ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ
Team Udayavani, Feb 25, 2020, 1:05 PM IST
ಕುರುಗೋಡು: ಸಮೀಪದ ಎಮ್ಮಿಗನೂರು ವ್ಯಾಪ್ತಿಯಲ್ಲಿ ನಿತ್ಯ ವಿದ್ಯಾರ್ಥಿಗಳಿಗೆ ಬಸ್‌ಗಳ ಅನುಕೂಲವಿಲ್ಲದ ಕಾರಣ ಕೂಡಲೇ ಬಸ್ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ದಿಢೀರನೆ ಎಮ್ಮಿಗನೂರು ಗ್ರಾಮದ ಎಸ್.ಎಚ್. ಮುಖ್ಯ ರಾಜ್ಯ ರಸ್ತೆಯಲ್ಲಿ ಈಶಾನ್ಯ ಸಾರಿಗೆ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಈ ವೇಳೆ ಶಾಲಾ- ಕಾಲೇಜ್ ವಿದ್ಯಾರ್ಥಿಗಳು ಮಾತನಾಡಿ, ಈಗಾಗಲೇ ಕೆಎಸ್‌ಆರ್‌ಟಿಸಿ ಇಲಾಖೆ ಅಧಿಕಾರಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಒದಗಿಸುವಂತೆ ಅನೇಕ ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಬಸ್‌ಗಳು ಸರಿಯಾದ ಸಮಯಕ್ಕೆ ಬರದೆ ಇರುವುದರಿಂದ ವಿದ್ಯಾರ್ಥಿಗಳ ತರಗತಿಗಳು ಮಿಸ್ ಆಗುತ್ತಿದ್ದು ಶಿಕ್ಷಣದಿಂದ ದೂರ ಉಳಿಯುವಂತಾಗಿದೆ. ಅಲ್ಲದೆ ಈಗಾಗಲೇ ಶಾಲೆ-ಕಾಲೇಜ್ ಶೈಕ್ಷಣಿಕ ವರ್ಷ ಕೊನೆ ಹಂತದಲ್ಲಿದ್ದು ಪರೀಕ್ಷೆಗಳು ಕೂಡ ಸಮೀಪಿಸುತ್ತಿವೆ.
ಇನ್ನೂ ವ್ಯಾಸಂಗಕ್ಕೆ ಗ್ರಾಮದಿಂದ ಬೆಳಗ್ಗೆ ಕುರುಗೋಡು-ಹಾಗೂ ಬಳ್ಳಾರಿ ಮಾರ್ಗದ ವ್ಯಾಪ್ತಿಯಲ್ಲಿ ಹೋಗುವ ವಿದ್ಯಾರ್ಥಿಗಳು ಉನ್ನತ್ತ ವ್ಯಾಸಾಂಗಕ್ಕೆ ಹೋಗಲು ಬಸ್‌ಗಳೇ ಇಲ್ಲವಾಗಿದೆ. ಈ ಮಾರ್ಗದಲ್ಲಿ ನಿತ್ಯ ಶಾಲಾ ಕಾಲೇಜುಗೆ ನೂರಾರು ಗ್ರಾಮೀಣ ಭಾಗದ ವಿಧ್ಯಾರ್ಥಿಗಳು ಹೋಗುತ್ತಾರೆ. ಆದ್ದರಿಂದ ವಿಧ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿ ಇನ್ನೂ ಹೆಚ್ಚಿನ ಸಾರಿಗೆ ವ್ಯವಸ್ಥೆ ಮಾಡಬೇಕು ಇಲ್ಲವಾದರೆ ಇದೆ ಸಮಸ್ಯೆ ಮುಂದುವರೆದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಶಾಲಾ- ಕಾಲೇಜು ವಿಧ್ಯಾರ್ಥಿಗಳಾದ ಎಂ.ರಾಜಶೇಖರ, ದೇವರಾಜ.ಕೆ, ಜಗ ದೀಶ, ಸೌದ್ರಿ ಬಸವರಾಜ, ಜಡೇಮ್ಮ, ಸಿ. ರಾಜಮ್ಮ, ಕೆ.ವಿ.ರಾಜು, ಬಸವರಾಜು ಎಂ., ಶೇಕ್ಷವಲಿ, ಜೆ.ಚಂದ್ರು, ಪಾಂಡುರಂಗ, ಮುಖಂಡರಾದ ಪಿಗ್ನಿಶರಣ ಬಸವನಗೌಡ, ನೆಲ್ಲುಡಿ, ರಾಮಚಂದ್ರಾಪುರ ಕ್ಯಾಂಪ್, ಕೋಟ್ಟಾಲ್, ಗುತ್ತಿಗನೂರು, ಶಾಂತಿನಗರ, ಬಳ್ಳಾಪುರ ಗ್ರಾಮದ ನೂರಾರು ವಿದ್ಯಾರ್ಥಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.