ಶಿಕ್ಷಣದ ಪಾವಿತ್ರ್ಯತೆ ಕಾಪಾಡಿ: ನಮೋಶಿ
ತಾಲೂಕಿನ ಸಮಗ್ರ ಶಿಕ್ಷಣಕ್ಕೆ 25ಕೋಟಿ ಮೀಸಲಿರಿಸಿ ಶೈಕ್ಷಣಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗಿದೆ
Team Udayavani, Nov 23, 2022, 6:35 PM IST
ಕೂಡ್ಲಿಗಿ: ವಿದ್ಯಾರ್ಥಿಗಳ ಜೀವನವನ್ನು ರೂಪಿಸುವ ಅತ್ಯಂತ ಮಹತ್ತರ ಪಾತ್ರವನ್ನು ಹೊಂದಿದವರೆಂದರೆ ಅದು ಶಿಕ್ಷಕರ ಮಾತ್ರ ಎಂದು ವಿಧಾನಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ ಹೇಳಿದರು.
ಅವರು ಪಟ್ಟಣದ ಹಿರೇಮಠ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ತಾಲೂಕು ಘಟಕ ಏರ್ಪಡಿಸಿದ ನೂತನ ಪದಾಧಿ ಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಶಿಕ್ಷಕರಿಗೆ ವೈಯಕ್ತಿಕವಾಗಿ ಎಷ್ಟೇ ಸಮಸ್ಯೆಗಳಿದ್ದರೂ, ಅವುಗಳನ್ನು ಮರೆತು ಶಿಕ್ಷಣದ ಪಾವಿತ್ರ್ಯತೆ ಕಾಪಾಡಿಕೊಂಡು ಇಂದಿನ ಶೈಕ್ಷಣಿಕ ಮಟ್ಟದ ಸುಧಾರಣೆಗೆ ಮುಖ್ಯ ಪಾತ್ರವನ್ನು ವಹಿಸಿಕೊಳ್ಳಬೇಕೆಂದು ತಿಳಿಸಿದರು.
ಮನೆ ನಂತರ ಮಕ್ಕಳು ಶಾಲೆಯಲ್ಲಿ ಅತಿ ಹೆಚ್ಚಿನ ಸಮಯ ಕಳೆಯುತ್ತಾರೆ. ವಿದ್ಯಾಭ್ಯಾಸದ ಜೊತೆಗೆ ನೈತಿಕ ಶಿಕ್ಷಣವನ್ನು ನೀಡಬೇಕಾದ ಗುರುತರ ಜವಾಬ್ದಾರಿಯನ್ನು ಪ್ರತಿಯೊಬ್ಬ ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದರು. ಸಹೋದ್ಯೋಗಿಗಳ ಜೊತೆಯಲ್ಲಿ ಯಾವುದೇ ಮನಸ್ತಾಪಗಳನ್ನು
ಮಾಡಿಕೊಳ್ಳದೆ ಉತ್ತಮ ಬಾಂಧವ್ಯಗಳೊಂದಿಗೆ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕೆಂದರು. ಬಡ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಈಗಾಗಲೇ ಮಾಡಿದ್ದೇನೆ. ಇಷ್ಟರಲ್ಲಿಯೇ ಅದಕ್ಕೆ ಪರಿಹಾರ ಸಿಗಲಿದೆ ಎಂದ ಅವರು ಹಿರೇಮಠ ಪ್ರೌಢಶಾಲೆಯ ಅಭಿವೃದ್ಧಿಗಾಗಿ 5 ಲಕ್ಷ ಮಂಜೂರು ಮಾಡುತ್ತೇನೆಂದು ನುಡಿದರು.
ಶಾಸಕ ಎನ್.ವೈ. ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಕ್ಷೇತ್ರಕ್ಕೆ ಬಂದ ನಂತರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದೇನೆ. ಸುಮಾರು 450 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ.ಶೈಕ್ಷಣಿಕ ಚಟುವಟಿಕೆ ಕೇಂದ್ರದ ನಿರ್ಮಾಣ ಕಟ್ಟಡಕ್ಕೆ 1.40ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ತಾಲೂಕಿನ ಸಮಗ್ರ ಶಿಕ್ಷಣಕ್ಕೆ 25ಕೋಟಿ ಮೀಸಲಿರಿಸಿ ಶೈಕ್ಷಣಿಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಮಕ್ಕಳು ಗುರುವಿನ ಮಾತನ್ನು ಆಲಿಸುವುದರಿಂದ ಅವರಿಗೆ ನೀವೇ ದಾರಿ ದೀಪಗಳಾಗಬೇಕು. ಅವರ ಜೀವನ ಸುಧಾರಿಸುವಲ್ಲಿ ನಿಮ್ಮ ಪವಿತ್ರ ಕಾರ್ಯ ಮೀಸಲಾಗಿರಲಿ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಪಂ ಅಧ್ಯಕ್ಷ ಎಂ. ಶಾರದಬಾಯಿ ವಹಿಸಿದ್ದರು. ನೂತನ ಅಧ್ಯಕ್ಷರಾದ ಎಸ್.ವಿ. ಸಿದ್ಧಾರಾಧ್ಯ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ರಾಮು ಆ. ಗೊಗವಾಡ, ಎನ್ .ಜಿ. ಮನೋಹರ, ಶಿವರಾಜ ಪಾಲೂ¤ರ್, ಎಚ್.
ಎಲ್. ಕುಮಾರಸ್ವಾಮಿ, ಎಸ್.ಜಗದೀಶ, ಕೆ.ಜಿ. ಆಂಜನೇಯ, ಪಿ.ಡಿ. ರಂಗಪ್ಪ, ಬಿ.ಎಸ್. ಕರಿಬಸಪ್ಪ, ಜಿ.ಹನುಮೇಶ, ಕೆ.ಎಸ್. ವೀರೇಶ್. ಕೆ.ಎಚ್.ಎಂ. ಶಶಿಧರ ಸೇರಿದಂತೆ ಅನೇಕ ಸಹ ಶಿಕ್ಷಕರಿದ್ದರು. ಷ.ಬ್ರ. ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.