ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಸ್ವಾಗತಾರ್ಹ : ಬಿ.ಶ್ರೀರಾಮುಲು
ಸಿದ್ದರಾಮಯ್ಯನವರಿಗೆ ಮೋದಿ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ
Team Udayavani, Aug 18, 2019, 11:59 AM IST
ಬಳ್ಳಾರಿ: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ಸ್ವಾಗತಾರ್ಹ ಎಂದು ಮೊಳಕಾಲ್ಮುರು ಶಾಸಕ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟರು.
ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಫೋನ್ ಕದ್ದಾಲಿಸುವ ಕೆಲಸವನ್ನು ಮಾಜಿ, ಹಾಲಿ ಮುಖ್ಯಮಂತ್ರಿಗಳ್ಯಾರು ಮಾಡಬಾರದು. ಈ ಹಿಂದೆ ಫೋನ್ ಕದ್ದಾಲಿಸಿದ್ದ ರಾಮಕೃಷ್ಣ ಹೆಗಡೆಯವರ ಸರ್ಕಾರವೇ ಬಿದ್ದಿದೆ. ಇಂಥಹ ಕೆಲಸವನ್ನು ಯಾರೊಬ್ಬರು ಮಾಡಬಾರದು. ರಾಷ್ಟ್ರೀಯ ನಾಯಕರ ಫೋನ್ ಗಳನ್ನು ಸಹ ಕದ್ದಾಲಿಸಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಪ್ರಕರಣವನ್ನು ಸಿಬಿಐಗೆ ವಹಿಸಿರಬಹುದು ಎಂದು ತಿಳಿಸಿದರು.
ಸಿಎಂ ಬಿಎಸ್ ವೈ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ನೆರೆಹಾವಳಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಆರೋಪಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ಮರುಜನ್ಮ ನೀಡಿದ ಬಾದಾಮಿ ಕ್ಷೇತ್ರಕ್ಕೆ ಒಮ್ಮೆಯೂ ಭೇಟಿ ನೀಡಿಲ್ಲ. ಕಣ್ಣು ನೋವಿನ ನೆಪದಲ್ಲಿ ನೆರೆಹಾವಳಿಗೆ ತುತ್ತಾಗಿದ್ದ ಕ್ಷೇತ್ರದ ಜನರ ಬಗ್ಗೆ ನಿಮಗೆ ಕಾಳಜಿಯಿಲ್ಲ. ಕಣ್ಣು ನೋವಿದೆ ಎಂದು ದೆಹಲಿಗೆ ಹೋಗುತ್ತೀರಿ. ಬಿರಿಯಾನಿ ತಿನ್ನುತ್ತೀರಿ, ಕ್ಷೇತ್ರದ ಬಗ್ಗೆ ಮಾತ್ರ ಗಮನ ಹರಿಸದ ನೀವು ಬಿಎಸ್ ವೈ, ಮೋದಿ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಹರಿಹಾಯ್ದರು.
ಇದೇ ಆಗಸ್ಟ್ 21 ರಂದು ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಮಾಧ್ಯಮಗಳಿಂದ ತಿಳಿದುಬಂದಿದೆ. ಈ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದಾರೆ. ಈ ಕುರಿತು ನಾನು ಕೂಡ ಸಿ.ಎಂ ಬಿಎಸ್ ವೈ ಅವರೊಂದಿಗೆ ಚರ್ಚಿಸುತ್ತೇನೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ನಿರ್ಣಯಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಮಾಜಿ ಸಂಸದ ಸಣ್ಣ ಪಕ್ಕೀರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.