ಗಣರಾಜ್ಯೋತ್ಸವಕ್ಕೆಸಕಲ ಸಿದ್ಧತೆ

Team Udayavani, Jan 20, 2021, 8:13 PM IST

Preparing for the Republic Day

ಬಳ್ಳಾರಿ: ಕೋವಿಡ್‌-19 ಮತ್ತು ರೂಪಾಂತರ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಜ.26ರಂದು ನಡೆಯುವ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ್‌ ಹೇಳಿದರು.

ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌-19 ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಸರಳವಾಗಿ ಆಚರಿಸಲಾಗುವುದು ಮತ್ತು ಎಲ್ಲ ಸರ್ಕಾರಿ ಕಚೇರಿಗಳು, ಶಾಲೆ ಮತ್ತು ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ಯಾನಿಟೈಸೇಷನ್‌, ಮಾಸ್ಕ್ ಕಡ್ಡಾಯವಾಗಿ ಧರಿಸಿಕೊಳ್ಳುವುದರ ಮೂಲಕ ಗಣರಾಜ್ಯೋತ್ಸವ ಆಚರಿಸಬೇಕು ಎಂದು ತಿಳಿಸಿದರು.

ಜ.26 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ನಗರದ ಎಚ್‌.ಆರ್‌.ಗವಿಯಪ್ಪ ವೃತ್ತದಲ್ಲಿ (ಮೋತಿ ವೃತ್ತ) 150 ಅಡಿ ಎತ್ತರದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ. ನಂತರ ವೈದ್ಯಕೀಯ ಕಾಲೇಜಿನಲ್ಲಿರುವ ಮಹಾತ್ಮ ಗಾಂಧೀಜಿಯ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಿ, ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನ ಪಡೆಗಳಿಂದ ಗೌರವ ಸ್ವೀಕರಿಸಿ ಸಂದೇಶ ನೀಡಲಿದ್ದಾರೆ ಎಂದು ವಿವರಿಸಿದರು.

ಇದನ್ನೂ ಓದಿ:ಯುವಶಕ್ತಿಯಿಂದ ದೇಶದ ವಿಕಾಸ

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಿಗೆ ಭೂಮಿಯ ಹಕ್ಕು ಪತ್ರಗಳನ್ನು ವಿತರಿಸುವುದರ ಜೊತೆಗೆ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಗೌರವಿಸಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕೋವಿಡ್‌ -19 ಮಾರ್ಗಸೂಚಿಗಳನ್ವಯ ಗಣರಾಜ್ಯೋತ್ಸವವನ್ನು ಆಚರಿಸುವಂತೆ ಸೂಚಿಸಿದರು, ಜಿಲ್ಲೆಯ ಎಲ್ಲಾ ಪ್ರಮುಖ ವೃತ್ತಗಳಲ್ಲಿ, ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರ ಮಾಡಬೇಕು ಮತ್ತು ಅಂದು ವಿವಿಧ ದೇವಸ್ಥಾನಗಳಿಗೆ ವಿಶೇಷ ವಿದ್ಯುತ್‌ ದೀಪಾಲಂಕಾರ, ವಿಶೇಷ ಪೂಜೆ, ಪಾರ್ಥನೆ ಮಾಡಲು ಸೂಚಿಸಿದರು.

ಸಭೆಯಲ್ಲಿ ಸಹಾಯಕ ಆಯುಕ್ತರಾದ ರಮೇಶ್‌ ಕೊನರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ರಂಗಣ್ಣನವರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಚ್‌.ಎಲ್‌. ಜನಾರ್ದನ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.