ಪ್ರವರ್ಗ-1ರ ವಿದ್ಯಾರ್ಥಿಗಳಿಗೂ ಸೌಲಭ್ಯ ನೀಡಿ

ಪ್ರವರ್ಗ 1 ರ ಜಾತಿಗೆ ಸಚಿವ ಸ್ಥಾನ ನೀಡಿ ಮುನ್ನೆಲೆಗೆ ತನ್ನಿ: ಮೌಲಾಲಿ

Team Udayavani, Apr 30, 2022, 3:48 PM IST

ballary

ಬಳ್ಳಾರಿ: ಶಾಲಾ-ಕಾಲೇಜು ದಾಖಲಾತಿ ವೇಳೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಪ್ರವರ್ಗ-1 ವ್ಯಾಪ್ತಿಯಲ್ಲಿ ಬರುವ ಜಾತಿಗಳ ವಿದ್ಯಾರ್ಥಿಗಳಿಗೆ ನೀಡಬೇಕು. ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿ ಸಮುದಾಯವನ್ನು ರಾಜಕೀಯವಾಗಿ ಮುನ್ನೆಲೆಗೆ ತರಬೇಕು ಎಂದು ರಾಜ್ಯ ಪ್ರವರ್ಗ 1ರ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ.ವಿ. ಲೋಕೇಶಪ್ಪ, ಗಂಗಾಮತಸ್ಥ ಸಂಘದ ರಾಜ್ಯಾಧ್ಯಕ್ಷ ಮೌಲಾಲಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 90 ಕ್ಷೇತ್ರಗಳಲ್ಲಿ ಮತ್ತು 6 ಲೋಕಸಭೆ ಕ್ಷೇತ್ರಗಳಲ್ಲಿ ಪ್ರವರ್ಗ -1 ಜಾತಿಗಳ ಮತದಾರರೇ ನಿರ್ಣಾಯಕರಾಗಿದ್ದಾರೆ. ಈ ಜಾತಿಗಳ ಜನರು ಸಾಮಾಜಿಕ, ಶೈಕ್ಷಣಿಕವಾಗಿ, ರಾಜಕೀಯವಾಗಿ ಒಗ್ಗೂಡಿ ಸಂಘಟಿತರಾದಲ್ಲಿ ಸುಮಾರು 32 ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮತದಾರರಾಗಲಿದ್ದು, ಚುನಾವಣೆಯಲ್ಲಿ ಸ್ಪ ರ್ಧಿಸಿ ಸ್ವಂತ ಬಲದಿಂದ ಗೆಲ್ಲುವ ಸಾಧ್ಯತೆಯಿದೆ. ಹಾಗಾಗಿ ಈ ಜಾತಿಗಳಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜಕೀಯವಾಗಿ ಮುನ್ನೆಲೆಗೆ ಬರಲು ಅವಕಾಶ ಕಲ್ಪಿಸಬೇಕು ಎಂದವರು ಕೋರಿದರು.

ಶಿಕ್ಷಣದಲ್ಲಿ ಎಸ್ಸಿ, ಎಸ್ಟಿ ಜಾತಿಗಳಿಗೆ ಸಿಗುವ ಸೌಲಭ್ಯವನ್ನು ಪ್ರವರ್ಗ-1 ಜಾತಿಗಳ ವಿದ್ಯಾರ್ಥಿಗಳಿಗೂ ಕಲ್ಪಿಸಬೇಕು. ಯಾವುದೇ ಆದಾಯದ ಮಿತಿ ವಿಧಿಸಬಾರದು. ರಾಜ್ಯದ ಎಲ್ಲ ವಿವಿಗಳಲ್ಲಿ ಪ್ರವರ್ಗ-1 ಜಾತಿಗಳ ಕೋಶವನ್ನು ಮರು ಸ್ಥಾಪಿಸಿ ವಿದ್ಯಾರ್ಥಿ ನಿಲಯವನ್ನು ಪುನಾರಂಭಿಸಬೇಕು. ಅವುಗಳ ಮೇಲ್ವಿಚಾರಣೆ ಮತ್ತು ಉಸ್ತುವಾರಿಗಾಗಿ ನೋಡಲ್‌ ಅಧಿಕಾರಿಯನ್ನು ನೇಮಿಸಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪ್ರತ್ಯೇಕ ಮೀಸಲಾತಿ ಸೌಲಭ್ಯ ನೀಡಬೇಕು. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ 1 ಕೋಟಿಗೂ ಹೆಚ್ಚಿರುವ 95 ಜಾತಿಗಳು ಮತ್ತು 376 ಉಪಜಾತಿಗಳಿರುವ ಪ್ರವರ್ಗ 1ರ ಜನರಿಗೆ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಶೇ. 4ರಷ್ಟು ಮಾತ್ರ ಮೀಸಲಾತಿ ದೊರೆಯುತ್ತಿದ್ದು, ಶೇ. 8ಕ್ಕೆ ಹೆಚ್ಚಿಸಬೇಕು. ಬಿಜೆಪಿ ಸರ್ಕಾರದಲ್ಲಿ ಪ್ರವರ್ಗ-1ರ ಜಾತಿಗಳ ಇಬ್ಬರು ಶಾಸಕರಿದ್ದು, ಅವರಿಗೆ ಸಚಿವ ಸಂಪುಟದ ವಿಸ್ತರಣೆಯಲ್ಲಿ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು. ಪ್ರವರ್ಗ-1ರ ಅಭಿವೃದ್ಧಿ ನಿಗಮಗಳಿಗೆ ಪ್ರತ್ಯೇಕವಾಗಿ ತಲಾ 100 ಕೋಟಿ ರೂ. ಅನುದಾನ ಮತ್ತು ಅಲೆಮಾರಿ, ಅಲೆ ಅಲೆಮಾರಿ ನಿಗಮಕ್ಕೆ 300 ಕೋಟಿ ರೂ. ಅನುದಾನ ನೀಡಬೇಕು ಸೇರಿದಂತೆ ಇನ್ನಿತರೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ತಿಮ್ಮಪ್ಪ ಯಾದವ್‌, ಚಿದಾನಂದಪ್ಪ, ಧನರಾಜ್‌, ಸಂಘಟನಾ ಕಾರ್ಯದರ್ಶಿ ಸೂರ್ಯ ಪ್ರಕಾಶ್‌ ಕೋಲಿ ಇತರರಿದ್ದರು.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.