ಜನಪ್ರತಿನಿಧಿಗಳ ಅಣಕು ಶವಯಾತ್ರೆ

Team Udayavani, Jan 2, 2021, 4:16 PM IST

ಜನಪ್ರತಿನಿಧಿಗಳ ಅಣಕು ಶವಯಾತ್ರೆ

ಬಳ್ಳಾರಿ: ಜಿಲ್ಲಾ ವಿಭಜನೆಯನ್ನು ಖಂಡಿಸಿ ನಗರದ ಡಿಸಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯ ಶುಕ್ರವಾರ 19ನೇ ದಿನ ಪೂರ್ಣಗೊಳಿಸಿದ್ದು,ಧರಣಿಗೆ ಬೆಂಬಲಿಸಿದ ಅಪ್ಪು ಸೇವಾ ಸಮಿತಿ ವತಿಯಿಂದ ಜಿಲ್ಲೆಯ ಜನಪ್ರತಿನಿಧಿ ಗಳ ಅಣಕು ಶವಯಾತ್ರೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿತು.

ಅಣಕು ಶವವನ್ನು ಸಿದ್ಧಪಡಿಸಿದ್ದ ಸಮಿತಿಯ ಸದಸ್ಯರು, ಅದರ ಮೇಲೆ ಷಂಡ ಜನಪ್ರತಿನಿಧಿ ಗಳ ಅಣಕುಶವಯಾತ್ರೆ ಎಂದು ಬರೆದು ಜಿಲ್ಲೆಯ ಜನಪ್ರತಿನಿ ಧಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳಿಗೆ, ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗುವುದರ ಜತೆಗೆ ಜಿಲ್ಲೆ ಜನಪ್ರತಿನಿಧಿಗಳೆಲ್ಲರೂ ಡಿ. 31ರಂದು ಮಧ್ಯರಾತ್ರಿ ಸತ್ತು ಹೋಗಿದ್ದಾರೆ ಎಂದು ಗೋಳಾಡಿವ್ಯಂಗ್ಯವಾಡುವ ಮೂಲಕ ಜಿಲ್ಲೆ ವಿಭಜನೆ ಬಗ್ಗೆ ಧ್ವನಿ ಎತ್ತದ, ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿರುವ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಗೂಬೆಂಬಲ ವ್ಯಕ್ತಪಡಿಸಿದ ಜಿಲ್ಲೆಯ ಜನಪ್ರತಿನಿಧಿ ಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಧರಣಿ ಸ್ಥಳದಿಂದ ಡಿಸಿ ಕಚೇರಿವರೆಗೆ ಅಣಕು ಶವಯಾತ್ರೆ ಮೂಲಕ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಸಿದ್ಮಲ್‌ ಮಂಜುನಾಥ್‌,ಪಾಲಿಕೆ ಮಾಜಿ ಸದಸ್ಯರಾದ ಪರ್ವಿನ್‌ಬಾನು, ಬಿ.ಕೆ.ಕೆರೆಕೋಡಪ್ಪ,ಶಿವರಾಜ್‌, ನಾಗಮ್ಮ, ಬೆಣಕಲ್‌ ಬಸವರಾಜಗೌಡ, ಶಂಕರ್‌, ಸಮಿತಿ ಮುಖಂಡರಾದ ಸಿರಿಗೇರಿ ಪನ್ನಾರಾಜ್‌, ಟಿ.ಜಿ. ವಿಠuಲ್‌, ಕೆ.ಎರ್ರಿಸ್ವಾಮಿ,ಕುಡತಿನಿ ಶ್ರೀನಿವಾಸ್‌, ಬಿ.ಎಂ.ಪಾಟೀಲ್‌ ಸೇರಿದಂತೆ ಹಲವಾರು ಜನರು ಇದ್ದರು.

ದೆಹಲಿ ಹೋರಾಟ ಬೆಂಬಲಿಸಿ ಪ್ರತಿಜ್ಞಾ  ದಿನ ಆಚರಣೆ :

ಬಳ್ಳಾರಿ: ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ತಾಲೂಕಿನ ಕೋಳೂರು,ಶ್ರೀಧರಗಡ್ಡೆ, ಕೊರ್ಲಗುಂದಿ ಗ್ರಾಮಗಳಲ್ಲಿರೈತ ಕೃಷಿ ಕಾರ್ಮಿಕ ಸಂಘಟನೆಯಿಂದಶುಕ್ರವಾರ ಪ್ರತಿಜ್ಞಾ ದಿನವನ್ನು ಆಚರಿಸಲಾಯಿತು.

ಕೇಂದ್ರ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ”ಮರಣಶಾಸನವಾದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು.ಕಾರ್ಪೋರೇಟ್‌ ಮಾಲೀಕರ ಪರವಾದಕಾನೂನನ್ನು ರದ್ದುಪಡಿಸಬೇಕು ಎಂದುಒತ್ತಾಯಿಸಿ, ಅಂಬಾನಿ-ಅದಾನಿಗಳಏಜೆಂಟ್‌ ಮೋದಿ ಸರ್ಕಾರಕ್ಕೆ, ಕೇಂದ್ರಸರ್ಕಾರದ ಹಠಮಾರಿ ಧೋರಣೆಗೆ  ಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ಕಾಯ್ದೆಗಳನ್ನು ಸಂಪೂರ್ಣ ವಾಪಸ್‌ ತೆಗೆದುಕೊಳ್ಳುವವರೆಗೂ ಹೋರಾಟವನ್ನುತೀವ್ರಗೊಳಿಸುವುದಾಗಿ ಇದೇ ವೇಳೆ ರೈತರುಪ್ರತಿಜ್ಞೆ ಮಾಡಿದರು. ಸಂಘಟನೆಯ ಜಿಲ್ಲಾಸಮಿತಿ ಸದಸ್ಯ ಸೋಮಶೇಖರ್‌ ಗೌಡಮಾತನಾಡಿ, ದೇಶದ ಪ್ರಜ್ಞಾವಂತ ಜನರುಕೇಂದ್ರ ಬಿಜೆಪಿ ಸರ್ಕಾರದ ಕುತಂತ್ರಗಳನ್ನುಸೋಲಿಸಿ, ರೈತರ ನ್ಯಾಯಸಮ್ಮತಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ತೀವ್ರಗೊಳಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಆರ್‌.ಕೆ.ಎಸ್‌ ಜಿಲ್ಲಾಕಾರ್ಯದರ್ಶಿ ಈ. ಹನುಮಂತಪ್ಪ, ಜಿಲ್ಲಾ ಮುಖಂಡರು ಗೋವಿಂದ್‌, ಪಂಪಾಪತಿ, ಬಸಣ್ಣ, ಅಂಜಿನೇಯ ಇದ್ದರು.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.