ಜಿಲ್ಲೆಯಲ್ಲಿ ಕಾಯಂ ಶಿಕ್ಷಕರ ಕೊರತೆ
Team Udayavani, Jun 1, 2018, 3:50 PM IST
ಬಳ್ಳಾರಿ: ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಜಿಲ್ಲೆಯ ಬಹುತೇಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾಯಂ ಶಿಕ್ಷಕರ ಕೊರತೆಯ ಕೂಗು ಕೇಳಿ ಬರುತ್ತಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಮಕ್ಕಳ ಪಾಠ, ಪ್ರವಚನಕ್ಕೆ ಅತಿಥಿ ಶಿಕ್ಷಕರೇ ಅನಿವಾರ್ಯವಾಗಲಿದ್ದಾರೆ…? ಹೌದು….! ಇಂಥಹದ್ದೊಂದು ಪ್ರಶ್ನೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕರನ್ನು ಕಾಡುತ್ತಿದೆ. 2018-19ನೇ ಸಾಲಿನ ಶೈಕ್ಷಣಿಕ ವರ್ಷ ಇದೀಗ ತಾನೆ ಆರಂಭವಾಗುತ್ತಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾಯಂ ಶಿಕ್ಷಕರ ಕೊರತೆಯ ಕೂಗು ಕೇಳಿ ಬರುತ್ತಿದೆ.
ಕಳೆದ ದಶಕದ ಹಿಂದೆಯೇ 130 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆಯಾದರೂ, ಅಭ್ಯರ್ಥಿಗಳಿಗೆ ಆದೇಶ ಪತ್ರ ನೀಡುವಲ್ಲಿ ವಿಳಂಬವಾಗುತ್ತಿದ್ದು, ಶಿಕ್ಷಕರ ಕೊರತೆಯ ಪ್ರಮಾಣ ಮತ್ತಷ್ಟು ಹೆಚ್ಚಲು ಕಾರಣವಾಗಿದೆ. ಪರಿಣಾಮ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಾಗಿದ್ದು, ಶಿಕ್ಷಕರ ಕೊರತೆ ನೀಗಿಸಲು ಮತ್ತು ಮಕ್ಕಳ ಪಾಠಗಳನ್ನು ಪೂರ್ಣಗೊಳಿಸಲು ಈ ಹಿಂದಿನಂತೆ ಈ ಬಾರಿಯೂ ಅತಿಥಿ ಶಿಕ್ಷಕರೇ ಆಸರೆಯಾಗುವ ಸಾಧ್ಯತೆಯಿದೆ.
ಜಿಲ್ಲೆಯಲ್ಲಿ 519 ಸರ್ಕಾರಿ ಕಿರಿಯ, 828 ಹಿರಿಯ ಪ್ರಾಥಮಿಕ, 197 ಸರ್ಕಾರಿ ಪ್ರೌಢಶಾಲೆಗಳು ಇವೆ. ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ 3, ಹಿರಿಯ ಪ್ರಾಥಮಿಕ ಶಾಲೆ 75, 89 ಪ್ರೌಢಶಾಲೆಗಳಿವೆ. ಅನುದಾನ ರಹಿತ ಕಿರಿಯ ಪ್ರಾಥಮಿಕ ಶಾಲೆ 252, ಹಿರಿಯ 388, 250 ಪ್ರೌಢಶಾಲೆಗಳು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಿರಿಯ 4, ಹಿರಿಯ 44, ಪ್ರೌಢಶಾಲೆ 29 ಸೇರಿದಂತೆ ಒಟ್ಟು 2678 ಶಾಲೆಗಳು ಚಾಲನೆಯಲ್ಲಿವೆ. ಈ ಪೈಕಿ ಸರ್ಕಾರಿ ಶಾಲೆಗಳಲ್ಲಿ (ಹಿರಿಯ, ಕಿರಿಯ, ಪ್ರೌಢಶಾಲೆ ಸೇರಿ) 1,31,106 ವಿದ್ಯಾರ್ಥಿಗಳು, ಅನುದಾನಿತ ಶಾಲೆಗಳಲ್ಲಿ 20640, ಅನುದಾನ ರಹಿತ ಶಾಲೆಗಳಲ್ಲಿ 68866, ಸಮಾಜ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ 4074 ಸೇರಿದಂತೆ ಒಟ್ಟು 4,67,842 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಸರ್ಕಾರ ಶಾಲೆಗಳಲ್ಲೇ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಪ್ರಮಾಣಕ್ಕೆ ತಕ್ಕಷ್ಟು ಕಾಯಂ ಶಿಕ್ಷಕರನ್ನು ನಿಯೋಜಿಸುವಲ್ಲಿ ಸರ್ಕಾರ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂಬುದು ವಿದ್ಯಾರ್ಥಿಗಳ ಪಾಲಕರ ಗಂಭೀರ ಆರೋಪ.
