ಅಧಿಕಾರಿಗಳಿಂದ ಮಳೆಹಾನಿ ಪ್ರದೇಶ ಪರಿಶೀಲನೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ

Team Udayavani, May 24, 2022, 5:55 PM IST

officers

ಬಳ್ಳಾರಿ: ಬಳ್ಳಾರಿ ತಾಲೂಕು ಸೇರಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ| ಅಜಯ್‌ ನಾಗಭೂಷಣ್‌ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ನಗರದ 32ನೇ ವಾರ್ಡ್‌ ವ್ಯಾಪ್ತಿಯಲ್ಲಿ ಬರುವ ಬಂಡಿಹಟ್ಟಿ ಪ್ರದೇಶದಲ್ಲಿ ಮಳೆಯಿಂದ ಸಂಪೂರ್ಣ ಹಾನಿಗೊಳಗಾದ ಗಂಗಮ್ಮ ಹೊನ್ನೂರಪ್ಪ ಅವರ ಮನೆಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಹಾಗೂ ಗಂಗಮ್ಮ ಅವರಿಂದ ಮಾಹಿತಿ ಪಡೆದುಕೊಂಡರು.

ನಂತರ ಬಳ್ಳಾರಿ ತಾಲೂಕಿನ ಕಪಗಲ್ಲು ಗ್ರಾಮದ ಬಳಿಯ ರಮಿಸ್ತಾ ಅವರ ಹೊಲದಲ್ಲಿ ಬೆಳೆದು ನಿಂತಿದ್ದ ಪಪ್ಪಾಯ ಬೆಳೆ ಮಳೆಗೆ ಹಾನಿಯಾಗಿರುವುದನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ರೈತರ ಅಹವಾಲನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಲಿಸಿದರು. ನಂತರ ಅವರು ಭೆ„ರದೇವನಹಳ್ಳಿ ಗ್ರಾಮದ ಬಳಿಯ ನಾಗಿರೆಡ್ಡಿ ಹಾಗೂ ಇನ್ನಿತರೆ ರೈತರುಗಳ ಹೊಲದಲ್ಲಿ ಭತ್ತದ ಬೆಳೆ ಸಂಪೂರ್ಣ ಹಾನಿಯಾಗಿ ನೆಲಕ್ಕೆ ಮಲಗಿರುವುದನ್ನು ಪರಿಶೀಲಿಸಿದರು. ಗ್ರಾಮದ ಹೊಲದಲ್ಲಿ ಮಳೆಯಿಂದ ಹಾನಿಯಾದ ಶೇಂಗಾ ಬೆಳೆಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಳೆಯಿಂದ ಬೆಳೆ ಹಾನಿ ಹಾಗೂ ಮನೆ ಹಾನಿಯಾಗಿರುವುದಕ್ಕೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳ ಅನ್ವಯ ಪರಿಹಾರವನ್ನು ರೈತರು ಹಾಗೂ ಫಲಾನುಭವಿಗಳ ಖಾತೆಗೆ ಆರ್‌ಟಿಜಿಎಸ್‌ ಮುಖಾಂತರ ಶೀಘ್ರವಾಗಿ ಪಾವತಿಸಲಾಗುವುದು ಎಂದರು. ಯಾರು ಆತಂಕ ಪಡಬೇಕಿಲ್ಲ. ಧೈರ್ಯದಿಂದ ಇರಿ. ಸರ್ಕಾರ ಮತ್ತು ಜಿಲ್ಲಾಡಳಿತ ತಮ್ಮೊಂದಿಗಿದೆ ಎಂದರು. ನಂತರ ಅವರು ಭೆ„ರದೇವನಹಳ್ಳಿ(ಮೋಕಾ) ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಚರ್ಚಿಸಿದರು. ಮಕ್ಕಳಿಗೆ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣದ ಬಗ್ಗೆ ಚರ್ಚೆ ನಡೆಸಿದರು. ಗುಣಮಟ್ಟದ ಶಿಕ್ಷಣ ನೀಡುವಂತೆ ಪ್ರಾಂಶುಪಾಲರಾದ ಅನಸೂಯ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್‌ ಮಾಲಪಾಟಿ, ಜಿಪಂ ಸಿಇಒ ಜೆ. ಲಿಂಗಮೂರ್ತಿ, ಅಪರ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ, ತಹಶೀಲ್ದಾರ್‌ ವಿಶ್ವನಾಥ, ಕೃಷಿ ಇಲಾಖೆಯ ಜಂಟಿನಿರ್ದೇಶಕ ಮಲ್ಲಿಕಾರ್ಜುನ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಸ್‌.ಪಿ. ಭೋಗಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.