ಹತ್ರಾಸ್ ಘಟನೆ ಖಂಡಿಸಿ ಪ್ರತಿಭಟನೆ
Team Udayavani, Oct 14, 2020, 5:29 PM IST
ಬಳ್ಳಾರಿ: ದೇಶದಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನುನಿಯಂತ್ರಿಸಬೇಕು. ರೈತ -ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಎಐಡಿಎಸ್‌ಒ ಸಂಘಟನೆ ವತಿಯಿಂದ ಸಂಘರ್ಷ ದಿನದ ಅಂಗವಾಗಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಉತ್ತರಪ್ರದೇಶದ ಹತ್ರಾಸ್‌ನಲ್ಲಿಯುವತಿ ಮೇಲೆ ನಡೆದ ಅತ್ಯಾಚಾರ ಕೊಲೆಯನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಓ) ಉಗ್ರವಾಗಿ ಖಂಡಿಸುತ್ತದೆ. ಈ ಪೈಶಾಚಿಕ ಕೃತ್ಯವನ್ನು ಎಸಗಿದ ನಾಲ್ವರು ಯುವಕರು ಘಟನೆ ನಡೆದ ನಂತರವೂ ಯಾವುದೇ ಅಳುಕಿಲ್ಲದೆ ಸ್ವತಂತ್ರವಾಗಿ ಓಡಾಡಿಕೊಂಡಿದ್ದು ನಾಗರಿಕ ಸಮಾಜಕ್ಕೆ ಆಘಾತವನ್ನುಂಟು ಮಾಡಿದೆ. ಅತ್ಯಾಚಾರ ಮಾಡಿ, ಬೆನ್ನುಹುರಿಯನ್ನು ಮುರಿದು, ನಾಲಿಗೆ ಕತ್ತರಿಸಿ ಆಕೆಯನ್ನು ಅರೆಜೀವವನ್ನಾಗಿ ಮಾಡಿ ಅತ್ಯಾಚಾರಿಗಳು ಪಲಾಯನ ಮಾಡಿದ್ದರು. ಗಾಯಗೊಂಡು ನರಳುತ್ತಿದ್ದ ಸಂತ್ರಸ್ತೆಯನ್ನು ವೈದ್ಯಕೀಯ ನೆರವನ್ನು ನೀಡದೆ ಪೊಲೀಸ್ ಠಾಣೆಯಲ್ಲಿ ಅಮಾನವೀಯವಾಗಿ ಸತಾಯಿಸಿ, ನಂತರ ಪೋಷಕರೇ ಆಕೆಯನ್ನು ಆಸ್ಪತ್ರೆಗೆ ದಾಖಲುಮಾಡುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದ ಪೋಲಿಸರ ನಡವಳಿಕೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದುಪ್ರತಿಭಟನಾಕಾರರು ತಿಳಿಸಿದರು.
ಕೋವಿಡ್ ಮಹಾಮಾರಿಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತ-ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಜಾರಿಮಾಡಲು ಹೊರಟಿರುವ ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ, ವಿದುತ್ಯ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳುಗಾಯದ ಮೇಲೆ ಬರೆ ಎಳೆದಂತಾಗಿದೆ. ಯಾವುದೇ ಚರ್ಚೆಗಳನ್ನು ನಡೆಸದೆ ಅಪ್ರಜಾತಾಂತ್ರಿಕವಾಗಿ ಜಾರಿಗೊಳಿಸಿರುವ ತಿದ್ದುಪಡಿಗಳು ಕಾರ್ಮಿಕರ ಮುಷ್ಕರದಹಕ್ಕನ್ನೇ ಕಸಿದುಕೊಳ್ಳುತ್ತವೆ. ಈ ಯಾವುದೇ ಕಾಯ್ದೆಗಳು ಜನಪರವಾಗಿರದೆ ಜನವಿರೋಧಿ, ರೈತ-ಕಾರ್ಮಿಕ ವಿರೋಧಿ ಯಾಗಿದ್ದು ಸರ್ಕಾರವು ಕೂಡಲೇ ಈ ಎಲ್ಲ ಕಾಯ್ದೆಗಳು ಕೈಬಿಡಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಜಿ.ಸುರೇಶ್, ಜಿಲ್ಲಾ ಉಪಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಸೆಕ್ರಟರಿಯಟ್ ಸದಸ್ಯರಾದ ಕೆ.ಈರಣ್ಣ, ಎಂ.ಶಾಂತಿ ಹಾಗೂ ಸದಸ್ಯರಾದ ಸಿದ್ದು, ಶೇಖರ್, ಶ್ರೀನಿವಾಸ್ ಇನ್ನಿತರರು ಇದ್ದರು