ಖಾಲಿ ಹುದ್ದೆಗಳು: ಜಿಲ್ಲೆಯಲ್ಲಿ ಕಿರಿಯ (1 ರಿಂದ 5ನೇ ತರಗತಿ) ಪ್ರಾಥಮಿಕ ಶಾಲೆಯಲ್ಲಿ 5465 ಹುದ್ದೆಗಳಿಗೆ ಅನುಮೋದನೆ ನೀಡಲಾಗಿದ್ದು, 909 ಹುದ್ದೆಗಳು ಖಾಲಿ ಉಳಿದಿವೆ. ಇನ್ನು ಹಿರಿಯ ಪ್ರಾಥಮಿಕ (6 ರಿಂದ 8ನೇ ತರಗತಿ) ಶಾಲೆಗಳಲ್ಲಿ ಅನುಮೋದಿತ 2855 ಹುದ್ದೆಗಳಲ್ಲಿ ಕೇವಲ 1052 ಶಿಕ್ಷಕರಿದ್ದು, 1952 ಹುದ್ದೆಗಳು ಖಾಲಿ ಉಳಿದಿವೆ. ಈ ಪೈಕಿ ಬಳ್ಳಾರಿ ಪೂರ್ವ ವಲಯ (ಹಿರಿಯ-ಕಿರಿಯ ಸೇರಿ) 274, ಕುರುಗೋಡು 184, ಹಡಗಲಿ 51, ಹ.ಬೊ.ಹಳ್ಳಿ 41, ಹೊಸಪೇಟೆ 315, ಕೂಡ್ಲಿಗಿ 174, ಸಂಡೂರು 402, ಸಿರುಗುಪ್ಪ ತಾಲೂಕು 511 ಶಿಕ್ಷಕರ
ಕೊರತೆಯನ್ನು ಎದುರಿಸುತ್ತಿದೆ. ಪರಿಣಾಮ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದ್ದು, ಖಾಸಗಿ ಶಾಲೆಗಳಲ್ಲಿ ಹೆಚ್ಚಲು ಕಾರಣವಾಗುತ್ತಿದೆ.
ಇನ್ನು ಪ್ರೌಢಶಾಲೆಗಳಲ್ಲಿ 2133 ಅನುಮೋದಿತ ಹುದ್ದೆಗಳಲ್ಲಿ 1655 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, 468 ಕಾಯಂ ಶಿಕ್ಷಕರ ಕೊರತೆಯಾಗಿದೆ. ಇದರಲ್ಲಿ ಕಳೆದ 2008-2009ರಲ್ಲೇ 130 ಹುದ್ದೆಗಳಿಗೆ ಅನುಮೋದನೆ ನೀಡಲಾಗಿದ್ದರೂ, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಆದೇಶ ಪತ್ರ ನೀಡುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಕಾಯಂ ಶಿಕ್ಷಕರ ಕೊರತೆ ಹೆಚ್ಚಲು ಕಾರಣವಾಗಿದೆ.
ಈ ಕೊರತೆಯನ್ನು ನೀಗಿಸಲು ಮುಂದಾಗಿರುವ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಳೆದ ಕೆಲ ವರ್ಷಗಳಿಂದ ಅತಿಥಿ ಶಿಕ್ಷಕರನ್ನು ಮೊರೆ ಹೋಗುತ್ತಿದ್ದು, ಕಳೆದ ವರ್ಷ 115 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷವೂ ಅವರೇ ಆಸರೆಯಾಗಲಿದ್ದಾರೆ. ಅಲ್ಲದೇ, ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಹೆಚ್ಚಿಸುವ ಸಲುವಾಗಿ ಜಿಲ್ಲಾಡಳಿತ ಕಳೆದ ಎರಡು ವರ್ಷಗಳಿಂದ ಅಬ್ದುಲ್ ಕಲಾಂ ಗೌರವ ಸೇವೆ ಯೋಜನೆಯಡಿ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಜತೆಗೆ ಎಚ್‌ಕೆಡಿಬಿ ಯೋಜನೆಯಡಿ ವಿಶೇಷ ಶಿಕ್ಷಕರನ್ನು ನಿಯೋಜನೆ ಮಾಡಲಾಗುತ್ತಿದೆ. ಶಿಕ್ಷಕರ ಕೊರತೆ ನೀಗಿಸಲು ಕೇವಲ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುತ್ತಿರುವ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಾಯಂ ಶಿಕ್ಷಕರನ್ನು ನೇಮಿಸುವಲ್ಲಿ ಮಾತ್ರ ನಿರ್ಲಕ್ಷ್ಯ ತೋರುತ್ತಿರುವುದು ವಿಪರ್ಯಾಸವಾಗಿದೆ.
