ಕೇಂದ್ರ ಮತ್ತು ರಾಜ್ಯದ ಬಿಜೆಪಿ  ಸರ್ಕಾರಗಳ ನೀತಿ ಖಂಡಸಿ ಪ್ರತಿಭಟನೆ 


Team Udayavani, Feb 2, 2021, 5:02 PM IST

protest against BJP govt in bellary

ಬಳ್ಳಾರಿ: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಎಸ್‌ಸಿ, ಎಸ್‌ಟಿ, ಓಬಿಸಿ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ವಿರೋಧಿ ನೀತಿಗಳನ್ನು ಖಂಡಿಸಿ ಬಹುಜನ ಸಮಾಜ ಪಕ್ಷದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.

ನಗರದ ಕೌಲ್‌ ಬಜಾರ್‌ನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾನಿರತರು ಎಚ್‌ಆರ್‌ ಗವಿಯಪ್ಪ ವೃತ್ತ, ಗಡಗಿ ಚನ್ನಪ್ಪ ವೃತ್ತದ ಮೂಲಕ ಜಿಲ್ಲಾ ಧಿಕಾರಿ ಕಚೇರಿ ತೆರಳಿದರು. ಮೆರವಣಿಗೆಯುದ್ದಕ್ಕೂ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮೀಸಲಾತಿ ಕೊನೆಗೊಳಿಸಲು ಸರ್ಕಾರಿ ಉದ್ದಿಮೆ, ಬ್ಯಾಂಕ್‌ ಅಯಿಲ್‌ ಕಂಪನಿ, ರೈಲ್ವೆ ಎಲ್‌ಐಸಿ, ಬಿಎನ್‌ ಎನ್‌ಎಲ್‌, ವಿಮಾನ ನಿಲ್ದಾಣಗಳನ್ನು ಅಂಬಾನಿ, ಅದಾನಿಗೆ ಮಾರಿದ್ದಾರೆ. ಈ ಎಲ್ಲ ಅನ್ಯಾಯಗಳನ್ನು ಮರೆಮಾಚಲು ಉಭಯ ಸರ್ಕಾರಗಳು ಧರ್ಮ, ರಾಮ ಮಂದಿರ ನಿರ್ಮಾಣ ಹೆಸರಿನಲ್ಲಿ ಜನರನ್ನು ಮರಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ದೇಶದಲ್ಲಿ 2018-19, 2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ 60 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಿಲ್ಲಿಸಿದ್ದು, ಕೂಡಲೇ ಬಿಡುಗಡೆಗೊಳಿಸಬೇಕು. ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ದೆಹಲಿಯಲ್ಲಿ ಜ. 26ರಂದು ನಡೆದ ಅಹಿತಕರ ಘಟನೆಗೆ ಕಾರಣರಾದವರನ್ನು ಶಿಕ್ಷೆಗೆ ಗುರಿಪಡಿಸಬೇಕು. ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವರದಿಯಂತೆ ಪರಿಶಿಷ್ಟ ಜಾತಿ ಮೀಸಲು ಪ್ರಮಾಣವನ್ನು ಶೇ. 20, ಪರಿಶಿಷ್ಟ ವರ್ಗಕ್ಕೆ ಶೇ.10ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ ಜಾತಿ, ವರ್ಗದವರ ಜಮೀನುಗಳನ್ನು ಉಳಿಸಲು ಕ್ರಮಕೈಗೊಳ್ಳಬೇಕು. ಇನಾಮ್‌ ಭೂಮಿಯನ್ನು ಪಿಟಿಸಿಎಲ್‌ ಕಾಯ್ದೆ ವ್ಯಾಪ್ತಿಗೆ ತರಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ  :ಎಟಿಎಂನಲ್ಲಿ ಹಲ್ಲೆ ಪ್ರಕರಣ: ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷಗಳ ಜೈಲು ಶಿಕ್ಷೆ ಪ್ರಕಟ

ಪ್ರತಿಭಟನೆಯಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎಚ್‌. ಈರಣ್ಣ, ಜಿಲ್ಲಾ ಉಸ್ತುವಾರಿ ಮಹ್ಮದ್‌ ಬಾಷಾ, ಪಿ. ರಸೂಲ್‌ಸಾಬ್‌, ಎಚ್‌.ಎಂ.ಇಸ್ಮಾಯಿಲ್‌, ಆಲಬಾಷಾ, ನಜೀರ್‌ ಅಹ್ಮದ್‌, ಸಲೀಂಬಾಷಾ, ಎಚ್‌. ಲಕ್ಷ್ಮಣ, ಜಾನ್‌ರಾಜ್‌, ಅಬ್ದುಲ್‌ ರಷೀದ್‌, ಎ.ಗೋವಿಂದ, ಕಲೀಲ್‌ ಖಾನ್‌, ಎಂ.ಡಿ.ಗೌಸ್‌ ಇದ್ದರು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.