ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿ ನಡೆಯುತ್ತಿದೆ, ಗುಣಮುಖರಾದವರು ಸಹಕಾರ ನೀಡಿ: ರಾಮುಲು
Team Udayavani, Jul 17, 2020, 12:49 PM IST
ಬಳ್ಳಾರಿ: ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿ ನಡೆಯುತ್ತಿದೆ. ಕೋವಿಡ್ ಸೋಂಕಿನಿಂದ ಗುಣಮುಖರಾದವರು ಇದಕ್ಕೆ ಸಹಕಾರ ಕೊಡಬೇಕು.ಅವರಿಗೆ ಐದು ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದರು.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ನಮ್ಮ ಬಳಿ ಸಲಹೆ ಪಡೆದಿದ್ದಾರೆ. ನಾವು ಈಗಾಗಲೇ ಎರಡು ಲಕ್ಷ ಆಂಟಿಜೆನ್ ಕಿಟ್ ಆರ್ಡರ್ ಮಾಡಿದ್ದೇವೆ. ಒಂದು ಲಕ್ಷ ನಮಗೆ ಬಂದು ತಲುಪಿದೆ ಎಂದರು.
ಎಲ್ಲಿ ಒಳ್ಳೆಯ ಕೆಲಸ ಆಗುತ್ತದೆ ಅಲ್ಲಿ ಟೀಕೆ ಬರುವುದು ಸಹಜ. ವಿರೋಧ ಪಕ್ಷದ ನಾಯಕರು ಸುಮ್ಮನೆ ಹೇಳಿಕೆ ಕೊಡುತ್ತಿದ್ದಾರೆ. ನಮ್ಮ ಸಿಎಂ, ಮಂತ್ರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಆರೋಪ ಬೇಡ ಎಂದರು.
ಖಾಸಗಿ ಆಸ್ಪತ್ರೆಗಳ ಒಡಂಬಡಿಕೆ ಸಮಯದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. 90ರಿಂದ 95 ಶೇಕಡಾ ಖಾಸಗಿ ಆಸ್ಪತ್ರೆಗಳು ಸಹಕಾರ ಕೊಡುತ್ತಿವೆ. ಸಹಕಾರ ಮಾಡದೇ ಇದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ನಾನು ದೇವರ ಮೇಲೆ ಭಾರ ಹಾಕಿದ್ದೇನೆ ಎಂಬ ವಿಚಾರಕ್ಕೆ ನಾನು ಪ್ರತಿಕ್ರಯಿಸುವುದಿಲ್ಲ. ನಾವು ಕೆಲಸ ಮಾಡುತ್ತಿದ್ದೇವೆ. ವಿಪಕ್ಷಗಳು ಅಧಿಕಾರ ಕಳೆದುಕೊಂಡು ಹತಾಶೆರಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಕೋವಿಡ್ ನಿಯಂತ್ರಣಕ್ಕೆ ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ರಿಸ್ಕ್ ತೆಗೆದುಕೊಂಡು ಕೆಲಸ ಮಾಡುವವರಿಗೆ ಪ್ರೋತ್ಸಾಹ ಧನ ಅನ್ವಯಿಸುತ್ತದೆ. ಈ ಬಗ್ಗೆ ಮುಖ್ಯಂಂತ್ರಿಗಳು ನಿರ್ಧಾರ ಮಾಡುತ್ತಾರೆ. ಆಶಾ ಕಾರ್ಯಾಕರ್ತೆಯರ ವಿಚಾರವಾಗಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರೆ ಮುಷ್ಕರ ವಾಪಸ್ ತೆಗದುಕೊಳ್ಳಿ. ನಮ್ಮೊಂದಿಗೆ ಬಂದು ಚರ್ಚೆ ಮಾಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.