ಶಾಲೆಗೆ ಎತ್ತಿನ ಬಂಡಿಯಲ್ಲಿ ಬಂದ ಮಕ್ಕಳು
ಕಂಪ್ಲಿ: ತಾಲೂಕಿನ ಹೊಸೂರು ಜವುಕು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ವಿದ್ಯಾರ್ಥಿಗಳು ಅಲಂಕೃತ ಎತ್ತಿನ ಬಂಡಿಯಲ್ಲಿ ಬರುವ ಮೂಲಕ ಶಿಕ್ಷಕರು ಹಾಗೂ ಸಾರ್ವಜನಿಕರ ಗಮನ ಸೆಳೆದರು.
ಎರಡು ತಿಂಗಳ ಬೇಸಿಗೆ ರಜೆಯ ನಂತರ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಶಿಕ್ಷಕರು ರೈತರ ಎತ್ತಿನ ಬಂಡಿ ಪಡೆದು ಅವುಗಳನ್ನು ವಿಶೇಷವಾಗಿ ಸಿಂಗರಿಸಿ ವಿದ್ಯಾರ್ಥಿಗಳ ಮನೆಗಳಿಗೆ ತೆಗೆದುಕೊಂಡು ಹೋಗಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದರು.
ಇದರಿಂದ ವಿದ್ಯಾರ್ಥಿಗಳ ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ನಮ್ಮ ಪುರಾತನ ಸಂಸ್ಕೃತಿಯ ಪ್ರತೀಕಗಳಾದ ಎತ್ತಿನ ಬಂಡಿಗಳ ಮೂಲಕ ಕರೆದುಕೊಂಡು ಹೋಗುವುದನ್ನು ನೋಡಿ ಸಂತಸ ಪಟ್ಟರು. ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಕೊಠಡಿ, ಆವರಣ ಮತ್ತು ಪ್ರವೇಶದ್ವಾರ ತಳಿರು ತೋರಣಗಳಿಂದ ಅಲಂಕರಿಸಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಈ ಸಂದರ್ಭದಲ್ಲಿ ತಾಪಂ ಸದಸ್ಯ ಎಚ್. ಈರಣ್ಣ, ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು.
ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಮನವಿ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಯಲ್ಲಪ್ಪ, ಸದಸ್ಯರಾದ ಪಂಪಾಪತಿ, ರಾಮಪ್ಪ, ರಾಜಶೇಖರ್, ಯಂಕಪ್ಪ, ರಾಮಾಂಜಿನಿ,ವೆಂಕಟೇಶ್, ಗ್ರಾಪಂ ಸದಸ್ಯರಾದ ನೇಮಕಲ್ಲಪ್ಪ, ಮಾರುತಿ, ಶಿಕ್ಷಕರಾದ ಶಂಕರ್, ಮಾಲಿಕ್ ಇನ್ನಿತರರಿದ್ದರು.
ಜಿಲ್ಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾಯಂ ಶಿಕ್ಷಕರ ಕೊರತೆ ಉದ್ಭವಿಸಲ್ಲ. ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಸದ್ಯ ಪ್ರೌಢಶಾಲೆಗಳಿಗೆ 90 ಅತಿಥಿ ಶಿಕ್ಷಕರ ಅಗತ್ಯವಿದೆ. ಅವಶ್ಯಕತೆ ಇರುವ ಶಾಲೆಗಳಿಗೆ ಅಗತ್ಯತೆಗೆ ತಕ್ಕಷ್ಟು ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಹೊಸ ಸರ್ಕಾರ ಬಂದಿರುವುದರಿಂದ ಈ ಬಗ್ಗೆ ಇನ್ನು ಚರ್ಚೆಯಾಗಿಲ್ಲ. ಮುಂದಿನ ತಿಂಗಳು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಶ್ರೀಧರನ್, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬಳ್ಳಾರಿ
ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.