ಸಿಪಿಐಎಂ ಕಾರ್ಯಕರ್ತರಿಂದ ಪ್ರತಿಭಟನೆ
Team Udayavani, Feb 9, 2019, 6:36 AM IST
ಹೊಸಪೇಟೆ: ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುವ ಸರ್ಕಾರ ಕ್ರಮವನ್ನು ಖಂಡಿಸಿ ಸಿಪಿಐಎಂ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಮಾತೃ ಭಾಷೆಯಲ್ಲಿ ಆಗತಾನೆ ಬೆರಗಿನಿಂದ ಹೊರ ಜಗತ್ತನ್ನು ನೋಡುವ, ಯೋಚಿಸುವ ಎಳೆಯ ಮಗುವಿನ ಮೇಲೆ ತನ್ನದಲ್ಲದ ತನ್ನ ಪರಿಸರದಲ್ಲಿಲ್ಲದ ಅನ್ಯ ಭಾಷೆಯಲ್ಲಿ ವಿಷಯವನ್ನು ಗ್ರಹಿಸುವಂತೆ ಒತ್ತಡ ಹೇರುವುದು, ಆ ಮಗುವಿನ ಮಾನಸಿಕ ಪರಿಸರದ ವಿಕಾಸದ ಮೇಲೆ ಅಹಿತಕರ ಪರಿಣಾಮ ಬೀರುತ್ತದೆಂಬುದು ಜಗತ್ತಿನ ಹಲವು ಅಧ್ಯಯನಗಳು ಹೇಳುತ್ತಿರುವಾಗ ಸರಕಾರದ ಈ ನಡೆ ಸಾಧುವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಮುಂದಾಗಿರುವ ನಿರ್ಧಾರ ಹಿಂಪಡೆಯ ಬೇಕು.ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ನಿರ್ಧಾರ ಹಿಂಪಡೆದು ಶಾಲೆಗಳಿಗೆ ಉತ್ತೇಜನ ನೀಡುವುದಕ್ಕೆ ಪ್ರಾತಿನಿಧ್ಯ ವಹಿಸಬೇಕು. ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಕಾಲೇಜು ತೆರೆಯಲು ಕ್ರಮ ವಹಿಸಬೇಕು. ಅನುದಾನಿತ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ನಿಯಂತ್ರಿಸಬೇಕೆಂದು ಒತ್ತಾಯಿಸಿದರು. ಮುಖಂಡರಾದ ಎ.ಕರುಣಾನಿಧಿ, ಆರ್.ಭಾಸ್ಕರ್‌ರೆಡ್ಡಿ, ಎಂ.ಜಂಬಯ್ಯ ನಾಯಕ, ಕೆ.ನಾಗರತ್ನಮ,್ಮ ಯಲ್ಲಾಲಿಂಗ, ಎಂ.ಗೋಪಾಲ, ಕಲ್ಯಾಣಯ್ಯ, ಕೆ.ನಾಗರತ್ನಮ್ಮ, ಶಕುಂತಲಮ್ಮ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.