ಮುಂದಿನ ಬಾರಿ ಹಂಪಿ ಉತ್ಸವಕ್ಕೆ ಪ್ರಧಾನಿ ಮೋದಿಗೆ ಆಹ್ವಾನ: ಸಿ.ಟಿ.ರವಿ
ಐತಿಹಾಸಿಕ ಹಿನ್ನೆಲೆ ಪರಿಗಣಿಸಿ ಉತ್ಸವಕ್ಕೆ ನಿರ್ದಿಷ್ಟ ದಿನಾಂಕ ನಿರ್ಧಾರ
Team Udayavani, Jan 10, 2020, 7:15 PM IST
ಹಂಪಿ (ಬಳ್ಳಾರಿ):ಮುಂದಿನ ಹಂಪಿ ಉತ್ಸವ ಆಚರಣೆವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೇ ವಹಿಸಿದಲ್ಲಿ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿ ವೈಭವವಾಗಿ ಹಂಪಿ ಉತ್ಸವ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೇಂದ್ರದ ಪ್ರವಾಸೋದ್ಯಮ ಸಚಿವರಾದ ಪ್ರಹ್ಲಾದ್‌ಸಿಂಗ್ ಪಟೇಲರನ್ನು ಉತ್ಸವಕ್ಕೆ ಆಹ್ವಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಪಾಲ್ಗೊಳ್ಳುತ್ತಿಲ್ಲ. ವಿಜಯನಗರ ಸಾಮ್ರಾಜ್ಯ ನಮ್ಮ ಹೆಮ್ಮೆ. ಅಂದಿನ ಕಾಲಘಟ್ಟದಲ್ಲಿ ನಮ್ಮ ಸನಾತನ ಕಲೆ, ಸಂಸ್ಕೃತಿ ಪರಂಪರೆಗಳು ವೈಭವದ ಪರಾಕಾಷ್ಠೆಗೆ ತಲುಪಿದ್ದವು. ಹಾಗಾಗಿ ವಿಜಯನಗರ ಸಾಮ್ರಾಜ್ಯ, ರಾಜ್ಯ-ದೇಶದ ಹೆಮ್ಮೆಯಾಗಿದ್ದು, ಇನ್ನೂ ಹೆಚ್ಚಿ ಸಂಖ್ಯೆಯಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿಗಳನ್ನು ಸೆಳೆಯುವಂತಾಗಬೇಕು ಎಂಬ ಹಂಬಲ ನಮ್ಮದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು. ಹಂಪಿ ಉತ್ಸವ ಆಚರಣೆಗೆ ಸಂಬಂ ಧಿಸಿದಂತೆ ದಿನಾಂಕ ನಿಗದಿಪಡಿಸುವ ಕುರಿತು ಇತೀ¤ಚೆಗೆ ಚರ್ಚಿಸಲಾಗಿದೆ.
ಉತ್ಸವದ ಧಾರ್ಮಿಕ, ಐತಿಹಾಸಿಕ ಹಿನ್ನೆಲೆ ಪರಿಗಣಿಸಿ ಒಂದು ದಿನಾಂಕ ನಿಶ್ಚಯಿಸಲಾಗುವುದು. ಜತೆಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ವಾರ್ಷಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಹಂಪಿ ಉತ್ಸವವನ್ನು ಸೇರಿಸಲಾಗುವುದು. ಆಗ ಯಾವುದೇ ಗೊಂದಲ ಇರಲ್ಲ. ಜತೆಗೆ ನಿಶ್ಚಿತ ಅನುದಾನ ದೊರಕುವ ಯೋಜನೆಯನ್ನು ಸಹ ರೂಪಿಸಲಾಗುವುದು.
ವಿಜಯನಗರ ಜಿಲ್ಲೆ ಘೋಷಣೆಗೆ ಸಂಬಂಧಿ ಸಿದಂತೆ ಸಿಎಂ ಯಡಿಯೂರಪ್ಪನವರು ನಿರ್ಣಯ ಕೈಗೊಳ್ಳಲಿದ್ದಾರೆ. ವಿಜಯನಗರ ಜಿಲ್ಲೆ ಘೋಷಣೆಯಾಗಲಿದೆ ಎಂಬುದು ಕ್ಷೇತ್ರದ ಶಾಸಕರ ಹಂಬಲವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.