ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ

Team Udayavani, Sep 24, 2019, 1:08 PM IST

ballary-tdy-1

ಬಳ್ಳಾರಿ: ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ರಚಿಸುವ ಸಲುವಾಗಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿ ಕಾರಿಗಳು ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವಕೀಲರ ಸಂಘ, ರೈತರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ಬಳ್ಳಾರಿ ಜಿಲ್ಲೆಯನ್ನುಯಾವುದೇ ಕಾರಣಕ್ಕೂ ವಿಭಜಿಸಬಾರದು ಎಂದು ಒತ್ತಾಯಿಸಿದರು.

ಯಾವುದೇ ಕಾರಣಕ್ಕೂ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಬಾರದು. ಬಳ್ಳಾರಿ ಜಿಲ್ಲೆಯನ್ನು ಅಖಂಡ ಜಿಲ್ಲೆಯಾಗಿ ಉಳಿಸಬೇಕು. ಅನರ್ಹ ಶಾಸಕ ಆನಂದಸಿಂಗ್‌ ಅವರ ಅನುಕೂಲಕ್ಕಾಗಿ ಜಿಲ್ಲೆಯನ್ನು ವಿಭಜಿಸುವುದಲ್ಲದೇ, ಇಡೀ ಜಿಲ್ಲೆಯ ಜನತೆಯ ಆಶೋತ್ತರಗಳಿಗೆ ಬೆಲೆ ಕೊಡುವುದನ್ನು ಮುಖ್ಯಮಂತ್ರಿಗಳು ಮರೆಯಬಾರದು. ವಿಧಾನಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ, ಮಾಜಿ ಸದಸ್ಯ ಅಲ್ಲಂ ವೀರಭದ್ರಪ್ಪ ಜಿಲ್ಲೆ ವಿಭಜನೆಗೆ ಬೆಂಬಲ ಘೋಷಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇವರು ಬಳ್ಳಾರಿ ಜಿಲ್ಲೆಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲೆಯನ್ನು ಸ್ವತಂತ್ರ ಪೂರ್ವದಲ್ಲೆ ಇಬ್ಭಾಗ ಮಾಡಿದ್ದರಿಂದ ಇಂದಿಗೂ ತೊಂದರೆ ಅನುಭವಿಸುತ್ತಿದ್ದೇವೆ. ಇದೀಗ ಮತ್ತೆ ವಿಭಜಿಸಿ ಬಳ್ಳಾರಿ ಜನತೆಗೆ ಅನ್ಯಾಯ ಮಾಡಬಾರದು. ಇಬ್ಭಾಗ ಮಾಡುವುದರಿಂದ ಬಳ್ಳಾರಿಯ ಐತಿಹಾಸಿಕ ಹಿನ್ನೆಲೆಗೆ ತೊಂದರೆಯಾಗಲಿದೆ. ಈಗಾಗಲೇ ಜಿಪಂ ಉಪವಿಭಾಗ, ಲೋಕಪಯೋಗಿ, ಭೂ ಸೇನಾ ನಿಗಮ ಕಚೇರಿಗಳು ಹೂವಿನಹಡಗಲಿಯಲ್ಲಿವೆ.

ಉಪ ವಿಭಾಗಾಧಿಕಾರಿಗಳ ಕಚೇರಿ, ಗಣಿ ಮತ್ತು ಭೂ ವಿಜ್ಞಾನ, ಪ್ರವಾಸೋದ್ಯಮ, ಹಂಪಿ ವಿಶ್ವ ಪಾರಂಪರಿಕ ಪ್ರಾದೇಶಿಕ ಪ್ರಾಧಿಕಾರ ಕಚೇರಿ, ಕೇಂದ್ರ ಪುರಾತತ್ವ ಸಂಯೋಜನಾ ಇಲಾಖೆ, ರಾಜ್ಯ ಹೆದ್ದಾರಿಗಳ ಕಚೇರಿಗಳು ಸೇರಿ ಪ್ರಮುಖ ಕಚೇರಿಗಳು ಹೊಸಪೇಟೆಯಲ್ಲಿವೆ. ಕೇವಲ ಡಿಸಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿಗಳ ಕಚೇರಿ ಮತ್ತು ಕೃಷಿ ಹಾಗೂ ಕೈಗಾರಿಕೆ ಇಲಾಖೆ ಕಚೇರಿಗಳು ಬಳ್ಳಾರಿಯಲ್ಲಿವೆ ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವುದರಿಂದ ಹೊಸಪೇಟೆಯಲ್ಲಿನ ತುಂಗಭದ್ರಾ ಜಲಾಶಯದಿಂದ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಯಿದೆ. ಜನರ ನಡುವೆ ಹೊಂದಾಣಿಕೆ ತಪ್ಪಿ ಗಲಾಟೆ, ಗದ್ದಲಗಳು ಸೃಷ್ಟಿಯಾಗುವ ಸಾಧ್ಯತೆಯಿದೆ. ಹಾಗಾಗಿ ಬಳ್ಳಾರಿ ಜಿಲ್ಲೆಯನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕಸಾಪ ಜಿಲ್ಲಾಧ್ಯಾಕ್ಷ ಸಿದ್ದರಾಮ ಕಲ್ಮಠ, ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ, ವಕೀಲರ ಸಂಘದ ಅಧ್ಯಕ್ಷ ಅಂಕಲಯ್ಯಸ್ವಾಮಿ, ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಟಿ.ಎಚ್‌.ಎಂ.ಬಸವರಾಜ, ಮುಖಂಡರಾದ ಟಪಾಲ್‌ ಗಣೇಶ, ಚಾನಾಳ್‌ ಶೇಖರ್‌, ಶ್ರೀನಿವಾಸ, ಮೇಕಲ ಈಶ್ವರರಡ್ಡಿ, ಮೋಹನಬಾಬು, ಮಧುಸೂಧನ, ಶಬ್ಬೀರ್‌ ಶೇಖ್‌, ವೀರೇಶ ಮತ್ತಿತರರಿದ್ದರು.

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.