 5,000 ರೂ. ಬಾಡಿಗೆ ತೆರಬೇಕಾಗಿದೆ.
 
ಈಗಿನ ಬೆಲೆಗೆ ಭತ್ತ ಮಾರಾಟ ಮಾಡಿದರೆ ನಮಗೆ ಲಾಭ ಹೋಗಲಿ ಮಾಡಿದ ಖರ್ಚು ಬರುವುದು ಕಷ್ಟವಾಗಿದೆ ಎಂದು ರೈತರಾದ ಜಿ.ಸಂಗಪ್ಪ, ರಾಗಿ ಭದ್ರಯ್ಯಸ್ವಾಮಿ, ರತ್ನಗಿರಿ ಕೊಲ್ಲಿಪರ, ಹನುಮಂತರಾಯ್ಡು, ಬಿಂಗಿ ವಿರುಪಣ್ಣ,
ಜಿ.ಲಿಂಗನಗೌಡ, ಕಡೆಮನಿ ಪಂಪಾಪತಿ ಸೇರಿದಂತೆ ಅನೇಕರು ಅಳಲು ತೋಡಿಕೊಳ್ಳುತ್ತಾರೆ. 

ಜಿ.ಚಂದ್ರಶೇಖರಗೌಡ

ಟಾಪ್ ನ್ಯೂಸ್

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.