ಮೂಲ ಸೌಕರ್ಯಕ್ಕಾಗಿ ನಗರಸಭೆ ಎದುರು ಪ್ರತಿಭಟನೆ
Team Udayavani, Aug 4, 2019, 12:39 PM IST
ಹೊಸಪೇಟೆ: ಮೂಲಭೂತ ಸೌಲಭ್ಯಗಳಿಗಾಗಿ ಆಗ್ರಹಿಸಿ, ಏಳನೇ ವಾರ್ಡ್ ನಿವಾಸಿಗಳು ನಗರಸಭೆ ಎದುರು ಪ್ರತಿಭಟನೆ ನಡೆಸಿದರು.
ಹೊಸಪೇಟೆ: ಮೂಲಭೂತ ಸೌಲಭ್ಯಗಳಿಗಾಗಿ ಆಗ್ರಹಿಸಿ ಡಿವೈಎಫ್ಐ ತಾಲೂಕು ಘಟಕದ ನೇತೃತ್ವದಲ್ಲಿ ಏಳನೇ ವಾರ್ಡು ನಿವಾಸಿಗಳು ನಗರಸಭೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಪಾಂಡುರಂಗ ಕಾಲೋನಿ, ಅನಂತಶಯನಗುಡಿ, ಎಂ.ಪಿ.ಪ್ರಕಾಶ ನಗರ, ಸಾಯಿ ಕಾಲೋನಿ, ಶ್ರೀರಾಮ ನಗರ ಪ್ರದೇಶಗಳಲ್ಲಿ ಸಮರ್ಪಕ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು. ನಿವೇಶನರಹಿತರಿಗೆ ನಗರಸಭೆ ಕೂಡಲೇ ನಿವೇಶನ ನೀಡಬೇಕು. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ ವಿವರ ಪ್ರಕಟಣೆ ಹೊರಡಿಸಬೇಕು. ನಿವೇಶನಕ್ಕಾಗಿ ಅರ್ಜಿ ಹಾಕದೇ ಉಳಿದ ಅರ್ಜಿದಾರ ಅರ್ಜಿ ಸ್ವೀಕಾರ ಮಾಡಬೇಕು. ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿ ಅಶ್ರಯ ಯೋಜನೆ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಬೇಕು. ಪಾಂಡುರಂಗ ಕಾಲೋನಿ, ಅನಂತಶಯನಗುಡಿ, ಎಂ.ಪಿ.ಪ್ರಕಾಶ ನಗರ, ಸಾಯಿ ಕಾಲೋನಿ, ಶ್ರೀರಾಮ ನಗರ ಪ್ರದೇಶಗಳಿಗೆ ಡ್ಯಾಂ ನೀರು ಪೂರೈಕೆಗಾಗಿ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನ ಹಾಗೂ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ನಡೆಯುತ್ತಿರುವ ಯುಜಿಡಿ ಕಾಮಗಾರಿಯಿಂದ ಅಗೆದು ಬಿಟ್ಟ ರಸ್ತೆಗಳನ್ನು ಮರು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು.
ಈ ಕುರಿತು ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು. 2017-18 ನೇ ಸಾಲಿನಲ್ಲಿ ಆಶ್ರಯ ಯೋಜನೆಯಡಿಯಲ್ಲಿ ಅರ್ಜಿ ಹಾಕಿದ ಪಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಅನುಮತಿ ಪತ್ರ ನೀಡಬೇಕು.ಅನಂತಶಯನ ಗುಡಿ ಹಾಗೂ ನಾಗೇನಹಳ್ಳಿ ರಸ್ತೆಯಲ್ಲಿರುವ ಸಾಮೂಹಿಕ ಶೌಚಾಲಯ ದುರಸ್ತಿಗೊಳಿಸಬೇಕು. ಪಾಂಡುರಂಗ ಕಾಲೋನಿ ಮಹಿಳಾ ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಮಾಡಬೇಕು. ಪಾರಂ-3 ಗಾಗಿ ನಾಗರಿಕರನ್ನು ಅಲೆದಾಡಿಸದೇ ನಿಗದಿತ ಸಮಯದಲ್ಲಿ ಒದಗಿಸಬೇಕು.ಹಂದಿ-ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬೇಕು. ಅನಂತಶಯನ ಗುಡಿ ಬೈಪಾಸ್ ರಸ್ತೆ ಬೀದಿ ದೀಪಗಳನ್ನು ಸರಿಪಡಿಸಬೇಕು.ಸಾರ್ವಜನಿಕ ರುದ್ರಭೂಮಿ ಸ್ವಚ್ಛಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಡಿವೈಎಫ್ಐ ತಾಲ್ಲೂಕು ಘಟಕದ ಮುಖಂಡರಾದ ಬಿಸಾಟಿ ಮಹೇಶ್, ಕಲ್ಯಾಣಯ್ಯ, ಕಿನ್ನಾಳ್ ಹನುಮಂತಪ್ಪ, ಈ ಮಂಜುನಾಥ, ಬಂಡೆ ತಿರುಕಪ್ಪ, ಹನುಮಾನಾಯ್ಕ, ರಾಜಚಂದ್ರಶೇಖರ್, ಸೂರ್ಯಕಿರಣ ಹಾಗೂ ನಿಂಗಪ್ಪ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.