ಘಟನೆ ಖಂಡಿಸಿ ದಲಿತ ಸಂಘಟನೆಯಿಂದ ಮನವಿ :
ಸಿರುಗುಪ್ಪ: ಉತ್ತರ ಪ್ರದೇಶ ಹತ್ರಾಸ್‌ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕರ್ನಾಟಕ ರಾಜ್ಯದಲಿತ ಸಂಘರ್ಷ ಸಮಿತಿ (ಡಿ.ಜಿ. ಸಾಗರ್‌ಬಣ) ತಾಲೂಕು ಶಾಖೆ ಪದಾಧಿ ಕಾರಿಗಳುಗ್ರೇಡ್-2 ತಹಶೀಲ್ದಾರ್ ಮೂಲಕರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಸಂಘಟನ ಸಂಚಾಲಕ ಎಚ್.ಬಿ. ಗಂಗಪ್ಪ ಮಾತನಾಡಿ, ದಿನ ಬೆಳಗಾದರೆ
ದಲಿತರ ಮೇಲೆ ಸಾಮೂಹಿಕ ಕೊಲೆ, ಸುಲಿಗೆಗಳು, ಸಾಮೂಹಿಕ ಅತ್ಯಾಚಾರ, ಬೆತ್ತಲೆ ಮೆರವಣಿಗೆಗಳು ನಡೆಯುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಇಬ್ಬರುಯುವತಿಯರ ಮೇಲೆ ನಡೆದ ಸಾಮೂಹಿಕಅತ್ಯಾಚಾರ ಮತ್ತು ಕಗ್ಗೊಲೆ ಅಮಾನವೀಯ ಕೃತ್ಯವಾಗಿದೆ.
ಅತ್ಯಾಚಾರಕ್ಕೊಳಗಾದ ಕುಟುಂಬಕ್ಕೆ ರಕ್ಷಣೆ ನೀಡದೆ ಅತ್ಯಾಚಾರಕೊಳಗಾದ ಯುವತಿ ಶವವನ್ನು ರಾತ್ರೋರಾತ್ರಿ ದಹನ ಮಾಡಿರುವುದಲ್ಲದೇ ಘಾಸಿಗೊಂಡ ಕುಟುಂಬದವರು ಪ್ರತಿಕ್ರಿಯಿಸದೆ ಮೌನ ವಹಿಸಬೇಕೆಂದು ಫರ್ಮಾನು ಹೊರಡಿಸುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಕಾರ್ಯವೈಖರಿ ಸರಿಯಾದುದಲ್ಲ. ಘಟನೆಯನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುವ ಪ್ರಯತ್ನಗಳು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುತ್ತಿದೆ. ಸ್ವತಃ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ಬಹಿರಂಗವಾಗಿ ಅತ್ಯಾಚಾರಿಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಠಾಕೂರ್ ಯುವಕರಲ್ಲಿ ಬಿಸಿರಕ್ತ ಇರುವುದರಿಂದ ಸಹಜವಾಗಿ ಇಂಥ ಪ್ರಕರಣಗಳು ನಡೆಯುತ್ತಿವೆ ಎಂಬ ಹೇಳಿಕೆಯು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ತಿ ಬಾಯಿಂದ ಬರುತ್ತದೆ ಎಂದರೆ ಇನ್ನೂ ಮುಂದಿನ ದಿನಗಳಲ್ಲಿ ಇನ್ನಷ್ಟು ಅತ್ಯಾಚಾರಗಳು ನಡೆಯಲಿ ಎಂದು ಬಹಿರಂಗವಾಗಿಯೇ ಪ್ರಚೋದಿಸಿದಂತಾಗುತ್ತದೆ. ಆದ್ದರಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
ತಾಲೂಕು ಸಂಚಾಲಕ ಎಂ. ದೊಡ್ಡಬಸಪ್ಪ, ಸಂಘಟನಾ ಸಂಚಾಲಕರಾದ ಎಸ್. ವೀರೇಶ್, ಭೀಮೇಶ್, ಎಸ್. ರಫಿ, ದಲಿತ ವಿದ್ಯಾರ್ಥಿ ಒಕ್ಕೂಟದ ಸಂಘಟನಾ ಸಂಚಾಲಕರಾದ ಎಚ್. ವಿರೇಶ, ಮೂಕಪ್ಪನಡವಿ, ಹನುಮೇಶ, ಮೂಕಪ್ಪಬೆಳಗಲ್, ಸಣ್ಣಯ್ಯ, ತಿಮ್ಮಯ್ಯ, ಮಹಾದೇವಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.