ಕಾಯಿಲೆಗಳ ನಿರ್ಮೂಲನೆಗಾಗಿ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಿ: ತಹಸೀಲ್ದಾರ್
Team Udayavani, Feb 27, 2022, 1:28 PM IST
ಕುರುಗೋಡು: ಕಾಯಿಲೆ ಸಂಪೂರ್ಣ ನಿರ್ಮೂಲನೆಗಾಗಿ ಪ್ರತಿಯೊಬ್ಬ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ತಿಳಿಸಿದರು.
ಪಟ್ಟಣದ ಅರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪಾಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೂರು ವರ್ಷಗಳ ಹಿಂದೆಯೇ ಈ ಕಾಯಿಲೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ. ಆದರೂ ಮಗು ತಾಯಿಯ ಗರ್ಭದಲ್ಲಿದ್ದಾಗ ಯಾವುದಾದರೂ ಒಂದು ಹಂತದಲ್ಲಿ ಕಾಯಿಲೆ ಹರಡುವ ಸಂಭಾವ್ಯದ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಕಾರ‍್ಯಕ್ರಮ ಮುಂದುವರಿಸಲಾಗಿದೆ. ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ ಲಸಿಕೆಗಳನ್ನು ಶೀತಲ ಸರಪಳಿಯಲ್ಲಿ ನಿರ್ವಹಿಸಿ, ಅತ್ಯಂತ ಸುರಕ್ಷಿತವಾಗಿ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಈ ಲಸಿಕೆಯು ಅತ್ಯಂತ ಸುರಕ್ಷಿತವಾಗಿದ್ದು, ಪೋಷಕರು ಹಾಗೂ ಸಮುದಾಯವು ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ತಪ್ಪದೇ ಕರೆದೊಯ್ದು ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ವೈದ್ಯಧಿಕಾರಿ ಮಂಜುನಾಥ್ ಜವಳಿ ಮಾತನಾಡಿ, ಪೋಲಿಯೋ ಲಸಿಕೆ ಬಗ್ಗೆ ಈಗಾಗಲೇ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಎಲ್ಲ ಕಡೆ ತೆರಳಿ ಜಾಗೃತಿ ಮೂಡಿಸಲಾಗಿದೆ. ಇದರ ಜೊತೆಗೆ ಪಟ್ಟಣದ ಮುಖ್ಯ ವೃತ್ತದಲ್ಲಿ ಹಾಗೂ ಬಾದನಹಟ್ಟಿ ರಸ್ತೆ, ಕಂಪ್ಲಿ ರಸ್ತೆ ಗಳಲ್ಲಿ ಲಸಿಕೆ ಹಾಕಲು ಏರ್ಪಡಿಸಲಾಗಿದೆ. ಲಸಿಕೆಯನ್ನು ಪಡೆದಿದ್ದರೂ ಪುನಃ ಪೋಲಿಯೋ ಲಸಿಕೆಯನ್ನು ಮಕ್ಕಳು ಪಡೆಯಲೇಬೇಕು. ಪೋಷಕರು ತಮ್ಮ ಐದು ವರ್ಷದ ಒಳಗಿನ ಎಲ್ಲ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಕೊಡಿಸಬೇಕಿದೆ. ಹಾಗಾಗಿ ಈ ರಾಷ್ಟ್ರೀಯ ಕಾರ‍್ಯಕ್ರಮದಲ್ಲಿ ಪೋಷಕರು, ಸಾರ್ವಜನಿಕರು, ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು, ಸ್ವಯಂ ಸೇವಾ ಸಂಸ್ಥೆಗಳು ಭಾಗವಹಿಸಿ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸಿ, ಪೋಲಿಯೋ ರೋಗ ನಿರ್ಮೂಲನಾ ಆಂದೋಲನಕ್ಕೆ ಸಹಕರಿಸಬೇಕು,” ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.